
CHITRADURGA NEWS | 07 JANUARY 2026
ಚಿತ್ರದುರ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ಜಿಲ್ಲಾಸ್ಪತ್ರೆ, ನಗರಸಭೆ, ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಇದೇ ಜ.09ರಂದು ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಚಿತ್ರದುರ್ಗ ನಗರದ ಕರುವಿನಕಟ್ಟೆ ವೃತ್ತ ಸಮೀಪದ ಶ್ರೀ ಕಬೀರಾನಂದ ಸ್ವಾಮಿ ಆಶ್ರಮದಲ್ಲಿ ಬೃಹತ್ ಉಚಿತ ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಬೈಪಾಸ್ ನಲ್ಲಿ ಓಡುವ ಬಸ್ಸುಗಳಿಂದ ವಿದ್ಯಾರ್ಥಿ, ರೈತರಿಗೆ ತೊಂದರೆ | ರೈತ ಸಂಘದಿಂದ ಪ್ರತಿಭಟನೆ

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಉದ್ಘಾಟನೆ ನೆರವೇರಿಸುವರು. ಕಬೀರಾನಂದ ಆಶ್ರಮದ ಶಿವಲಿಂಗಾನಂದ ಸ್ವಾಮೀಜಿ, ಚಲನಚಿತ್ರ ಕಲಾವಿದ ದೊಡ್ಡಣ್ಣ ಘನ ಉಪಸ್ಥಿತಿವಹಿಸುವರು. ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸುವರು.
ವಿಶೇಷ ಆಹ್ವಾನಿತರಾಗಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್, ಮದಕರಿಪುರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗರಾಜ್ ಭಾಗವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ನಗರಸಭೆ ಪೌರಾಯುಕ್ತೆ ಎಸ್.ಲಕ್ಷ್ಮೀ, ಡಿಹೆಚ್‍ಒ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ, ಜಿಲ್ಲಾ ಅಂಧತ್ವ ನಿವಾರಣಾಧಿಕಾರಿ ಡಾ.ಜಿ.ಓ.ನಾಗರಾಜ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಭಾಗಹಿಸುವರು.
ಇದನ್ನೂ ಓದಿ: ಚಂದ್ರವಳ್ಳಿ ಶಾಸನ | ಡಾ.ಎಂ.ಎಚ್.ಕೃಷ್ಣ ಓದಿದ್ದೇ ಸತ್ಯ | ಡಾ.ಮಹಾಂತೇಶ್
ಹೆಚ್ಚಿನ ಮಾಹಿತಿಗಾಗಿ ಶಾಸಕರ ಕಾರ್ಯಾಲಯ ದೂರವಾಣಿ ಸಂಖ್ಯೆ 7996768003, 9591515031, ಶಂಕರ ಕಣ್ಣಿನ ಆಸ್ಪತ್ರೆ-08182-222099, 08182-2221000 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
