CHITRADURGA NEWS | 01 SEPTEMBER 2026
ಚಿತ್ರದುರ್ಗ: ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಬೋಧಕ ಆಸ್ಪತ್ರೆ (ಸಿಎಂಸಿಆರ್‍ಐ) ಮತ್ತು ದಾವಣಗೆರೆ ಎಸ್.ಎಸ್. ನಾರಾಯಣ ಹೆಲ್ತ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ನಗರದ ಸಿಎಂಸಿಆರ್‍ಐ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪ್ರತಿ ತಿಂಗಳ ಮೊದಲನೇ ಬುಧವಾರ ಉಚಿತವಾಗಿ ಮಕ್ಕಳ ಹೃದಯ ತಪಾಸಣೆ ನಡೆಸಲಾಗುವುದು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 31 | ಮೆಕ್ಕೆಜೋಳ, ಸೂರ್ಯಕಾಂತಿ, ರಾಗಿ ರೇಟ್
ಪ್ರತಿ ತಿಂಗಳ ಮೊದಲನೇ ಬುಧವಾರದಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1 ರವರೆಗೆ ಮಕ್ಕಳ ಹೃದಯ ತಜ್ಞ ಡಾ.ಜಿ.ಎಸ್.ಅನಿಲ್ ಕುಮಾರ್ ತಪಾಸಣೆ ನಡೆಸುವರು.
ಮಕ್ಕಳಲ್ಲಿ ಪದೇ ಪದೇ ಕಾಣಿಸಿಕೊಳ್ಳುವ ಸೋಂಕು ಹಾಗೂ ಚರ್ಮ ಮತ್ತು ತುಟಿಗಳು ನೀಲಿ ಬಣ್ಣಕ್ಕೆ ತಿರುಗುವುದು, ಉಸಿರಾಟದಲ್ಲಿ ತೊಂದರೆ ಅಥವಾ ಏದುಸಿರು ಬಿಡುವುದು, ಅನಿಯಮಿತ ಹೃದಯ ಬಡಿತ, ಮರುಕಳಿಸುವ ಕೆಮ್ಮುನಂತಹ ಲಕ್ಷಣ ಕಂಡುಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಈ ಉಚಿತ ಸೇವೆಯ ಸದುಪಯೋಗ ಪಡಿಸಿಕೊಳ್ಳಬೇಕು.
ಇದನ್ನೂ ಓದಿ: 9 ತಿಂಗಳಲ್ಲಿ ಜಿಲ್ಲೆಯ 33 ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ಕಾಮಗಾರಿ ಪೂರ್ಣ | ಸಚಿವ ವಿ.ಸೋಮಣ್ಣ
ಹೆಚ್ಚಿನ ಮಾಹಿತಿಗಾಗಿ 9535025743, 7259759982 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಸಿಎಂಸಿಆರ್‍ಐ ವೈದ್ಯಕೀಯ ಅಧೀಕ್ಷಕರು ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

