CHITRADURGA NEWS | 08 NOVEMBER 2025
ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕಿನಲ್ಲಿ ರಾಸುಗಳಿಗೆ ಎಂಟನೆ ಸುತ್ತಿನ ಉಚಿತ ಕಾಲುಬಾಯಿ ಜ್ವರದ ಲಸಿಕೆ ಅಭಿಯಾನವನ್ನು ಶಿವಮೊಗ್ಗ ಹಾಲು ಒಕ್ಕೂಟದ ನಿರ್ದೇಶಕ ಜಿ.ಬಿ.ಶೇಖರ್ ಉದ್ಘಾಟಿಸಿದರು.
ಇದನ್ನೂ ಓದಿ: ನೀನಾಸಂ ನಾಟಕಗಳು ಮನುಷ್ಯ ಜೀವನದ ಕೈಗನ್ನಡಿಯಾಗಿವೆ | ಶಿವಯೋಗಿ ಸಿ.ಕಳಸದ
ಶಿವಮೊಗ್ಗ ಹಾಲು ಒಕ್ಕೂಟದ ನಿರ್ದೇಶಕ ಜಿ.ಬಿ.ಶೇಖರ್ ಮಾತನಾಡಿ, ಕಾಲ ಕಾಲಕ್ಕೆ ಲಸಿಕೆಯನ್ನು ಹಾಕಿಸುವ ಮೂಲಕ ರೈತರು ತಮ್ಮ ಜಾನುವಾರುಗಳನ್ನು ರಕ್ಷಿಸಿಕೊಳ್ಳಬೇಕೆಂದು ಕರೆ ನೀಡಿದರು.
ಗೊರಸುಗಳಿರುವ ಪ್ರಾಣಿಗಳಲ್ಲಿ ಕಾಲುಬಾಯಿ ಜ್ವರ ಕಾಣಿಸಿಕೊಳ್ಳುತ್ತದೆ. ಇದೊಂದು ವೈರಸ್ ಕಾಯಿಲೆಯಾಗಿರುವುದರಿಂದ ಮುಂಜಾಗ್ರತೆಯಾಗಿ ಜಾನುವಾರುಗಳಿಗೆ ಲಸಿಕೆ ಹಾಕಿಸಿಕೊಳ್ಳಬೇಕು. ಕಾಲುಬಾಯಿ ಜ್ವರಕ್ಕೆ ತುತ್ತಾಗುವ ಹಸುಗಳಲ್ಲಿ ಹಾಲಿನ ಪ್ರಮಾಣ ಕಡಿಮೆಯಾಗಿ ರೈತ ನಷ್ಟಕ್ಕೊಳಗಾಗುತ್ತಾನೆ.
ಈ ರೋಗದ ವಿರುದ್ದ ಎಚ್ಚರಿಕೆಯಿಂದಿದ್ದು, ಒಂದು ತಿಂಗಳ ಕಾಲ ನಡೆಯುವ ಲಸಿಕಾ ಅಭಿಯಾನವನ್ನು ರೈತರು ಪ್ರಯೋಜನ ಪಡೆದುಕೊಂಡು ಜಾನುವಾರುಗಳನ್ನು ರಕ್ಷಿಸಿಕೊಳ್ಳುವಂತೆ ಸಲಹೆ ನೀಡಿದರು.
ಇದನ್ನೂ ಓದಿ: ಪತ್ರಕರ್ತರ ಸಂಘದ ಚುನಾವಣೆ | ನಾಳೆ ಮತದಾನ | 39 ಅಭ್ಯರ್ಥಿಗಳು ಕಣದಲ್ಲಿ
ಹೊಳಲ್ಕೆರೆ ತಾಲ್ಲೂಕು ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರಂಗಸ್ವಾಮಿ ಎಂ, ವೈದ್ಯರು ಮತ್ತು ಸಿಬ್ಬಂದಿ. ಚಿತ್ರಹಳ್ಳಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಶಶಿಕುಮಾರ್ ಹಾಗೂ ಶಿವಮೊಗ್ಗ ಹಾಲು ಒಕ್ಕೂಟದವರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
