CHITRADURGA NEWS | 03 FEBRUARY 2026
ಚಿತ್ರದುರ್ಗ: ಅಲೆಮಾರಿ ಸಮುದಾಯದಂತಹ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಉಚಿತವಾಗಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ತಲುಪಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಅವರು ತಿಳಿಸಿದರು.
ಇದನ್ನೂ ಓದಿ: ದಿನ ಭವಿಷ್ಯ | ಫೆಬ್ರವರಿ 03 | ವ್ಯವಹಾರಗಳಲ್ಲಿ ಅಧಿಕಾರಿಗಳೊಂದಿಗೆ ಕಿರಿಕಿರಿ, ಅಗತ್ಯಕ್ಕೆ ಆರ್ಥಿಕ ನೆರವು, ಶುಭ ಸುದ್ದಿ
ಚಿತ್ರದುರ್ಗ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ವಿಮುಕ್ತಿ ವಿದ್ಯಾಸಂಸ್ಥೆ ದಮ್ಮ ಕೇಂದ್ರದ ಸಹಯೋಗದಲ್ಲಿ ನಗರದ ಮೆದೇಹಳ್ಳಿ, ಮಾಳಪ್ಪನಹಟ್ಟಿ ಹಾಗೂ ದಾವಣಗೆರೆ ರಸ್ತೆಯ ಸಮೀಪ ವಾಸವಿರುವ ಸುಡುಗಾಡು ಸಿದ್ದ ಅಲೆಮಾರಿಗಳ ಕುಟುಂಬಗಳಿಗಾಗಿ ಈಚೆಗೆ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.
ಅಲೆಮಾರಿ ಕುಟುಂಬದವರು ಶಿಬಿರದ ಸದುಪಯೋಗ ಪಡೆದುಕೊಂಡು ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯಬೇಕು ಎಂದು ಕರೆ ನೀಡಿದರು.
ಟೆಂಟ್ಗಳಲ್ಲಿ ವಾಸವಿರುವ ಕುಟುಂಬಗಳು ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಿ, ಬಿಸಿಯಾದ ಆಹಾರ ಹಾಗೂ ಪೌಷ್ಟಿಕ ಆಹಾರ ಸೇವಿಸಬೇಕು. ಮಕ್ಕಳಿಗೆ ಸಕಾಲಕ್ಕೆ ಲಸಿಕೆ ಕೊಡಿಸುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ತುರ್ತು ಸಂದರ್ಭಗಳಲ್ಲಿ ತಡಮಾಡದೆ 108 ಸೇವೆ ಪಡೆಯಬೇಕು ಎಂದು ಕಿವಿಮಾತು ಹೇಳಿದರು.
ನಮ್ಮ ಕ್ಲಿನಿಕ್ ವೈದ್ಯಾಧಿಕಾರಿ ಡಾ.ಅಕ್ಷತಾ ಮತ್ತು ತಂಡದವರು 49 ಜನರಿಗೆ ಅಸಾಂಕ್ರಾಮಿಕ ರೋಗಗಳ ಪರೀಕ್ಷೆ ನಡೆಸಿದರು. ಪರೀಕ್ಷೆಯ ವೇಳೆ ಹೊಸದಾಗಿ ಇಬ್ಬರಿಗೆ ರಕ್ತದೊತ್ತಡ ಹಾಗೂ ಮೂವರಿಗೆ ಮಧುಮೇಹ ಇರುವುದು ಪತ್ತೆಯಾಗಿದ್ದು, ಚಿಕಿತ್ಸೆ ಆರಂಭಿಸಲಾಗಿದೆ. ಈಗಾಗಲೇ ಅನಾರೋಗ್ಯ ಹೊಂದಿರುವ 15 ಜನರಿಗೆ ಅಗತ್ಯ ಔಷಧಿಗಳನ್ನು ವಿತರಿಸಲಾಯಿತು.
ಇದನ್ನೂ ಓದಿ: ಅಡಿಕೆ ಧಾರಣೆ | 2 ಫೆಬ್ರವರಿ | ಚನ್ನಗಿರಿ, ಭೀಮಸಮುದ್ರ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್ಸ್
ಕಾರ್ಯಕ್ರಮದಲ್ಲಿ ವಿಮುಕ್ತಿ ವಿದ್ಯಾಸಂಸ್ಥೆಯ ಅಧ್ಯಕ್ಷೆ ಅನ್ನಪೂರ್ಣ, ಪದಾಧಿಕಾರಿಗಳಾದ ಬಿಬಿಜಾನ್, ನಾಗರತ್ನ, ನಿರ್ದೇಶಕ ವಿಶ್ವಸಾಗರ, ಹೆಚ್.ಐ.ಒ ಪ್ರವೀಣ್ ಕುಮಾರ್, ಕ್ಯಾಸಾಪುರ ಸಿ.ಎಚ್.ಒ ಹಿಮಬಿಂದು ಹಾಗೂ ಸುಡುಗಾಡು ಸಿದ್ದ ಸಮುದಾಯದ ಮುಖಂಡರಾದ ಬಾಬಣ್ಣ, ವಸಂತಿ, ಗಂಗಜ್ಜ, ಆಶಾ ಮೆಂಟರ್ ತಬಿತಾ, ಆಶಾ ಕಾರ್ಯಕರ್ತೆ ಜ್ಯೋತಿ, ಅಲೆಮಾರಿ ಜನಾಂಗದವರು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

