ಮುಖ್ಯ ಸುದ್ದಿ
ನಗರಸಭೆ ಮಾಜಿ ಅಧ್ಯಕ್ಷ ಡಿ.ಮಲ್ಲಿಕಾರ್ಜುನ್ ನಿಧನ

Published on
CHITRADURGA NEWS | 27 FEBRUARY 2024
ಚಿತ್ರದುರ್ಗ: ನಗರಸಭೆ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಡಿ.ಮಲ್ಲಿಕಾರ್ಜುನ್ (48) ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಮೃತರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. ನಗರದ ತಮಟಕಲ್ಲು ರಸ್ತೆಯ ಶಿವ ಶಕ್ತಿ ಲೌಔಟ್‌ನ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ದಾವಣಗೆರೆಯ ಖಾಸಗಿ ಆಸ್ಪತ್ತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕುಂಚಿಗನಾಳ್ ಗ್ರಾಮದ ಮೂಲ ನಿವಾಸಿಯಾಗಿದ್ದಾರೆ. ನಗರದ ಹೊಳಲ್ಕೆರೆ ರಸ್ತೆಯಲ್ಲಿ ಜ್ಞಾನ ವಿಕಾಸ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭಿಸಿ ಶೈಕ್ಷಣಿಕ ಕ್ಷೇತ್ರದಲ್ಲೂ ಸಹ ಹೆಸರುಗಳಿಸಿದ್ದರು.
ಶಾಸಕ ಕೆ.ಸಿ.ವೀರೇಂದ್ರ ಕಂಬನಿ ಮಿಡಿದು, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
Continue Reading
Related Topics:Ex-Chairman, Member, Municipal Council, Passed away, Tamtakallu, ತಮಟಕಲ್ಲು, ನಗರಸಭೆ, ನಿಧನ, ಮಾಜಿ ಅಧ್ಯಕ್ಷ, ಸದಸ್ಯ

Click to comment