CHITRADURGA NEWS | 16 JUNE 2026
ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 2026-27ನೇ ಸಾಲಿನ ಉಚಿತ ವಿದ್ಯಾರ್ಥಿ ಬಸ್ ಪಾಸ್ಗಳ ವಿತರಣೆಗೆ ಚಾಲನೆ ನೀಡಿದ್ದು, 2026ರ ಜೂನ್ 12 ರಿಂದಲೇ ಅನ್ವಯವಾಗುವಂತೆ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ಗಳನ್ನು ವಿತರಿಸಲಾಗುತ್ತಿದೆ. ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಬಿಜೆಪಿ ಶಕ್ತಿಕೇಂದ್ರ ಪ್ರಮುಖರ ಸಭೆಗೆ ಜಿ.ಎಚ್.ತಿಪ್ಪಾರೆಡ್ಡಿ ಚಾಲನೆ
ಬಸ್ ಪಾಸ್ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಸೇವಾ ಸಿಂಧು ಫೋರ್ಟಲ್ https://sevasindhuservices.
ನಿಗಮದ ವ್ಯಾಪ್ತಿಯಲ್ಲಿರುವ 123 ಬಸ್ ಪಾಸ್ ವಿತರಣಾ ಕೇಂದ್ರಗಳ ಸಂಪೂರ್ಣ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ಕೆ.ಎಸ್.ಆರ್.ಟಿ.ಸಿ ಅಧಿಕೃತ ವೆಬ್ಸೈಟ್ನಲ್ಲಿ https://ksrtc.karnataka.gov.
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ವಿತರಿಸಲಾಗಿರುವ ವಿದ್ಯಾರ್ಥಿ ಬಸ್ಪಾಸ್ಗಳು ಯಥಾ ವತ್ತಾಗಿ ಚಾಲ್ತಿಯಲ್ಲಿರುತ್ತವೆ. ಆದಾಗ್ಯೂ ವಿದ್ಯಾರ್ಥಿಗಳು ಪಾವತಿಸಿರುವ ಮೊತ್ತವನ್ನು ಹಿಂದಿರುಗಿಸಲಾಗುವುದು.
ಇದನ್ನೂ ಓದಿ: ಶಾಲೆಯ ಅಡುಗೆ ಕೋಣೆಗೆ ನುಗ್ಗಿದ ನಾಗರಹಾವು..!
ರಾಜ್ಯದಲ್ಲಿ ವಾಸವಿದ್ದು ನೆರೆರಾಜ್ಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹಾಗೂ ನೆರೆರಾಜ್ಯಗಳಲ್ಲಿ (ರಾಜ್ಯದ ಗಡಿಭಾಗದಲ್ಲಿ) ವಾಸವಿದ್ದು, ರಾಜ್ಯದೊಳಗಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಉಚಿತ ಬಸ್ಪಾಸ್ ಪಡೆಯಬಹುದಾಗಿದೆ.
ಈಗಾಗಲೇ ಶೈಕ್ಷಣಿಕ ವರ್ಷ 2026-27ನೇ ಸಾಲಿನಲ್ಲಿ ಶುಲ್ಕ ಪಡೆದು ವಿತರಿಸಲಾದ ಪಾಸುಗಳ ಸಂಪೂರ್ಣ ಶುಲ್ಕವನ್ನು 15 ದಿನಗಳೊಳಗಾಗಿ ವಿದ್ಯಾರ್ಥಿಗಳಿಗೆ ಮರು ಪಾವತಿಸಲಾಗುವುದು.
ಈ ಬಗ್ಗೆ ಪ್ರತ್ಯೇಕವಾಗಿ ತಿಳಿಸಲಾಗುವುದು ಎಂದು ಚಿತ್ರದುರ್ಗ ವಿಭಾಗ ಕೆಎಸ್ಆರ್ಟಿಸಿ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

