CHITRADURGA NEWS | 16 MARCH 2026
ಚಿತ್ರದುರ್ಗ: ವಂಚನೆ ಪ್ರಕರಣದಲ್ಲಿ ನಗರಸಭೆ ಮಾಜಿ ಸದಸ್ಯ ಎನ್.ಚಂದ್ರಶೇಖರ್ ಅವರನ್ನು ನಗರಠಾಣೆ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದನ್ನೂ ಓದಿ: ಸಾಗರ ಅಡಿಕೆ ಮಾರುಕಟ್ಟೆಯಲ್ಲಿ 59 ಸಾವಿರ ದಾಟಿದ ರಾಶಿ ಅಡಿಕೆ
ಸಾರ್ವಜನಿಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಕೊಡುವುದಾಗಿ ನಂಬಿಸಿ ವಂಚನೆ ಮಾಡುತ್ತಿದ್ದ ಆರೋಪದಲ್ಲಿ ಜೆಡಿಎಸ್ ಮುಖಂಡ ಹಾಗೂ ನಗರಸಭೆ ಮಾಜಿ ಸದಸ್ಯರೂ ಆಗಿದ್ದ ಎನ್.ಚಂದ್ರಶೇಖರ್ ಅಲಿಯಾಸ್ ಖೋಟಾನೋಟು ಚಂದ್ರು ಅವರನ್ನು ಮಾ.14 ರಂದು ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ರೋಷನ್ ಸಲ್ಡಾನ್ ಅವರೊಂದಿಗೆ ಚಂದ್ರಶೇಖರ್ ಸೇರಿಕೊಂಡು ಆರೋಪಿ ಚಂದ್ರಶೇಖರ್ ವ್ಯಕ್ತಿಯೊಬ್ಬರಿಗೆ ವಂಚನೆ ಮಾಡಿದ ಆಪಾದನೆಯಡಿ ಬಂಧಿಸಿದ್ದು, ಮಾ.16 ರಂದು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.
ಇದನ್ನೂ ಓದಿ: ಮುರುಘಾ ಮಠದಲ್ಲಿ ಯುಗಾದಿ ಕವಿಗೋಷ್ಠಿ
ಆರೋಪಿ ಚಂದ್ರಶೇಖರ್ ವಿರುದ್ಧ ಚಿತ್ರದುರ್ಗದ ವಿವಿಧ ಠಾಣೆಗಳಲ್ಲಿ 32 ಪ್ರಕರಣ ದಾಖಲಾಗಿದ್ದು, ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯುವ ವಿಚಾರದಲ್ಲಿ ಮೋಸ ಹೋಗಿದ್ದವರು ಚಿತ್ರದುರ್ಗ ಪೊಲೀಸರನ್ನು ಸಂಪರ್ಕಿಸಲು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
