CHITRADURGA NEWS | 18 JULY 2025
ಚಿತ್ರದುರ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ಜಿಲ್ಲಾಸ್ಪತ್ರೆ, ನಗರಸಭೆ, ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಇದೇ ಜುಲೈ 22ರಂದು ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಚಿತ್ರದುರ್ಗ ನಗರದ ಭೀಮಸಮುದ್ರ ರಸ್ತೆಯ ಬಿ.ವಿ.ಕೆ.ಎಸ್. ಲೇ-ಔಟ್‍ನ ಬರಗೇರಮ್ಮ ಶಾಲಾ ಮುಂಭಾಗದಲ್ಲಿ ಬೃಹತ್ ಉಚಿತ ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ದೇವರ ಎತ್ತುಗಳಿಗೆ ಸರ್ಕಾರಿ ಗೋಮಾಳ ಮೀಸಲಿರಿಸಲು ಜಿಲ್ಲಾಧಿಕಾರಿಗೆ ಮನವಿ
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಉದ್ಘಾಟನೆ ನೆರವೇರಿಸುವರು. ಚಲನಚಿತ್ರ ಕಲಾವಿದ ದೊಡ್ಡಣ್ಣ ಘನ ಉಪಸ್ಥಿತಿವಹಿಸುವರು. ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ ಅಧ್ಯಕ್ಷತೆ ವಹಿಸುವರು.
ವಿಶೇಷ ಆಹ್ವಾನಿತರಾಗಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಸ್ಥಾಯಿ ಸಮಿತಿ ಅಧ್ಯಕ್ಷ ನಸ್ರುಲ್ಲಾ, 9ನೇ ವಾರ್ಡ್ ನಗರಸಭೆ ಸದಸ್ಯ ಲಕ್ಷಮ್ಮ, ಜಿಲ್ಲಾ ಗಾಣಿಗರ ಸಂಘದ ಅಧ್ಯಕ್ಷ ಡಿ.ಎಸ್.ಸುರೇಶ್ ಬಾಬು (ಸೈಟ್ ಬಾಬಣ್ಣ), ನಗರಸಭೆ ನಾಮನಿರ್ದೇಶನ ಸದಸ್ಯ ಬಿ.ವಿ.ಕಾರ್ತಿಕ್, ಮುಖಂಡ ಶ್ರೀರಾಮ್ ಭಾಗವಹಿಸುವರು.
ಗೌರವಾನ್ವಿತ ಅತಿಥಿಗಳಾಗಿ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಡಿಹೆಚ್‍ಒ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ, ಜಿಲ್ಲಾ ಅಂಧತ್ವ ನಿವಾರಣಾಧಿಕಾರಿ ಡಾ.ಜಿ.ಓ.ನಾಗರಾಜ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಭಾಗಹಿಸುವರು.
ಇದನ್ನೂ ಓದಿ: ಟಾಟಾಏಸ್ ಹರಿದು ಮೂರು ವರ್ಷದ ಮಗು ಮೃತ | ಚಿತ್ರದುರ್ಗದ ಜೋಗಿಮಟ್ಟಿ ರಸ್ತೆಯಲ್ಲಿ ಘಟನೆ
ಹೆಚ್ಚಿನ ಮಾಹಿತಿಗಾಗಿ ಶಾಸಕರ ಕಾರ್ಯಾಲಯ ದೂರವಾಣಿ ಸಂಖ್ಯೆ 7996768003, 9591515031, ಶಂಕರ ಕಣ್ಣಿನ ಆಸ್ಪತ್ರೆ-8069038900 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
