Connect with us

ಆಹಾರ ಸುರಕ್ಷತೆ ನೊಂದಣಿ ಕಡ್ಡಾಯ | ಶಾಲೆ, ಹಾಸ್ಟೆಲ್, ಅಂಗನವಾಡಿಳಿಗೆ ಸೂಚನೆ

ಜಿಲ್ಲಾಮಟ್ಟದ ಸಲಹಾ ಸಮಿತಿ ಸಭೆ

ಮುಖ್ಯ ಸುದ್ದಿ

ಆಹಾರ ಸುರಕ್ಷತೆ ನೊಂದಣಿ ಕಡ್ಡಾಯ | ಶಾಲೆ, ಹಾಸ್ಟೆಲ್, ಅಂಗನವಾಡಿಳಿಗೆ ಸೂಚನೆ

CHITRADURGA NEWS | 24 MAY 2024

ಚಿತ್ರದುರ್ಗ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ನಿಯಮ ಹಾಗೂ ನಿಬಂಧನೆಗಳ ಅನುಸಾರವಾಗಿ ಶಾಲೆ, ಅಂಗನವಾಡಿ ಕೇಂದ್ರಗಳು, ಮಹಿಳಾ ಸೇವಾ ಸಂಘಗಳು, ನ್ಯಾಯಬೆಲೆ ಅಂಗಡಿಗಳು, ಆಹಾರ ಪದಾರ್ಥಗಳ ವ್ಯವಹಾರ ನಡೆಸುವ ಔಷಧಿ ಅಂಗಡಿಗಳು, ವಸತಿ ನಿಲಯಗಳು ಆಹಾರ ಸುರಕ್ಷತೆ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಜೂನ್ ಮಾಹೆಯೊಳಗೆ ಶೇ.100ರಷ್ಟು ನೊಂದಣಿ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ಗೋಶಾಲೆಗಳಿಗೆ ನೀರು, ಮೇವು ಪೂರೈಕೆ | ಸಿಎಂಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ಮಾಹಿತಿ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕುರಿತು ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಸಂಬಂಧಪಟ್ಟ ಎಲ್ಲಾ ಇಲಾಖೆಗಳೊಂದಿಗೆ ಕೈಜೋಡಿಸಿ ಆಹಾರ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.

ಇದನ್ನೂ ಓದಿ: ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ | ಕಾಂಗ್ರೆಸ್‌ನಿಂದ ಲೋಕೇಶ್‌ ತಾಳಿಕಟ್ಟೆ ಉಚ್ಚಾಟನೆ

ಹೋಟೆಲ್, ಬೀದಿಬದಿಯ ಆಹಾರ ಪದಾರ್ಥಗಳ ಮಾರಾಟ ಮಾಡುವ ಸ್ಥಳಗಳಿಗೆ ನಿಯಮಿತವಾಗಿ ಭೇಟಿ ನೀಡಿ, ಗುಣಮಟ್ಟ ಹಾಗೂ ಸ್ವಚ್ಚತೆ ಕುರಿತು ತಪಾಸಣೆ ನಡೆಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಾರ್ವಜನಿಕರಿಗೆ ಗುಣಮಟ್ಟದ ಆಹಾರ ಹಾಗೂ ಸುರಕ್ಷತೆಯ ದೃಷ್ಠಿಯಿಂದ ಆಹಾರ ಪಧಾರ್ಥಗಳ ಸಂಗ್ರಹಣೆ, ಮಾರಾಟ, ತಯಾರಿಕೆಯ ಸಂದರ್ಭದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಮಾನದಂಡಗಳನ್ನು ಅನುಸರಿಸಬೇಕು. ಸಾರ್ವಜನಿಕರು ಹಾಗೂ ಸರ್ಕಾರಿ ಅಧಿಕಾರಿಗಳು ಸ್ಪಂದಿಸುವ ಮೂಲಕ ಕಾರ್ಯಕ್ರಮದ ಯಶಸ್ವಿಗೆ ಕೈಜೋಡಿಸಬೇಕು ಎಂದರು.

ಆಹಾರ ಸುರಕ್ಷತೆ ಅಂಕಿತ ಅಧಿಕಾರಿ ಡಾ.ಸಿ.ಎಲ್.ಫಾಲಾಕ್ಷ ಮಾತನಾಡಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ, ನಿಬಂಧನೆ 2011 ಆಗಸ್ಟ್ 5ರಂದು ದೇಶದಾದ್ಯಂತ ಜಾರಿಗೆ ಬಂದಿದೆ. ಆಹಾರ ಸುರಕ್ಷತೆ ಹಿನ್ನಲೆಯಲ್ಲಿ ಇಲಾಖೆವತಿಯಿಂದ ಪರವಾನಗಿ ಮತ್ತು ನೋಂದಣಿ ಕಾರ್ಯ ಮಾಡುತ್ತೇವೆ.

