Connect with us

    ಚಿತ್ರದುರ್ಗ ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ ನಿಧನ

    ಮುಖ್ಯ ಸುದ್ದಿ

    ಚಿತ್ರದುರ್ಗ ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ ನಿಧನ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 23 MARCH 2024
    ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದ, ಹಿರಿಯ ನಾಯಕ ಸಿ.ಪಿ.ಮೂಡಲಗಿರಿಯಪ್ಪ (85) ಶನಿವಾರ ಮಧ್ಯಾಹ್ನ ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಮೂರು ದಿನದ ಹಿಂದೆ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದರು.

    ಪುತ್ರ ಶಿರಾ ಕ್ಷೇತ್ರದ ಮಾಜಿ ಶಾಸಕ ಡಾ.ಸಿ.ಎಂ.ರಾಜೇಶ್‌ ಗೌಡ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ‘ನನ್ನ ಪೂಜ್ಯ ಪ್ರೀತೀಯ ಅಪ್ಪಾಜಿ, ಚಿತ್ರದುರ್ಗ ಕ್ಷೇತ್ರದ ಮಾಜಿ ಲೋಕಸಭಾ ಸದಸ್ಯರು, ಶಿರಾ ವಿಧಾನ ಸಭಾ ಕ್ಷೇತ್ರದ ಮಾಜಿ ಸದಸ್ಯರು, ನನ್ನ ಬಾಳಿನ ದೀಪ ಶ್ರೀ ಸಿ.ಪಿ.ಮೂಡಲಗಿರಿಯಪ್ಪ ರವರು ದೈವದೀನರಾದರೆಂದು ತಿಳಿಸಲು ವಿಷಾಧಿಸುತ್ತೇನೆ’ ಎಂದು ಬರೆದು ಪೋಸ್ಟ್‌ ಮಾಡಿದ್ದಾರೆ.

    ಕ್ಲಿಕ್ ಮಾಡಿ ಓದಿ: ಹೊಸದುರ್ಗ, ಹೊಳಲ್ಕೆರೆಯಲ್ಲೂ ಬೋರ್‌ವೆಲ್‌ ಕೊರೆಯಲು ದರ ನಿಗದಿ | ಜಿಎಸ್‌ಟಿ ಬಿಲ್‌ ಕೊಡಲು ತಾಕೀತು

    ಸಿ.ಪಿ.ಮೂಡಲಗಿರಿಯಪ್ಪ ಅವರು ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆ ಆಗಿದ್ದರು. ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿರತಹಳ್ಳಿ ಗ್ರಾಮದವರಾಗಿದ್ದು, ಜೂನ್‌ 24, 1940ರಂದು ಜನಿಸಿದರು. ಇವರು ತಮ್ಮ ಶಿಕ್ಷಣವನ್ನು ಸರ್ಕಾರಿ ಕಾನೂನು ಕಾಲೇಜು ಮತ್ತು ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು (ಕರ್ನಾಟಕ)ದಿಂದ ಬಿಎ ಮತ್ತು ಬಿಎಲ್‌ನಲ್ಲಿ ಪೂರ್ಣಗೊಳಿಸಿದರು.

    1989-1991ರಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದರು. ನಂತರ 1991-1996ರಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ 2ನೇ ಬಾರಿಗೆ ಸಂಸದರಾಗಿ ಆಯ್ಕೆಯಾದರು. 1979 ಮತ್ತು 1982 ಜಿಲ್ಲಾ ಕಾಂಗ್ರೆಸ್ ಸಮಿತಿ (ಇಂದಿರಾ) ಡಿಸಿಸಿ (ಐ), ಕರ್ನಾಟಕ ಪ್ರಧಾನ ಕಾರ್ಯದರ್ಶಿಯಾಗಿದ್ದರು. 1979 ಮತ್ತು 1989 ಕರ್ನಾಟಕದಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ (ಇಂದಿರಾ) ಪಿಸಿಸಿ (ಐ) ಕಾನೂನು ಕೋಶದ ಅಧ್ಯಕ್ಷರಾಗಿದ್ದರು.

    ಕ್ಲಿಕ್ ಮಾಡಿ ಓದಿ: ಉಚಿತ ಕಂಪ್ಯೂಟರ್‌ ತರಬೇತಿ | ಬೇಸಿಗೆ ಶಿಬಿರ

    ನಂತರ 1980 ರಲ್ಲಿ ಕರ್ನಾಟಕ ಸರ್ಕಾರದಲ್ಲಿ ಸಂವಿಧಾನ ತಿದ್ದುಪಡಿ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಇದಾದ ಬಳಿಕ 1985 ಮತ್ತು 1989 ಸಿರಾ ಕ್ಷೇತ್ರದ ವಿಧಾನಸಭಾ ಸದಸ್ಯರಾದರು. ಜೊತೆಗೆ ಅಧೀನ ಶಾಸನ ಸಮಿತಿಯ ಸದಸ್ಯರಾಗಿ ಕರ್ತವ್ಯ ನಿರ್ವಹಿಸಿದರು. 1989 ಹಾಗೂ 1991 ಚಿತ್ರದುರ್ಗದಿಂದ 9ನೇ ಲೋಕಸಭೆಯಲ್ಲಿ ಸಂಸದರಾಗಿ ಆಯ್ಕೆಯಾದರು. ಇದರ ಜೊತೆಗೆ ಕಾನೂನು ಮತ್ತು ನ್ಯಾಯ ಸಚಿವಾಲಯದ ಸಲಹಾ ಸಮಿತಿಯ ಸದಸ್ಯರಾಗಿ ನೇಮಕವಾದರು.

