ಮುಖ್ಯ ಸುದ್ದಿ
ಗುತ್ತಿನಾಡು ಸರ್ಕಾರಿ ಶಾಲೆಯ ಮಕ್ಕಳಿಗೆ ಸಂಸದ ಗೋವಿಂದ ಕಾರಜೋಳ ಉಚಿತ ಬ್ಯಾಗ್ ವಿತರಣೆ
CHITRADURGA NEWS | 13 MARCH 2025
ಚಿತ್ರದುರ್ಗ: ತಾಲ್ಲೂಕು ಗುತ್ತಿನಾಡು ಗ್ರಾಮದ ಕುವೆಂಪು ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 320 ಮಕ್ಕಳಿಗೆ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಸಂಸ್ಥೆ, ನವದೆಹಲಿ ಇವರ ಸಹಯೋಗದಲ್ಲಿ ಉಚಿತ ಶಾಲಾ ಬ್ಯಾಗ್, ಹಾಗೂ ಸ್ವೆಟರ್ ಗಳ ವಿತರಣೆ ಕಾರ್ಯಕ್ರಮವನ್ನು ಸಂಸದ ಗೋವಿಂದ ಕಾರಜೋಳ ಉದ್ಘಾಟಿಸಿ, ವಿತರಣೆ ಮಾಡಿದರು.
Also Read: ಭಕ್ತ ಸಾಗರದ ನಡುವೆ ಸಾಗಿದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ | ಆಗಸದಲ್ಲಿ ಗರುಢ ಪ್ರದಕ್ಷಿಣೆ
ನಂತರ ಮಾತನಾಡಿದ ಸಂಸದರು, ಇಡೀ ದೇಶದಲ್ಲಿ ಏಕರೂಪ ಶಿಕ್ಷಣ ನೀತಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಮೋದಿಜಿ ನೇತೃತ್ವದ ಕೇಂದ್ರ ಸರ್ಕಾರ 2020 ರಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿತು.
ಈ ನಿಟ್ಟಿನಲ್ಲಿ ಇಡೀ ದೇಶಾದ್ಯಂತ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಹಲವಾರು ಹಂತಗಳಲ್ಲಿ ವಿಚಾರ ಸಂಕಿರಣಗಳು, ಚರ್ಚೆಗಳು, ಶಾಲಾ ಕಾಲೇಜುಗಳ ಮಟ್ಟದಲ್ಲಿ ಹಾಗೂ ವಿಶ್ವವಿದ್ಯಾನಿಲಯಗಳ ಮಟ್ಟದಲ್ಲಿ ನಡೆದವು. ಹೀಗಿದ್ದಾಗ್ಯೂ ನಂತರದಲ್ಲಿ ಕರ್ನಾಟಕದಲ್ಲಿ ಆಡಳಿತಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿಕೊಳ್ಳಲೇ ಇಲ್ಲ. ಇದು ಅತ್ಯಂತ ದುರದೃಷ್ಠಕರ ಸಂಗತಿಯಾಗಿದೆ ಎಂದು ತಿಳಿಸಿದರು.
ಪಠ್ಯಕ್ರಮವನ್ನು ಕಡಿಮೆ ಮಾಡಿ ಮೂಲಭೂತ ವಿಷಯಗಳ ಮೇಲೆ ಕೇಂದ್ರೀಕರಿಸುವ ರೀತಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸಲಾಗಿತ್ತು, ಶಿಕ್ಷಣದಿಂದ ಮಕ್ಕಳ ಮೇಲಿನ ಒತ್ತಡವನ್ನು ಕಡಿಮೆ ಮಾಡುವುದು ರಾಷ್ಟ್ರೀಯ ಶಿಕ್ಷಣ ನೀತಿಯ ಮುಖ್ಯ ಉದ್ದೇಶವಾಗಿತ್ತು.
Also Read: ಜಿಲ್ಲೆಯ ಜನರಿಗೆ ಎಚ್ಚರಿಕೆ | ಮಿತಿಮೀರಿದ ತಾಪಮಾನ | ಈ ಸಲಹೆ ಪಾಲಿಸಿ..
ಕರ್ನಾಟಕದಲ್ಲಿ ಶಿಕ್ಷಣವನ್ನು ಕೇಸರೀಕರಣ ಮಾಡುತ್ತಿದ್ದಾರೆ ಎನ್ನುವ ನೆಪವೊಡ್ಡಿ ಹಳೇ ಶಿಕ್ಷಣ ನೀತಿಯನ್ನೇ ಕಾಂಗ್ರೆಸ್‍ನವರು ಮುಂದುವರಿಸಿದ್ದಾರೆ. ಇದು ಅತ್ಯಂತ ಘೋರವಾದ ಸಂಗತಿಯಾಗಿದೆ. ಅಟಲ್ ಬಿಹಾರಿ ವಾಜಪೇಯಿಯವರ ಕಾಲದಲ್ಲಿ ಶಿಕ್ಷಣ ಕ್ಷೇತ್ರ ಹೊಸ ರೂಪವನ್ನೇ ಪಡೆಯಿತು.