ಇದನ್ನೂ ಓದಿ: ಉಚ್ಚಂಗಿ ಯಲ್ಲಮ್ಮ ದೇವಿಯ ವೈಭವದ ಮೆರವಣಿಗೆ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಚಾಲನೆ

ಆಹಾರ ಸುರಕ್ಷತೆ ನಿಯಮ ಉಲ್ಲಂಘಿಸಿದರೆ ನಿಯಮಾನುಸಾರ ದಂಡ ವಿಧಿಸಲಾಗುತ್ತದೆ. ಜಿಲ್ಲಾ ವ್ಯಾಪ್ತಿಯಲ್ಲಿನ ವಿವಿಧ ಸ್ಥಳಗಳಲ್ಲಿ ಆಹಾರ ಪದಾರ್ಥಗಳ ವ್ಯಾಪಾರಸ್ಥರಿಗೆ ಹಾಗೂ ಗ್ರಾಹಕರಿಗೆ ಆಹಾರ ಸುರಕ್ಷತೆ ಕುರಿತು ಮಾಹಿತಿ ನೀಡಿದೆ ಹಾಗೂ ಉದ್ದಿಮೆ ತಪಾಸಣೆ ನಡೆಸಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಆಹಾರ ಸೇವಿಸುವ ಮಕ್ಕಳ ಸುರಕ್ಷತೆ ಪ್ರಮುಖವಾದದು. ಮಧ್ಯಾಹ್ನದ ಬಿಸಿಯೂಟ ನೀಡುವ ಶಾಲೆಗಳು, ಅಂಗನವಾಗಿ, ವಿವಿಧ ಇಲಾಖೆಗಳ ವಸತಿ ನಿಲಯಗಳು, ಎಲ್ಲಾ ನ್ಯಾಯಬೆಲೆ ಅಂಗಡಿಗಳು, ಎಪಿಎಂಸಿ ಆವರಣದಲ್ಲಿರುವ ಎಲ್ಲಾ ತರಹದ ವ್ಯಾಪಾರಸ್ಥರು ಹಾಗೂ ದಲ್ಲಾಳಿಗಳು, ಆಹಾರ ಪದಾರ್ಥಗಳ ವ್ಯವಹಾರ ನಡೆಸುವ ಔಷಧಿ ಅಂಗಡಿಗಳು, ಬೀದಿ ಬದಿ ವ್ಯಾಪಾರಿಗಳು, ಕಡ್ಡಾಯವಾಗಿ ಆಹಾರ ಸುರಕ್ಷತೆಯ ನೋಂದಣಿ ಮಾಡಿಸಬೇಕು.

ಇದನ್ನೂ ಓದಿ: ಲೋಕಸಭೆ ಚುನಾವಣೆ | ಎಷ್ಟು ಸುತ್ತಿನಲ್ಲಿ ಮತ ಎಣಿಕೆ | ಎಷ್ಟು ಟೇಬಲ್ ಇರಲಿದೆ | ಏಜೆಂಟರೇಷ್ಟು ಗೊತ್ತಾ ?

ಜಿಲ್ಲೆಯಲ್ಲಿ 2225 ಶಾಲೆಗಳಲ್ಲಿ ಈಗಾಗಲೇ 1371 ಶಾಲೆಗಳು ನೋಂದಣಿ ಮಾಡಿಕೊಂಡಿದ್ದು, 1146 ಶಾಲೆಗಳು ನೋಂದಣಿ ಬಾಕಿ ಇದೆ. 2331 ಅಂಗನವಾಡಿ ಕೇಂದ್ರಗಳ ಪೈಕಿ 1367 ಅಂಗನವಾಡಿಗಳು ನೋಂದಣಿಯಾಗಿದ್ದು, 964 ಅಂಗನವಾಡಿಗಳು ಬಾಕಿ ಇವೆ. 607 ನ್ಯಾಯಬೆಲೆ ಅಂಗಡಿಗಳ ಪೈಕಿ 328 ಅಂಗನವಾಡಿಗಳು ನೊಂದಣಿಗೆ ಬಾಕಿ ಇವೆ. ಶಾಲಾ ಮುಖ್ಯ ಶಿಕ್ಷಕರು ಹಾಗೂ ಸಂಬಂಧಪಟ್ಟ ಇಲಾಖೆಯವರು ತಮ್ಮ ಆಧಾರ್ ಕಾರ್ಡ್ ಹಾಗೂ ರೂ.100 ಶುಲ್ಕವನ್ನು ಪಾವತಿಸಿ ತಾಲ್ಲೂಕು ಆಹಾರ ಸುರಕ್ಷತಾಧಿಕಾರಿಗಳಿಂದ ಕಡ್ಡಾಯವಾಗಿ ಆಹಾರ ಸುರಕ್ಷತೆಯ ನೊಂದಣಿ ಮಾಡಿಸಬೇಕು ಎಂದು ಹೇಳಿದರು.

ಮಕ್ಕಳಿಗೆ ಊಟ ತಯಾರಿಸುವ ಬಾಣಿಸಿಗರು ಹಾಗೂ ಬಡಿಸುವವರು ವೈದ್ಯಕೀಯ ಪ್ರಮಾಣ ಪತ್ರ ಪಡೆಯಬೇಕು. ನೀರಿನ ಪರೀಕ್ಷೆ, ಅಡುಗೆಯವರು, ಕೆಲಸಗಾರರಿಗೆ ಕೈಗವಚ, ತಲೆಗವಚ ಧರಿಸಬೇಕು. ಅಡುಗೆ ಸ್ಥಳ ಸ್ವಚ್ಛವಾಗಿರಬೇಕು ಎಂದು ಹೇಳಿದರು.

ಇದನ್ನೂ ಓದಿ: ವಿದ್ಯಾರ್ಥಿನಿಲಯಕ್ಕೆ ಸಚಿವ, ಶಾಸಕರ ದಿಢೀರ್ ಭೇಟಿ | ವಾರ್ಡನ್‌ಗೆ ಕ್ಲಾಸ್

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಸ್ವಾಮಿ, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂದನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version