ಏಪ್ರಿಲ್ ಕೊನೆಯ ವಾರದಿಂದ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆ | ADC ಕುಮಾರಸ್ವಾಮಿ

ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನದ” ಫೋಸ್ಟರ್‍ಗಳನ್ನು ಬಿಡುಗಡೆ ಮಾಡಲಾಯಿತು.

CHITRADURGA NEWS | 19 APRIL 2025

ಚಿತ್ರದುರ್ಗ: ಜಿಲ್ಲೆಯಾದ್ಯಂತ 7ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕಾ ಅಭಿಯಾನ ಇದೇ ಏಪ್ರಿಲ್ 26 ರಿಂದ ಜೂನ್ 09 ರವರೆಗೆ ನಡೆಯಲಿದ್ದು, ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಪಶು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Also Read: ರಾಶಿ ಅಡಿಕೆ ಬೆಲೆ 58 ಸಾವಿರದತ್ತ ದಾಪುಗಾಲು

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ ಅಡಿಯಲ್ಲಿ 7ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಾನುವಾರುಗಳಿಗೆ ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಜೊತೆಗೆ ಚರ್ಮಗಂಟು ರೋಗದ ಲಸಿಕೆಯನ್ನು ನೀಡಲಾಗುತ್ತಿದೆ. ತಪ್ಪದೇ ಜಾನುವಾರುಗಳಿಗೆ ಲಸಿಕೆಯನ್ನು ಹಾಕಿಸಿ, ರೋಗ ಬರದಂತೆ ಜಾನುವಾರುಗಳನ್ನು ರಕ್ಷಿಸಿ, ಆರ್ಥಿಕ ನಷ್ಟ ತಡೆಯಿರಿ ಎಂದು ಹೇಳಿದರು.

ರೈತರು ಕೂಡ ಸರ್ಕಾರದಿಂದ ಏರ್ಪಡಿಸಲಾಗಿರುವ ಈ ವಿಶೇಷ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಲು, ತಮ್ಮ ಜಾನುವಾರುಗಳಿಗೆ ತಪ್ಪದೆ ಲಸಿಕೆ ಹಾಕಿಸುವ ಮೂಲಕ ಸಹಕಾರ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಮನವಿ ಮಾಡಿದರು.

Also Read: APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?

ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಎನ್.ಕುಮಾರ್ ಮಾತನಾಡಿ, ಕಾಲುಬಾಯಿ ರೋಗವು ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗ.

ಇದರಿಂದ ಜಾನುವಾರುಗಳು ಸಾವನ್ನಪ್ಪುವುದಿಲ್ಲವಾದರೂ, ರೈತರಿಗೆ ಆರ್ಥಿಕ ಸಂಕಷ್ಟಗಳನ್ನು ತಂದೊಡ್ಡುತ್ತದೆ. ಹೀಗಾಗಿ ಕಾಲುಬಾಯಿ ರೋಗವನ್ನು ನಿಯಂತ್ರಿಸಿ ನಿರ್ಮೂಲನೆ ಮಾಡಲು ಪ್ರತಿ 6 ತಿಂಗಳಿಗೊಮ್ಮೆ ಈ ರೋಗದ ವಿರುದ್ಧ ಲಸಿಕೆ ಹಾಕಿಸುವುದು ಕಡ್ಡಾಯ ಎಂದರು.

ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಚಿತ್ರದುರ್ಗ ಜಿಲ್ಲೆಗೆ ಕಾಲುಬಾಯಿ ರೋಗ ಲಸಿಕೆಯು ಕೇಂದ್ರ ಸರ್ಕಾರದಿಂದ ಸರಬರಾಜಾಗಿದ್ದು, ಈ ರೋಗದ ವಿರುದ್ಧ ಎಲ್ಲಾ ದನ, ಎಮ್ಮೆ ಮತ್ತು ಕರುಗಳಿಗೆ ಉಚಿತವಾಗಿ ಲಸಿಕಾ ಕಾರ್ಯಕ್ರಮವನ್ನು ಇದೇ ಏಪ್ರಿಲ್ 26 ರಿಂದ ಜೂನ್ 09 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ 1,76,949 ದನ, 78,654 ಎಮ್ಮೆ ಸೇರಿದಂತೆ ಒಟ್ಟು 2,55,603 ಜಾನುವಾರುಗಳಿದ್ದು, 3,17,587 ಡೋಸ್ ಲಸಿಕೆ ಲಭ್ಯವಿರುತ್ತದೆ. ಜಿಲ್ಲೆಯಲ್ಲಿ ಒಟ್ಟು 3,390 ಬ್ಲಾಕ್‍ಗಳನ್ನು ಮಾಡಲಾಗಿದೆ.

Also Read: ಒಬ್ಬ ವ್ಯಕ್ತಿಗೆ ಒಮ್ಮೆ ಚಿಕನ್ ಪೋಕ್ಸ್ ಬಂದ ಮೇಲೆ ಮತ್ತೆ ಬರಬಹುದೇ? ವೈದ್ಯರು ಹೇಳುದ್ದೇನು?

291 ಲಸಿಕಾದಾರರು ಮನೆ ಬಾಗಿಲಿಗೆ ಭೇಟಿ ನೀಡಿ, ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ. ರೈತರು ಲಸಿಕಾ ಸಿಬ್ಬಂದಿಗಳಿಗೆ ಸಹಕರಿಸಿ ತಪ್ಪದೇ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದ “ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನದ” ಫೋಸ್ಟರ್‍ಗಳನ್ನು ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಎನ್.ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಶಿಕ್ಷಣ ಇಲಾಖೆಯ ಚಿದಾನಂದ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಸೇರಿದಂತೆ ಮುಖ್ಯ ಪಶುವೈದ್ಯಾಧಿಕಾರಿಗಳಾದ ಡಾ.ಎನ್.ಗಿರಿರಾಜ್, ಡಾ.ಇಂದ್ರಬಾಯಿ, ಡಾ.ರಂಗಪ್ಪ, ಡಾ.ಕಿರಣ್, ಡಾ.ರಂಗಸ್ವಾಮಿ, ಡಾ.ರೇವಣ್ಣ, ಡಾ.ಹರೀಶ್ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version