ಅಷ್ಟೊಂದು ದೂರದೃಷ್ಟಿಯನ್ನು ವಾಜಪೇಯಿಯವರು ಹೊಂದಿದ್ದರು. ಈಗಲೂ ಕೂಡ ಅತ್ಯುತ್ತಮ ಶಿಕ್ಷಕರುಗಳು ಸಿಗುವುದು ಸರ್ಕಾರಿ ಶಾಲೆಗಳಲ್ಲಿ, ಹೀಗಿದ್ದೂ ಕೂಡ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿಯುತ್ತಿದೆ, ಇದು ಆತಂಕಕಾರಿ ಬೆಳವಣಿಗೆಯಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಯನ್ನು ಹೆಚ್ಚಿಸಲು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ ಎಂದರು.
ಚಿತ್ರದುರ್ಗ ಜಿಲ್ಲೆಯಲ್ಲಿ 1 ನೇ ತರಗತಿಯಿಂದ 10 ನೇ ತರಗತಿಯವರೆಗೆ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವವರ ಸಂಖ್ಯೆ ಸುಮಾರು 1 ಲಕ್ಷದಷ್ಟಿದೆ, ಇವರೆಲ್ಲರಿಗೂ ಕೂಡ ಸಮವಸ್ತ್ರ, ಸ್ಕೂಲ್ ಬ್ಯಾಗ್, ಶೂ-ಸಾಕ್ಸ್, ಸ್ವೆಟರ್‍ಗಳನ್ನು ಉಚಿತವಾಗಿ ವಿತರಣೆ ಮಾಡಲಾಗುವುದು.
Also Read: ಏ.12 ರಿಂದ 28ರವರೆಗೆ ಸಾಣೇಹಳ್ಳಿಯಲ್ಲಿ ಮಕ್ಕಳ ಹಬ್ಬ | ವಿವಿಧ ಸ್ಪರ್ಧೆ ಆಯೋಜನೆ
ಮೊದಲ ಹಂತದಲ್ಲಿ 15 ಸಾವಿರ ಮಕ್ಕಳಿಗೆ ಈಗಾಗಲೇ ಪರಿಕರಗಳು ಬಂದಿವೆ, ಇವನ್ನು ವಿತರಣೆ ಮಾಡಿ ಎರಡನೇ ಹಂತದಲ್ಲಿ ಉಳಿದ ಮಕ್ಕಳಿಗೆ ವಿತರಣೆ ಮಾಡಲಾಗುವುದ, ಮಕ್ಕಳು ಹಾಗೂ ಶಿಕ್ಷಕರುಗಳು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದರು.
ತಾಲ್ಲೂಕಿನ ಗುತ್ತಿನಾಡು, ಕವಾಡಿಗರಹಟ್ಟಿ, ಐ.ಯು.ಡಿ.ಪಿ. ಲೇಔಟ್, ಮದಕರಿಪುರ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್, ಹಾಗೂ ಸ್ವೆಟರ್ ಗಳ ವಿತರಣೆ ಮಾಡಲಾಯಿತು.
ಭಗೀರಥಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಸಾನಿಧ್ಯ ವಹಿಸಿ ಮಾತನಾಡಿ, ಸಂಸದರು ಚಿತ್ರದುರ್ಗ ಜಿಲ್ಲೆಗೆ ಬಂದು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ, ಶಾಲಾ ಮಕ್ಕಳಿಗೆ ಇಂತಹ ಸವಲತ್ತುಗಳಿವೆ ಎಂಬುದೇ ಯಾರಿಗೂ ಗೊತ್ತಿರಲಿಲ್ಲ. ಇಂತಹ ಅನೇಕ ವಿಷಯಗಳ ಮೂಲಕ ಜಿಲ್ಲೆಯನ್ನು ಸಮೃದ್ದಗೊಳಿಸಲಿ, ಉತ್ತಮ ಕೆಲಸಗಳ ಮೂಲಕ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆ ನಿಲ್ಲಲಿ ಎಂದು ಹಾರೈಸಿದರು.
Also Read: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್, ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಮಾಧುರಿ ಗಿರೀಶ್, ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ ಎ. ಮುರುಳಿ, ನಿವೃತ್ತ ಆರಕ್ಷಕ ಉಪಾಧೀಕ್ಷಕ ನಾಗರಾಜಪ್ಪ, ಸಹ ಸಂಯೋಜಕ ಈಶ್ವರ್, ತಾಲ್ಲೂಕು ಉಪ್ಪಾರ ಸಮಾಜದ ಗೌರವಾಧ್ಯಕ್ಷ ತಿಪ್ಪೇಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.