
CHITRADURGA NEWS | 29 JANUARY 2025
ಚಿತ್ರದುರ್ಗ: ಉತ್ತರ ಪ್ರದೇಶದ ಪ್ರಯಾಗರಾಜ್‍ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಮಠಾಧೀಶರು ಭಾಗವಹಿಸಿದ್ದು, ಮೌನಿ ಅಮಾವಾಸ್ಯೆಯಂದು ಪವಿತ್ರ ಅಮೃತ ಸ್ನಾನ ಮಾಡಿದ್ದಾರೆ.
ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಹೊಸದುರ್ಗದ ಕುಂಚಿಟಿಗ ಮಠದ ಶ್ರೀ ಶಾಂತವೀರ ಸ್ವಾಮೀಜಿ ಹಾಗೂ ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಕುಂಭ ಮೇಳದಲ್ಲಿ ಭಾಗಿಯಾಗಿದ್ದಾರೆ.
ಇದನ್ನೂ ಓದಿ: ರಸ್ತೆಗಾಗಿ ಹಿಂದಕ್ಕೆ ಸರಿಯುತ್ತಿದೆ ಮೂರಂತಸ್ತಿನ ಕಟ್ಟಡ | ಹೈಡ್ರಾಲಿಕ್ ಜಾಕ್ ಮೂಲಕ ಕಟ್ಟಡ ಶಿಫ್ಟ್
ಜ.28 ರಂದು ಪ್ರಯಾಗರಾಜ್ ತಲುಪಿದ್ದು, ಜ.29 ಬುಧವಾರ ಬೆಳಗ್ಗೆ 7 ಗಂಟೆಗೆ ಮೌನಿ ಅಮಾವಾಸ್ಯೆಯ ಅಮೃತ ಸ್ನಾನಕ್ಕೆ ತೆರಳಿದ್ದು, 9 ಗಂಟೆಗೆ ಸ್ವಾನ ಮುಗಿಸಿ ವಾಪಾಸು ತಾವು ವಾಸ್ತವ್ಯ ಮಾಡಿರುವ ಮನೆಗೆ ಮರಳಿದ್ದಾರೆ.
ಶ್ರೀಗಳು ವಾಸ್ತವ್ಯ ಮಾಡಿರುವ ಜಾಗದಿಂದ 1 ಕಿ.ಮೀ ಅಂತರದಲ್ಲಿ ಕಾಲ್ತುಳಿತ ಉಂಟಾಗಿದ್ದು, ಆನಂತರ ಎಲ್ಲವೂ ತಹಬದಿಗೆ ಬಂದಿದೆ. ಬೆಳಗ್ಗೆ 3 ಗಂಟೆಗೆ ಸ್ನಾನ ಮಾಡಲು ಹೋದವರು ತೊಂದರೆ ಅನುಭವಿಸಿದ್ದಾರೆ ಎಂದು ಶ್ರೀಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಹಾಲಿನ ದರ ಹೆಚ್ಚಿಸಲು ತುರ್ತು ಸಭೆ | ಶಿಮುಲ್ ನಿರ್ದೇಶಕ ಬಿ.ಆರ್.ರವಿಕುಮಾರ್
ಕುಂಭ ಮೇಳಕ್ಕೆ ಉತ್ತರ ಪ್ರದೇಶದ ಸರ್ಕಾರ ಅತ್ಯಂತ ಅಚ್ಚುಕಟ್ಟಾದ ವ್ಯವಸ್ಥೆ ಮಾಡಿದೆ. ಆದರೆ, ನಿಯಮಗಳನ್ನು ಪಾಲಿಸದೆ ಸಹನೆ ಕಳೆದುಕೊಂಡು ಜನ ನೂಕುನುಗ್ಗಲು ಮಾಡಿಕೊಂಡಿದ್ದಾರೆ. ನಾವು ಇರುವ ಜಾಗದಲ್ಲಿ ಅಂತಹ ಗೊಂದಲ ಆಗಿಲ್ಲ. ನಾವೆಲ್ಲರೂ ತ್ರಿವೇಣಿ ಸಂಗಮದಲ್ಲಿ ಮಿಂದಿದ್ದೇವೆ ಎಂದು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
