
CHITRADURGA NEWS | 18 MAY 2026
ಚಿತ್ರದುರ್ಗ: ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರ 94 ನೇ ಹುಟ್ಟುಹಬ್ಬವನ್ನು ಜೆಡಿಎಸ್ ಕಚೇರಿಯಲ್ಲಿ ಸೋಮವಾರ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ.18 | ಮೆಕ್ಕೆಜೋಳ, ಶೇಂಗಾ ಸೂರ್ಯಕಾಂತಿ ರೇಟ್..
ನಿವೃತ್ತ ಮುಖ್ಯ ಇಂಜಿನಿಯರ್ ಹಾಗೂ ಹಿರಿಯೂರು ವಿಧಾನಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿ ರವೀಂದ್ರಪ್ಪ ಮಾತನಾಡಿ, ಹೆಚ್.ಡಿ.ದೇವೆಗೌಡರವರು ರಾಜ್ಯದ ಮುಖ್ಯಮಂತ್ರಿ ಹಾಗೂ ದೇಶದ ಪ್ರಧಾನಿಯಾಗಿದ್ದಾಗ ರೈತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದರು. ಹೆಚ್.ಡಿ.ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡಿ ಸಂಕಷ್ಟದಲ್ಲಿದ್ದ ರೈತರಿಗೆ ಆತ್ಮಸ್ಥೈರ್ಯ ತುಂಬಿದರು ಎಂದು ಗುಣಗಾನ ಮಾಡಿದರು.
ಇಳಿಯ ವಯಸ್ಸಿನಲ್ಲಿಯೂ ಹೆಚ್.ಡಿ.ದೇವೆಗೌಡರಿಗೆ ರೈತರ ಬಗ್ಗೆ ಕಾಳಜಿಯಿದೆಯಲ್ಲದೆ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದವರು, ದೀನ ದಲಿತರು. ಅಲ್ಪಸಂಖ್ಯಾತರ ಹಿತ ಬಯಸುತ್ತಾರೆಂದು ಹೇಳಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಕೆ.ಮಾತನಾಡಿ, ಹಿಂದಿನಿಂದಲೂ ರೈತರ ಪರವಾಗಿ ಹೋರಾಟ ಮಾಡಿಕೊಂಡು ಬರುತ್ತಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನೂರು ವರ್ಷಗಳ ಕಾಲ ಬಾಳಲಿ. ಭಗವಂತ ಆರೋಗ್ಯ ಕರಣಿಸಲಿ ಎಂದು ಶುಭ ಹಾರೈಸಿದರು.
ಇದನ್ನೂ ಓದಿ: ನಾಳೆ ಚಿತ್ರದುರ್ಗ ನಗರದಲ್ಲಿ ವಿದ್ಯುತ್ ವ್ಯತ್ಯಯ | ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ
ಜೆಡಿಎಸ್ ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಡಿ.ಹನುಮಂತರಾಯ, ಜೆಡಿಎಸ್.ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಹಿರಿಯೂರು ಪಿ.ಎಲ್.ಡಿ. ಬ್ಯಾಂಕ್ ಮಾಜಿ ಅಧ್ಯಕ್ಷ ಜಲದಪ್ಪ, ಮಹಲಿಂಗಪ್ಪ ಪರಮೇನಹಳ್ಳಿ, ಪಾತಲಿಂಗಪ್ಪ ಲಿಲಾಜನಹಳ್ಳಿ, ಚಂದ್ರಪ್ಪ ಪಿಲಾಜನಹಳ್ಳಿ, ಗೋವಿಂದರಾಜು ಜವನಗೊಂಡನಹಳ್ಳಿ, ರಾಧಮ್ಮ, ಗೀತಮ್ಮ, ರಘು ಹಾಜರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

