CHITRADURGA NEWS | 13 DECEMBER 2025
ಚಿತ್ರದುರ್ಗ: ಪ್ರಸ್ತುತ ಆಧುನಿಕ ಜೀವನದ ವ್ಯವಸ್ಥೆಯಲ್ಲಿ ಗ್ರಾಮೀಣ ಸೊಗಡಿನ ಜಾನಪದ ಪರಂಪರೆ ಕಣ್ಮರೆಯಾಗುತ್ತಿದೆ ಎಂದು ಎಡಿಸಿ ಕುಮಾರಸ್ವಾಮಿ ವಿಷಾದಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 13 | ಹತ್ತಿ ರೇಟ್ ಎಷ್ಟಿದೆ?
ನಗರದ ಬಾಲಕರ ಸರ್ಕಾರಿ ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ಶುಕ್ರವಾರ ಆಯೋಜಿಸಿದ್ದ ಚಿತ್ರದುರ್ಗ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇತ್ತೀಚೆಗೆ ಹಳ್ಳಿಯ ಸೊಗಡಿನ ವೀರಗಾಸೆ, ಬಯಲಾಟ, ಸೋಬಾನೆ ಪದ, ಜಾನಪದ ನೃತ್ಯ ಕಣ್ಮರೆಯಾಗುತ್ತಿದ್ದು ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಮೂಲಕ ಮುನ್ನಲೆಗೆ ತರುತ್ತಿರುವುದು ಸಂತಸದ ವಿಷಯವಾಗಿದೆ.
ವಿದ್ಯಾರ್ಥಿಗಳು ಕೇವಲ ಪಠ್ಯ ವಿಷಯಕ್ಕೆ ಮಾತ್ರ ಸೀಮಿತವಾಗದೆ ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ನಮ್ಮ ಹಿರಿಯರ ಆಚರಣೆಗಳು, ಪರಂಪರೆ, ಸಂಸ್ಕೃತಿ ಪರಿಚಯವಾಗುತ್ತದೆ. ಇದರಿಂದ ಗ್ರಾಮೀಣ ಜನರ ಜೀವನ ಮೌಲ್ಯಗಳು ಪರಿಚಯವಾಗುತ್ತವೆ ಎಂದರು.
ಇದನ್ನೂ ಓದಿ: ಬ್ಯಾಂಕುಗಳ ಬಳಿ ಹೊಂಚು ಹಾಕಿ ದೋಚುತ್ತಿದ್ದವನ ಬಂಧನ | 4 ಲಕ್ಷ ರೂ. ನಗದು ವಶಕ್ಕೆ
ಡಿಡಿಪಿಐ ಎಂ.ಆರ್. ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಯಲ್ಲಿ ನಡೆಸುವ ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಸ್ಪರ್ಧಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಆರೋಗ್ಯಕರ ಸ್ಪರ್ಧಾ ಮನೋಭಾವನೆ, ಸಹಕಾರ, ಹೊಂದಾಣಿಕೆ ಗುಣ ಬೆಳೆಸಿಕೊಳ್ಳಲು ಅನುಕೂಲವಾಗುತ್ತದೆ. ಜಿಲ್ಲಾಮಟ್ಟ ಮತ್ತು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಜಿಲ್ಲೆಯ ಹೆಸರನ್ನು ರಾಜ್ಯಮಟ್ಟದಲ್ಲಿ ಕಂಗೊಳಿಸುವಂತೆ ಮಾಡಬೇಕು ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಗಿರಿಜ ಮಾತನಾಡಿ, ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿರುವುದು ಸಂತೋಷ ತಂದಿದೆ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಮಾತುಗಾರಿಕೆ, ಅಭಿವ್ಯಕ್ತಿ ಕೌಶಲ್ಯ, ಜ್ಞಾಪಕ ಶಕ್ತಿ ವೃದ್ಧಿಸಿಕೊಳ್ಳಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಪೂರಕವಾಗಿದೆ ಎಂದರು.
ಇದನ್ನೂ ಓದಿ: ಅಧಿವೇಶನದಲ್ಲಿ ಭದ್ರಾ ಮೇಲ್ದಂಡೆ ಬಿಸಿ ಬಿಸಿ ಚರ್ಚೆ | ಅನುದಾನ ಬರುತ್ತೋ ಇಲ್ಲವೋ ಗೊತ್ತಿಲ್ಲ, ಚರ್ಚೆಯಂತೂ ಆಯ್ತು
ನೋಡಲ್ ಅಧಿಕಾರಿ ಕೆ.ಆರ್. ಲೋಕೇಶ್, ಸ.ನೌ.ಸಂ.ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ, ಜಿ.ಪ್ರಾ.ಶಾ.ಶಿ.ಸಂ.ಜಿಲ್ಲಾಧ್ಯಕ್ಷ ಮಹಾಂತೇಶ್, ಪ್ರೌಢಶಾಲಾ ಶಿ.ಸಂ.ತಾಲೂಕು ಅಧ್ಯಕ್ಷ ಬಸವರಾಜ್, ಪ್ರಾ.ಶಾ.ಸಂ. ತಾಲೂಕು ಅಧ್ಯಕ್ಷ ಕೆಂಚಪ್ಪ, ವಿಷಯ ಪರಿವೀಕ್ಷಕ ಪ್ರಶಾಂತ್, ರಂಗನಾಯ್ಕ್, ಬಿ.ಆರ್.ಸಿ ಸಂಪತ್‌ಕುಮಾರ್, ಸ.ನೌ.ರಾ.ಪರಿಷತ್ ಸದಸ್ಯರಾದ ರಾಜಪ್ಪ, ಹನುಮಂತಪ್ಪ, ವಿಮಲಾಕ್ಷಿ, ಮಲ್ಲಿಕಾರ್ಜುನ್, ಬೈರೇಶಿ, ರೂಪ, ಉಮೇಶಯ್ಯ, ಮೂರ್ತಾಚಾರ್, ರವೀಂದ್ರನಾಥ್, ವಿದ್ಯಾ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
