CHITRADURGA NEWS | 15 November 2026
ಚಿತ್ರದುರ್ಗ: ನಗರದ ತಮಕಲ್ಲು ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ಮಾಲಾಧಾರಿ ಅಯ್ಯಪ್ಪಸ್ವಾಮಿಗಳಿಗೆ ನಿತ್ಯ ಅನ್ನಪ್ರಸಾದ ವಿತರಣೆ ಕಾರ್ಯಕ್ರಮಕ್ಕೆ ನ.16ರಂದು ಚಾಲನೆ ನೀಡಲಾಗುವುದು ಎಂದು ಟ್ರಸ್ಟ್ ತಿಳಿಸಿದೆ.
ಇದನ್ನೂ ಓದಿ: ಗಾಯತ್ರಿ ಜಲಾಶಯದ ಬಳಿ ನೂತನ ಗೋಶಾಲೆ | ಜಿಲ್ಲಾಧಿಕಾರಿ ರಮ್ಯಾ ಚಾಲನೆ
ನ.16ರಿಂದ 2027ರ ಜನವರಿ 13ರವರೆಗೆ ಪ್ರತಿದಿನ ಮಧ್ಯಾಹ್ನ 1ರಿಂದ 3ರವರೆಗೆ ಹಾಗೂ ರಾತ್ರಿ 8ರಿಂದ 10ರವರೆಗೆ ಅನ್ನಪ್ರಸಾದ ವಿತರಣೆ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ನ.16ರಂದು ಬೆಳಿಗ್ಗೆ 11ಕ್ಕೆ ಮಹಾಗಣಪತಿ ಹೋಮ ಹಾಗೂ ನವಗ್ರಹ ಪೂರ್ವಕ ಶ್ರೀ ರುದ್ರ ಹೋಮ ನಡೆಯಲಿದ್ದು, ಮಧ್ಯಾಹ್ನ 12.30ಕ್ಕೆ ಪೂರ್ಣಾಹುತಿ ನೆರವೇರಲಿದೆ. ಮಧ್ಯಾಹ್ನ 12.45ಕ್ಕೆ ಬಿ.ಪಿ. ಹನುಮಂತೇಗೌಡ ಅನ್ನಪ್ರಸಾದ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶ್ರೀ ಅಯ್ಯಪ್ಪಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಶರಣ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಇದನ್ನೂ ಓದಿ: ಅಡಿಕೆ ಧಾರಣೆ | ನವೆಂಬರ್ 14 | ಯಾವ ಅಡಿಕೆಗೆ ಎಷ್ಟು ರೇಟ್
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅನ್ನಪ್ರಸಾದ ಸ್ವೀಕರಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ಟ್ರಸ್ಟ್ ಮನವಿ ಮಾಡಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

