ಮುಖ್ಯ ಸುದ್ದಿ
taluk committee; ರೈತ ಸಂಘದ ನೂತನ ತಾಲ್ಲೂಕು ಸಮಿತಿ ರಚನೆ


CHITRADURGA NEWS | 23 AUGUST 2024
ಚಿತ್ರದುರ್ಗ: ನಗರದ ಎ.ಪಿ.ಎಂ.ಸಿ. ರೈತ ಭವನದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ರೈತ ಸಂಘ ಪುಟ್ಟಣ್ಣಯ್ಯ ಬಣದ ತಾಲ್ಲೂಕು ನೂತನ(taluk committee) ಸಮಿತಿಯನ್ನು ರಚಿಸಲಾಯಿತು.
ಕ್ಲಿಕ್ ಮಾಡಿ ಓದಿ: Rain Damage; ಜಿಲ್ಲೆಯಲ್ಲಿ ಹೆಚ್ಚಿನ ಮಳೆ | ಈರುಳ್ಳಿ, ತೋಟಗಾರಿಕೆ ಬೆಳೆ ನಾಶ | ಪರಿಹಾರಕ್ಕೆ ರೈತರ ಆಗ್ರಹ

ತಾಲ್ಲೂಕು ಅಧ್ಯಕ್ಷ ಪ್ರಭು ಇಸಾಮುದ್ರ, ಗೌರವಾಧ್ಯಕ್ಷ ತಿಪ್ಪೇಸ್ವಾಮಿ ಜಾನುಕೊಂಡ, ಕಾರ್ಯಾಧ್ಯಕ್ಷರಾಗಿ ಚಂದ್ರಣ್ಣ ಶಿವನಕೆರೆ, ಕೆಂಚಪ್ಪ ಕಳ್ಳಿರೊಪ್ಪ, ಪ್ರಧಾನ ಕಾರ್ಯದರ್ಶಿಗಳಾಗಿ ಕಾಂತರಾಜ ಹುಣಸೆಕಟ್ಟೆ, ಸಿದ್ದೇಶ ಜಾನುಕೊಂಡ, ಉಪಾಧ್ಯಕ್ಷರುಗಳಾಗಿ ಕರಿಯಪ್ಪ ವಡ್ಡರಸಿದ್ದವ್ವನಹಳ್ಳಿ, ಜೆ.ಎನ್.ಕೋಟೆ ಓಂಕಾರಪ್ಪ, ರಂಗೇಗೌಡ ಹುಣಸೆಕಟ್ಟೆ, ರವಿ ಕೋಗುಂಡೆ, ಕಾರ್ಯದರ್ಶಿಗಳಾಗಿ ಶಂಭುಲಿಂಗಪ್ಪ, ತಿಪ್ಪೇಸ್ವಾಮಿ, ಕರಿಬಸಪ್ಪ, ಹನುಮಂತರೆಡ್ಡಿ.
ಸಂಘಟನಾ ಕಾರ್ಯದರ್ಶಿಯಾಗಿ ನಾಗರಾಜ್‍ನಾಯ್ಕ, ಖಜಾಂಚಿಯಾಗಿ ಮಂಜಣ್ಣ ಶಿವನಕೆರೆ, ಜಿಲ್ಲಾ ಸಮಿತಿಗೆ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಕುಮಾರ ಕಲ್ಲೇನಹಳ್ಳಿ, ಉಪಾಧ್ಯಕ್ಷರಾಗಿ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಯುವ ರೈತ ಸಂಘದ ತಾಲ್ಲೂಕು ಅಧ್ಯಕ್ಷರಾಗಿ ತಿಪ್ಪೇಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮೋಹನ, ಪ್ರಧಾನ ಕಾರ್ಯದರ್ಶಿಯಾಗಿ ಮಾರುತಿ ಇವರುಗಳನ್ನು ನೇಮಕ ಮಾಡಲಾಗಿದೆ.
ಕ್ಲಿಕ್ ಮಾಡಿ ಓದಿ: FDA suspended: ಟೆಂಡರ್ ಪ್ರಕ್ರಿಯೆಯಲ್ಲಿ ಕರ್ತವ್ಯ ಲೋಪ | ಎಫ್‌ಡಿಎ ಅಮಾನತು
ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಮಾತನಾಡಿ, ಹಿರಿಯರ ಮಾರ್ಗದರ್ಶನದಲ್ಲಿ ರೈತರ ಹಿತಕ್ಕಾಗಿ ಅನೇಕ ಹೋರಾಟಗಳನ್ನು ಮಾಡಿದ್ದೇನೆ. ಸಂಘಟನೆಯಲ್ಲಿ ಬೆಳೆಯಲು ಸಾಕಷ್ಟು ಅವಕಾಶಗಳಿವೆ. ಹಾಗಾಗಿ ರೈತರು ಬೇಜವಾಬ್ದಾರಿ ತೋರದೆ ಒಬ್ಬರಿಗೊಬ್ಬರು ಸಹಕಾರ ನೀಡಿದಾಗ ಮಾತ್ರ ಸರ್ಕಾರದಿಂದ ಕೃಷಿಗೆ ಸಿಗುವ ಸೌಲತ್ತುಗಳನ್ನು ಪಡೆದುಕೊಳ್ಳಬಹುದು. ಸಂಘಟನೆಯಲ್ಲಿ ಒಡಕು ಮೂಡಿದರೆ ಸರ್ಕಾರ, ಅಧಿಕಾರಿಗಳು ಹೆದರುವುದಿಲ್ಲ. ಒಗ್ಗಟ್ಟಿನಿಂದ ಇರಬೇಕು ಎಂದು ಹೇಳಿದರು.
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಹೊರಕೇರಪ್ಪ ಮಾತನಾಡಿ, ಜಿಲ್ಲೆಗೆ 284 ಕೋಟಿ ರೂ.ಬೆಳೆ ವಿಮೆ ಬಂದಿದೆ. ಹೆಗಲ ಮೇಲಿರುವ ಹಸಿರು ಶಾಲಿಗೆ ಹೆಚ್ಚಿನ ಜವಾಬ್ದಾರಿಯಿದೆ. ರೈತ ಸಂಘವನ್ನು ಬಲಿಷ್ಟವಾಗಿ ಬೆಳೆಸೋಣ ಎಂದು ನೂತನ ತಾಲ್ಲೂಕು ಸಮಿತಿಯ ಪದಾಧಿಕಾರಿಗಳಿಗೆ ತಿಳಿಸಿದರು.
ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ, ಮಾಜಿ ಅಧ್ಯಕ್ಷ ಬಸ್ತಿಹಳ್ಳಿ ಜಿ.ಸುರೇಶ್‍ಬಾಬು ಸೇರಿದಂತೆ ಅನೇಕ ರೈತ ಮುಖಂಡರುಗಳು ಉಪಸ್ಥಿತರಿದ್ದರು.
