CHITRADURGA NEWS | 26 JULY 2026
ಚಿತ್ರದುರ್ಗ: ಚಿತ್ರದುರ್ಗದ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅವರು ತಮ್ಮ ಹುಟ್ಟುಹಬ್ಬವನ್ನು ಅವರ ನಿವಾಸದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಆಚರಿಸಲಾಯಿತು.
ಇದನ್ನೂ ಓದಿ: ಹಿರಿಯೂರಿನಲ್ಲಿ ಡಿ.ಸುಧಾಕರ್ ನುಡಿ ನಮನ | ಸಿಎಂ ಡಿಕೆಶಿ, ಸಿದ್ದರಾಮಯ್ಯ ಸೇರಿ ಗಣ್ಯರು ಭಾಗೀ
ಚಿತ್ರದುರ್ಗ ಸೇರಿದಂತೆ ವಿವಿಧೆಡೆಗಳಿಂದ ಆಗಮಿಸಿದ್ದ ಅಭಿಮಾನಿಗಳು ಕೈಯಲ್ಲಿ ಶಾಲು, ಹೂವಿನ ಹಾರ, ಬೊಕ್ಕೆ, ಕೇಕ್ನ್ನು ಹಿಡಿದುಕೊಂಡು ಬಂದು ತಮ್ಮ ನಾಯಕರಿಗೆ ಹಾಕುವುದರ ಮೂಲಕ ಕೇಕ್ನ್ನು ಕಟ್ ಮಾಡಿಸುವುದರ ಮೂಲಕ ಸಂತೋಷಪಟ್ಟಿದ್ದಾರೆ.
ಸಂಸದ ಗೋವಿಂದ ಕಾರಜೋಳ ರವರು ಸಹಾ ತಿಪ್ಪಾರೆಡ್ಡಿಯವರ ಮನೆಗೆ ಭೇಟಿ ನೀಡಿ ಅವರಿಗೆ ಶಾಲು, ಹಾರವನ್ನು ಹಾಕುವುದರ ಮೂಲಕ ಹುಟ್ಟು ಹಬ್ಬದ ಶುಭಾಷಯಗಳನ್ನು ಕೋರಿದರು.
ಇದನ್ನೂ ಓದಿ: ಕಣ್ಣೀರಿನ ನಡುವೆ ಕೈಲಾಸ ಪ್ರಾರ್ಥನೆ | ಲೋಹಿತ್ ಪ್ರಸಾದ್, ನಿತ್ಯಶ್ರೀ ದಂಪತಿ ಅಗಲಿಕೆಗೆ ಕಂಬನಿ | ಸಿರಿಗೆರೆ ಶ್ರೀ ಭಾಗೀ
ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ ಕುಮಾರಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ ಯಾದವ್, ಡಾ.ಸಿದ್ದಾರ್ಥ ಗುಡಾರ್ಪಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಬಾಳೆಕಾಯಿ ರಾಮದಾಸ್, ಮಾಜಿ ತಹಶೀಲ್ದಾರರಾದ ರಘುಮೂರ್ತಿ, ಗ್ರಾಮಾಂತರ ಅಧ್ಯಕ್ಷರಾದ ನಾಗರಾಜ್, ಜಿಲ್ಲಾ ಕಾರ್ಯದರ್ಶಿಗಳಾದ ರೇಖಾ, ಜಿಲ್ಲಾ ವಾಕ್ತಾರರಾದ ನಾಗರಾಜ್ ಬೇದ್ರೆ, ಜಿಲ್ಲಾ ಸಹ ವಕ್ತಾರರಾದ ನವೀನ್ ಚಾಲುಕ್ಯ, ನಗರ ಪ್ರಧಾನ ಕಾರ್ಯದರ್ಶಿಗಳಾದ ಲೀಲಾವತಿ ಬಸವೇಶ್, ಎಸ್.ಸಿ. ಮೋರ್ಚಾ ಅಧ್ಯಕ್ಷ ಪರಶುರಾಮ್, ದಿಶಾ ಸಮಿತಿ ಸದಸ್ಯ ಭರತ್, ಯುವ ಮೋರ್ಚಾ ನಗರಾಧ್ಯಕ್ಷರಾದ ಡಾ.ವಸಂತ್ ಆಚಾರ್, ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷರಾದ ಸಿದ್ದೇಶ ಯಾದವ್ ಸೇರಿದಂತೆ ಅಭಿಮಾನಿಗಳು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

