
CHITRADURGA NEWS | 12 OCTOBER 2025
ಚಿತ್ರದುರ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ: ನರೇಗಾ ಜಾಬ್ ಕಾರ್ಡ್ ಗೆ ಇ-ಕೆವೈಸಿ ಕಡ್ಡಾಯ | ಜಿ.ಪಂ. ಸಿಇಓ ಡಾ.ಆಕಾಶ್
ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ ಲಗತ್ತಿಸಿ ಸೇವಾಸಿಂಧು ಪೋರ್ಟಲ್ (https://sevasindhu.karnataka.gov.in) ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.
ಆನ್‍ಲೈನ್‍ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ.
ಇದನ್ನೂ ಓದಿ: ವಿವಿ ಸಾಗರ ಜಲಾಶಯ ಕೊಡಿಗೆ ಕ್ಷಣ ಗಣನೆ | ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚನೆ
ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸುವುದರ ಮೂಲಕ ಈ ಸದುಪಯೋಗ ಪಡೆದುಕೊಳ್ಳಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
