
CHITRADURGA NEWS | 12 DECEMBER 2025
ಚಿತ್ರದುರ್ಗ: ಸರ್ಕಾರಿ ನೌಕರರು ಕಚೇರಿಗೆ ಕೆಲಸದ ನಿಮಿತ್ತ ಬರುವ ಸಾರ್ವಜನಿಕರ ಸೇವೆಗೆ ಮೀಸಲಿರಬೇಕೆಂದು ರಾಷ್ಟ್ರೀಯ ಹೆದ್ದಾರಿ ವಲಯದ ನಿವೃತ್ತ ಮುಖ್ಯ ಇಂಜಿನಿಯರ್ ಕೆ.ಜಿ.ಜಗದೀಶ್ ಕರೆ ನೀಡಿದರು.
ಇದನ್ನೂ ಓದಿ: ಕಂಟಕವಾಗುತ್ತಿರುವ ಟ್ರಾನ್ಸ್ಫಾರ್ಮರ್ | ಸ್ಥಳಾಂತರಿಸುವಂತೆ ಮನವಿ
ಜಿಲ್ಲಾ ಗುತ್ತಿಗೆದಾರರ ಸಂಘ, ಲೋಕೋಪಯೋಗಿ, ಯೋಜನಾ, ಕುಡಿಯುವ ನೀರು ಪೂರೈಕೆ ಯೋಜನೆ, ಪಂಚಾಯತ್ರಾಜ್ ಇಂಜಿನಿಯರಿಂಗ್, ಸಣ್ಣ ನೀರಾವರಿ, ರಾಷ್ಟ್ರೀಯ ಹೆದ್ದಾರಿ ವಿಭಾಗಗಳು, ನಿರ್ಮಿತಿ ಕೇಂದ್ರ ಇವುಗಳ ಸಹಯೋಗದೊಂದಿಗೆ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಅಧಿಕಾರವಿರುವುದು ದರ್ಪ ತೋರುವುದಕ್ಕಲ್ಲ ಎನ್ನುವುದನ್ನು ನಾನು ಸೇವೆಗೆ ಸೇರಿದಾಗಿನಿಂದಲೂ ಮನವರಿಕೆ ಮಾಡಿಕೊಂಡು ಕೈಲಾದಷ್ಟು ಜನಸೇವೆ ಸಲ್ಲಿಸಿದ್ದೇನೆ.
ಶೇ.1 ರಷ್ಟು ಮಂದಿಗೆ ಮಾತ್ರ ಸರ್ಕಾರಿ ನೌಕರಿ ಸಿಗುತ್ತದೆ. ಉಳಿದವರಿಗೆ ಈ ಅವಕಾಶವಿಲ್ಲ. ನನಗೆ ಜನಸಾಮಾನ್ಯರು ಕೊಟ್ಟ ನೌಕರಿಯನ್ನು ಅವರ ಸೇವೆಗಾಗಿಯೇ ಮುಡುಪಾಗಿಟ್ಟಿದ್ದೆ. ನನ್ನ ಅಧಿಕಾರವಧಿಯಲ್ಲಿ ಎಲ್ಲರ ಪ್ರೀತಿ ವಿಶ್ವಾಸ ಗಳಿಸಿ ಕೆಲವು ತತ್ವ ಸಿದ್ದಾಂತಗಳನ್ನು ಅಳವಡಿಸಿಕೊಂಡು ಕೆಲಸ ಮಾಡಿದ್ದೇನೆ. ನಿವೃತ್ತಿಯ ನಂತರವೂ ಈ ಜಿಲ್ಲೆಗೆ ನನ್ನ ಸೇವೆಯಿರುತ್ತದೆಂದು ಭರವಸೆ ನೀಡಿದರು.
ಇದನ್ನೂ ಓದಿ: ರೈತರ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸಿ | ಕೃಷಿ ಅಧಿಕಾರಿಗಳಿಗೆ ಡಿಸಿ ಸೂಚನೆ
ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ನಿವೃತ್ತ ಅಧೀಕ್ಷಕ ಇಂಜಿನಿಯರ್ ಎಂ.ರಮೇಶ್, ನಿವೃತ್ತಿ ನಂತರ ಜೀವನ ಕಷ್ಟಕರವಾಗಿರುತ್ತದೆ. ಸುಮ್ಮನೆ ಕುಳಿತು ಕಾಲ ಕಳೆಯುವುದು ಬಲು ಬೇಸರ. ಅಭಿವೃದ್ದಿ ಕೆಲಸಗಳಿಗೆ ಇವರ ಕೊಡುಗೆ ಸಾಕಷ್ಟಿದೆ. ಸರ್ಕಾರದಿಂದ ಅನುದಾನ ತಂದು ಅದನ್ನು ಯಾವ ಕಾಮಗಾರಿಗೆ ಹೇಗೆ ಎಷ್ಟು ಬಳಸಬೇಕೆಂಬ ಬುದ್ದಿವಂತಿಕೆಯಿಂದ ಕೆ.ಜಿ.ಜಗದೀಶ್ ಕೆಲಸ ಮಾಡುತ್ತಿದ್ದರು. ನಿವೃತ್ತಿಯ ನಂತರವೂ ಅವರ ಸಲಹೆ ಸಹಕಾರವನ್ನು ಇಂಜಿನಿಯರ್ಗಳು ಪಡೆದುಕೊಳ್ಳುವುದು ಉತ್ತಮ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ಮಾತನಾಡುತ್ತ ಮುಂದಿನ ಯೋಜನೆಗಳ ಬಗ್ಗೆ ನಿಮ್ಮ ಕನಸು ಸಾಕಾರಗೊಳ್ಳಲಿ. ಸಹಾಯಕ ಕಾರ್ಯಪಾಲಕ ಇಂಜಿನಿಯರ್ಗಳನ್ನು ಜೊತೆಯಲ್ಲಿಟ್ಟುಕೊಳ್ಳಿ. ಬಯಲುಸೀಮೆ ಚಿತ್ರದುರ್ಗ ಜಿಲ್ಲೆ ಅಭಿವೃದ್ದಿಗೆ ನಿಮ್ಮ ಸೇವೆ ಸಿಗಲೆಂದು ಕೆ.ಜಿ.ಜಗದೀಶ್ರವರಲ್ಲಿ ಮನವಿ ಮಾಡಿದರು.
ನಿವೃತ್ತ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಂಗನಾಥ್, ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಕೆ.ಮಲ್ಲೇಶಪ್ಪ ಮಾತನಾಡಿದರು.
ಇದನ್ನೂ ಓದಿ: SSC | ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಬಿ.ಎಸ್.ಹರೀಶ್ಕುಮಾರ್, ಕಾರ್ಯಪಾಲಕ ಇಂಜಿನಿಯರ್ ಗಳಾದ ನಾಗರಾಜ್, ಎಲ್.ಹನುಮಂತಪ್ಪ, ಕೆ.ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

