CHITRADURGA NEWS | 24 JANUARY 2026
ಚಿತ್ರದುರ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿವಾರಣ ವಿಭಾಗ, ನಗರ ಸಭೆ, ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರ ಸಹಯೋಗದಲ್ಲಿ ನಗರದ ಶ್ರೀ ವಿಶ್ವಕರ್ಮ ಕಾಳಿಕಾಂಬ ಕಲ್ಯಾಣ ಮಂಟಪ್ಪದಲ್ಲಿ ಇದೇ ಜ.27 ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಉಚಿತ ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸೆ ಹಾಗೂ ಕನ್ನಢಕ ವಿತಾರಣಾ ಶಿಬಿರ ಆಯೋಜಿಸಲಾಗಿದೆ.

ಇದನ್ನೂ ಓದಿ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪ್ರತಿಜ್ಞಾವಿಧಿ ಬೋಧನೆ
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕಾರ್ಯಕ್ರಮ ಉದ್ಘಾಟಿಸುವರು. ಚಲನಚಿತ್ರ ಕಲಾವಿದ ದೊಡ್ಡಣ್ಣ ಘನ ಉಪಸ್ಥಿತರಿರುವರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಮಂಜಪ್ಪ ಅಧ್ಯಕ್ಷತೆ ವಹಿಸುವರು. ವಿಶೇಷ ಆಹ್ವಾನಿತರಾಗಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್ಪೀರ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಶಿವಣ್ಣ, ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ಶ್ರೀರಾಮ್, ನಗರಸಭೆ ಕೌನ್ಸಿಲರ್ ಜೆ.ಶಶಿಧರ್, ನಗರಸಭೆ ಮಾಜಿ ಉಪಧ್ಯಾಕ್ಷ ಮಲ್ಲಿಕಾರ್ಜುನ ಎಸ್.ಪಿ, ಸದಸ್ಯರಾದ ವೇದಪ್ರಕಾಶ್, ಮೀನಾಕ್ಷಿ ಆಗಮಿಸುವರು.
ಗೌರವಾನ್ವಿತ ಅತಿಥಿಗಳಾಗಿ ನಗರಸಭೆ ಪೌರಾಯುಕ್ತೆ ಎಸ್.ಲಕ್ಷ್ಮಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರೇಣುಪ್ರಸಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ರವೀಂದ್ರ, ಜಿಲ್ಲಾ ಅಂಧತ್ವ ನಿವಾರಣಾ ಕಾರ್ಯಕ್ರಮ ಅಧಿಕಾರಿ ಡಾ.ನಾಗರಾಜ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಭಾಗವಹಿಸುವರು.
ಇದನ್ನೂ ಓದಿ: ಉಚಿತ ಜಿಮ್ ಮತ್ತು ಫಿಟ್ನೆಸ್ ತರಬೇತಿ | ಪರಿಶಿಷ್ಟ ಜಾತಿಯ ಯುವಕರಿಂದ ಅರ್ಜಿ ಅಹ್ವಾನ
ಹೆಚ್ಚಿನ ವಿವರಗಳಿಗಾಗಿ ಶಾಸಕರ ಕಾರ್ಯಾಲಯ 9591515031/7996768003, ಶಂಕರ ಕಣ್ಣಿನ ಆಸ್ಪತ್ರೆ. 08182-222099/08182-2221000 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
