
CHITRADURGA NEWS | 21 AUGUST 2025
ಹಿರಿಯೂರು: ಹಿರಿಯೂರು ಮಾಜಿ ಶಾಸಕ ಆರ್.ರಾಮಯ್ಯ(79) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ.
1985 ರಲ್ಲಿ ಹಿರಿಯೂರು ವಿಧಾನಸಭೆ ಕ್ಷೇತ್ರಕ್ಕೆ ನಡೆದಿದ್ದ ಉಪ ಚುನಾವಣೆಯಲ್ಲಿ ರಾಮಯ್ಯ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಅವಧಿಯಲ್ಲಿ ಶಾಸಕರಾಗಿದ್ದ ಕೆ.ಎಚ್.ರಂಗನಾಥ್ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿದ್ದರಿಂದ ಕ್ಷೇತ್ರ ತೆರವಾಗಿತ್ತು. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಮಯ್ಯ ಸ್ಪರ್ಧಿಸಿ ಗೆದ್ದಿದ್ದರು.
ಇದನ್ನೂ ಓದಿ: ಮೊಳಕಾಲ್ಮೂರಿನಲ್ಲಿ ಜಿಲ್ಲಾ ಮಟ್ಟದ ಆಸ್ಪತ್ರೆ | ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಸರ್ಕಾರಿ ಮೆಡಿಕಲ್ ಕಾಲೇಜಿಗೆ !
2013 ರಲ್ಲಿ ನಡೆದ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಿ ಪರಾಭವಗೊಂಡಿದ್ದರು. ಆನಂತರ ಆರ್.ರಾಮಯ್ಯ ಸಕ್ರೀಯ ರಾಜಕಾರಣದಿಂದ ದೂರ ಉಳಿದಿದ್ದರು.
ಆರ್.ರಾಮಯ್ಯ ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಹಿರಿಯೂರು ತಾಲೂಕಿನ ಭೀಮನಬಂಡೆಯಲ್ಲಿರುವ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
