
ಚಿತ್ರದುರ್ಗ ನ್ಯೂಸ್.ಕಾಂ: ಡಿ.30 ಮತ್ತು 31ರಂದು ವಾಣಿವಿಲಾಸ ಸಾಗರ ನೀರು ತಾತ್ಕಾಲಿಕ ಸ್ಥಗಿತವಾಗಲಿದೆ.
ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ವಾಣಿವಿಲಾಸ ಸಾಗರ ನೀರು ಸರಬರಾಜು ಯೋಜನೆಯ ಮುಖ್ಯ ಕೊಳವೆ ಮಾರ್ಗ ಮಧ್ಯೆದಲ್ಲಿ ಸಿ.ಐ ಮತ್ತು ಎಂ.ಎಸ್ ಪೈಪ್‍ಲೈನ್‍ಗಳ ಮರು ಜೋಡಣೆ ಕೆಲಸ ಮಾಡಬೇಕಾಗಿದೆ.
ಇದನ್ನೂ ಓದಿ: ಹತ್ತು ಲಕ್ಷ ದರೋಡೆ ಪ್ರಕರಣ | ಒಂದೇ ತಿಂಗಳಲ್ಲಿ ಆರೋಪಿ ಬಂಧನ

ಈ ಹಿನ್ನೆಲೆಯಲ್ಲಿ ವಾಣಿವಿಲಾಸ ಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಡಿ.30 ಮತ್ತು 31 ರಂದು ಸ್ಥಗಿತಗೊಳಿಸಲಾಗುತ್ತದೆ.
ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರನ್ನು ಉಪಯೋಗಿಸಲು ಕೋರಿದೆ.
ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
