CHITRADURGA NEWS | 18 SEPTEMBER 2024
ಚಿತ್ರದುರ್ಗ: ಜಿಲ್ಲಾ ಆಸ್ಪತ್ರೆ ಹಾಗೂ ದಾವಣಗೆರೆ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ಸೆ.20 ರಂದು ಜಿಲ್ಲಾ ಆಸ್ಪತ್ರೆ ಬಿ.ಸಿ.ರಾಯ್ ಸಭಾಂಗಣದಲ್ಲಿ ಉಚಿತ ಕ್ಯಾನ್ಸರ್ (cancer) ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರಾದ ವಿಘ್ನೇಶ್ ತಿಳಿಸಿದರು.

ಕ್ಲಿಕ್ ಮಾಡಿ ಓದಿ: Power cut: ಜಿಲ್ಲೆಯಲ್ಲಿ ಸೆ.19ರಂದು ವಿದ್ಯುತ್ ವ್ಯತ್ಯಯ
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇಂದಿನ ದಿನಮಾನದಲ್ಲಿ ವಿವಿಧ ರೀತಿಯ ಕ್ಯಾನ್ಸರ್‍ಗಳು ಜನರಲ್ಲಿ ಕಂಡು ಬರುತ್ತಿವೆ. ಇದರ ನಿವಾರಣೆಗೆ ಅಧುನಿಕ ತಂತ್ರಜ್ಞಾನವೂ ಸಹಾ ನೆರವಾಗಿದೆ, ಧೀರ್ಘಕಾಲ ಮಾಯದ ಹುಣ್ಣು, ಗಡ್ಡೆಯ ತ್ವರಿತ ಬೆಳವಣಿಗೆ, ಧ್ವನಿಯ ಬದಲಾವಣೆ, ನುಂಗಲು ತೊಂದರೆ, ಮುಟ್ಟು ನಿಂತ ಮೇಲು ಪುನಃ ಅನಿಯಮಿತ ಮುಟ್ಟಾಗುವುದು, ಬಿಳಿಯ ಮುಟ್ಟು ಹೋಗುತ್ತಿರುವುದು ಸೇರಿದಂತೆ ವಿವಿಧ ರೀತಿಯ ಲಕ್ಷಣಗಳಿಂದ ಕ್ಯಾನ್ಸರ್ ಉಂಟಾಗಬಹುದಾಗಿದೆ.
ನಮ್ಮಲ್ಲಿ ಆಧುನಿಕವಾದ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ರೋಗವನ್ನು ತಡೆಯಬಹುದಾಗಿದೆ ಎಂದರು.
ಸೆ.20 ರಂದು ಜಿಲ್ಲಾ ಆಸ್ಪತ್ರೆಯ ಬಿ.ಸಿ.ರಾಯ್ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಯಿಂದ 3 ಗಂಟೆಯವರೆಗೂ ತಪಾಸಣೆ ನಡೆಸಲಾಗುವುದು.
ಕ್ಲಿಕ್ ಮಾಡಿ ಓದಿ: Arecanut: ಅಡಿಕೆ ಧಾರಣೆ | ಚನ್ನಗಿರಿ ಮಾರುಕಟ್ಟೆಯಲ್ಲಿ ಹೊಸ ರಾಶಿ ಬೆಲೆಯಲ್ಲಿ ಹೆಚ್ಚಳ
ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾರಂಭಿಕವಾದ ತಪಾಸಣೆಯನ್ನು ಮಾಡಲಾಗುವುದು, ತದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆಗೆ ಕಳುಹಿಸಲಾಗುವುದು.
ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡಿಸುಕೊಳ್ಳುವಂತೆ ಮನವಿ ಮಾಡಿದರು. ನೊಂದಣಿಗಾಗಿ ಮೊಬೈಲ್ ಸಂಖ್ಯೆ 9844458881, 974255516 ಸಂಪರ್ಕಿಸಬಹುದು ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ. ರವೀಂದ್ರ, ಶಿಬಿರದ ಸಂಚಾಲಕ ರಾಘವೇಂದ್ರ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