    ಕ್ಲಿಕ್ ಮಾಡಿ ಓದಿ: ಎಎಪಿ ನಿರ್ನಾಮಾ ಮಾಡಲು ಬಿಜೆಪಿ ಕುತಂತ್ರ | ಜಗದೀಶ್

    1991 ಮತ್ತು 1996 ಚಿತ್ರದುರ್ಗದಿಂದ 10ನೇ ಲೋಕಸಭೆಯಲ್ಲಿ ಸಂಸದರಾಗಿ ಜಯಗಳಿಸಿದರು. 1998, 1999ರಲ್ಲಿ ಚಿತ್ರದುರ್ಗದಿಂದ ಮೂರನೇ ಬಾರಿಗೆ ಲೋಕಸಭೆ ಪ್ರವೇಶಿಸಿದರು. ಆಹಾರ, ನಾಗರಿಕ ಸರಬರಾಜು ಮತ್ತು ಸಾರ್ವಜನಿಕ ವಿತರಣಾ ಸಮಿತಿಯ ಸದಸ್ಯ ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪಸಮಿತಿ-ಎ. ಸದನದ ಸಭೆಗಳಿಗೆ ಸದಸ್ಯರ ಗೈರುಹಾಜರಿ ಸಮಿತಿಯ ಸದಸ್ಯ, ಕಾರ್ಮಿಕ ಸಚಿವಾಲಯದ ಸಲಹಾ ಸಮಿತಿಯ ಸದಸ್ಯರಾಗಿದ್ದರು. ಹೀಗೆ ಅವರು ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

    1989 ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸಿ.ಪಿ.ಮೂಡಲಗಿರಿಯಪ್ಪ ಅವರು ತಮ್ಮ ಪ್ರತಿಸ್ಪರ್ಧಿಯಾದ ಜನತಾದಳ ಪಕ್ಷದ ಅಭ್ಯರ್ಥಿ ಸಣ್ಣ ಚಿಕ್ಕಪ್ಪ ಅವರನ್ನು 142193 ಮತಗಳ ಬೃಹತ್ ಅಂತರದಿಂದ ಪರಾಭವಗೊಳಿಸಿ ವಿಜಯದ ನಗೆ ಬೀರಿದ್ದರು.
    1991 ರ ಚುನಾವಣೆಯಲ್ಲಿ ಮತ್ತೆ ಸಿ.ಪಿ.ಮೂಡಲಗಿರಿಯಪ್ಪ ಅವರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಪಕ್ಷದ ಎಲ್.ಜಿ. ಹಾವನೂರು ಅವರನ್ನು 82512 ಮತಗಳ ಅಂತರದಿಂದ ಸೋಲಿಸಿ ಎರಡನೆ ಬಾರಿಗೆ ಆಯ್ಕೆಯಾಗಿದ್ದರು.

    ಅತ್ಯಂತ ಜಿದ್ದಾಜಿದ್ದಿಯಿಂದ ಕೂಡಿದ್ದ 1996 ರ ಚುನಾವಣೆಯಲ್ಲಿ ಜನತಾದಳ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಪಿ. ಕೋದಂಡರಾಮಯ್ಯ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ ಸಿ.ಪಿ. ಮೂಡಲಗಿರಿಯಪ್ಪ ಅವರನ್ನು 19382 ಮತಗಳ ಅಂತರದಿಂದ ವಿಜಯಿಯಾಗಿದ್ದರು.

    1998 ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಮೂಡಲಗಿರಿಯಪ್ಪ ಅವರು ಲೋಕಶಕ್ತಿ ಪಕ್ಷದ ಅಭ್ಯರ್ಥಿ ಪಿ. ಕೋದಂಡರಾಮಯ್ಯ ಅವರನ್ನು 58321 ಮತಗಳಿಂದ ಪರಾಭವಗೊಳಿಸಿ ಮೂರನೆ ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾದರು. 1999 ರ ಚುನಾವಣೆಯಲ್ಲಿ ನಡೆದ ತುರುಸಿನ ಸ್ಪರ್ಧೆಯಲ್ಲಿ ಕನ್ನಡ ಚಲನ ಚಿತ್ರರಂಗದ ನಟ ಶಶಿಕುಮಾರ್ ಅವರು ಜನತಾದಳ (ಯು) ಪಕ್ಷದಿಂದ ಸ್ಪರ್ಧಿಸಿ, ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ ಸಿ.ಪಿ. ಮೂಡಲಗಿರಿಯಪ್ಪ ಅವರನ್ನು ಕೇವಲ 11178 ಮತಗಳ ಅಂತರದಿಂದ ಪರಾಭವಗೊಳಿಸಿ ಆಯ್ಕೆಯಾಗಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top