CHITRADURGA NEWS | 25 APRIL 2026
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾಸ್ಪತ್ರೆ ಮತ್ತು ದಾವಣಗೆರೆ ಎಸ್.ಎಸ್. ನಾರಾಯಣ ಹೆಲ್ತ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಇದೇ ಏಪ್ರಿಲ್ 28ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾಸ್ಪತ್ರೆಯ ಕೊಠಡಿ ಸಂಖ್ಯೆ 15ರಲ್ಲಿ ಉಚಿತ ಗ್ಯಾಸ್ಟೊ ಶಿಬಿರ ಏರ್ಪಡಿಸಲಾಗಿದೆ.
ಇದನ್ನೂ ಓದಿ: ಸಚಿವ ಡಿ.ಸುಧಾಕರ್ ಆರೋಗ್ಯದಲ್ಲಿ ಚೇತರಿಕೆ
ದಾವಣಗೆರೆ ಎಸ್.ಎಸ್.ನಾರಾಯಣ ಹೆಲ್ತ್ ಆಸ್ಪತ್ರೆಯ ಮೆಡಿಕಲ್ ಗ್ಯಾಸ್ಟೊ ಎಂಟರಾಲಜಿಸ್ಟ್ ಮತ್ತು ಯಕೃತ್ತು ವೈದ್ಯರಾದ ಡಿ.ಕೆ.ಅಶ್ವಿನ್ ಅವರು ಉಚಿತವಾಗಿ ಗ್ಯಾಸ್ಟೊ ಶಿಬಿರ ನಡೆಸುವರು.
ಹೊಟ್ಟೆನೋವು, ಹೊಟ್ಟೆ ಉಬ್ಬುವಿಕೆ, ಅಜೀರ್ಣ, ಎದೆಯುರಿ, ವಾಕರಿಕೆ, ವಾಂತಿ, ಮಲದಲ್ಲಿ ರಕ್ತ, ಗ್ಯಾಸ್, ವಾಯು, ಅಗಾಗ ತೇಗು ಬರುವುದು, ಮಲಬದ್ಧತೆ, ಅತಿಸಾರ ಬೇದಿ, ಹಸಿವಿನ ಕೊರತೆ, ನುಂಗಲು ತೊಂದರೆ, ತೀವ್ರವಾದ ಹೊಟ್ಟೆ ನೋವು, ವಾಂತಿಯಲ್ಲಿ ರಕ್ತ, ಹಠಾತ್ ತೂಕ ನಷ್ಟ, ಕಮಾಲೆ ಸೇರಿದಂತೆ ಈ ಗ್ಯಾಸ್ಟೊ ಲಕ್ಷಣಗಳು ಕಂಡುಬಂದರೆ ಸಾರ್ವಜನಿಕರು ಮತ್ತು ಪೋಷಕರು ಈ ಸೇವೆಯ ಸದುಪಯೋಗ ಪಡೆದುಕೊಳ್ಳಬೇಕು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…
ಹೆಚ್ಚಿನ ಮಾಹಿತಿಗಾಗಿ 9535025743, 7259759982 ಗೆ ಸಂಪರ್ಕಿಸಬಹುದು ಎಂದು ಎಂದು ಸಿಎಂಸಿಆರ್‌ಐ ವೈದ್ಯಕೀಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
