CHITRADURGA NEWS | 07 OCTOBER 2025
ಚಿತ್ರದುರ್ಗ: ನಗರಸಭೆ ಮಾಜಿ ಗೊಲ್ಲ ಸಮಾಜದ ಮುಖಂಡ ಸಿ.ಟಿ.ಕೃಷ್ಣಮೂರ್ತಿ ಅವರನ್ನು ಜಾನಪದ ಜಾಗೃತಿ ಪರಿಷತ್ ವತಿಯಿಂದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕಾಯಕ ಯೋಗಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಇದನ್ನೂ ಓದಿ: ಸರ್ಕಾರದ ಸೌಲಭ್ಯ ಪಡೆದು ನಾಯಕ ಸಮಾಜ ಮುಖ್ಯವಾಹಿನಿಗೆ ಬರಲಿ | ಶಾಸಕ ಎಂ.ಚಂದ್ರಪ್ಪ
ಈ ವೇಳೆ ನಗರಸಭೆ ಮಾಜಿ ಉಪಾಧ್ಯಕ್ಷ ಎಸ್.ಬಿ.ಎಲ್.ಮಲ್ಲಿಕಾರ್ಜುನ್ ಮಾತನಾಡಿ, ಸಿ.ಟಿ.ಕೃಷ್ಣಮೂರ್ತಿ ಕೇವಲ ಗೊಲ್ಲ ಸಮಾಜದ ಮುಖಂಡರಲ್ಲ. ಎಲ್ಲಾ ಜಾತಿ ಜನಾಂಗದವರ ಜೊತೆ ನಿಕಟ ಸಂಪರ್ಕವಿಟ್ಟುಕೊಂಡಿದ್ದಾರೆ.
ಚಿತ್ರದುರ್ಗದಲ್ಲಿ ಮೊದಲು ಸಿ.ಸಿ.ರಸ್ತೆ ನಿರ್ಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಎಲ್ಲರ ಕಷ್ಟ-ಸುಖಗಳಿಗೆ ಸ್ಪಂದಿಸುವ ಗುಣವುಳ್ಳ ಅವರನ್ನು ದೊಡ್ಡ ಪ್ರಶಸ್ತಿಗಳು ಹುಡುಕಿಕೊಂಡು ಬರಲಿ ಎಂದು ಹಾರೈಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಸಿ.ಟಿ.ಕೃಷ್ಣಮೂರ್ತಿ ಮಾತನಾಡಿ, ನಗರಸಭೆ ಅಧ್ಯಕ್ಷನಾಗಿದ್ದಾಗ ಕೈಲಾದಷ್ಟು ಊರಿಗೆ ಒಳ್ಳೆಯ ಕೆಲಸ ಮಾಡಿದ್ದೇನೆ. ಈಗಲೂ ಜನಸೇವೆಯಿಂದ ಹಿಂದೆ ಸರಿದಿಲ್ಲ. ಚುನಾವಣೆಯಲ್ಲಿ ಸೋತಿದ್ದರು ವಾರ್ಡ್‍ನ ಜನತೆಯ ಸಮಸ್ಯೆಗಳನ್ನು ಆಲಿಸಿ ಕೆಲಸ ಮಾಡುತ್ತಿದ್ದೇನೆ. ಕಾಯಕ ಯೋಗಿ ಪ್ರಶಸ್ತಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದರು.
ಇದನ್ನೂ ಓದಿ: ಜಿಲ್ಲಾಡಳಿತ 30 ಎಕರೆ ಜಮೀನು ನೀಡಿದರೆ ಮದಕರಿ ನಾಯಕ ಥೀಮ್ ಪಾರ್ಕ್ ನಿರ್ಮಾಣ | MLC ಕೆ.ಎಸ್.ನವೀನ್ ಭರವಸೆ
ಜಾನಪದ ಜಾಗೃತಿ ಪರಿಷತ್ ಅಧ್ಯಕ್ಷ ಹೆಚ್.ಪ್ಯಾರೆಜಾನ್, ತಾಲೂಕು ಕಚೇರಿ ಕಂದಾಯ ನಿರೀಕ್ಷಕ ಪ್ರಾಣೇಶ್, ಶ್ರೀನಿವಾಸ್, ಕೂನಿಕೆರೆ ರಾಮಣ್ಣ, ಜಗಣ್ಣ, ಸಲ್ಮಾನ್, ಮದ್ದನಕುಂಟೆ, ಸಂಪತ್, ಗರಡಿ ತಿಮ್ಮಣ್ಣ, ನಿವೃತ್ತ ಸಬ್‍ಇನ್ಸ್‍ಪೆಕ್ಟರ್ ಪ್ರಾಣೇಶ್ ಇತರರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

