Connect with us

    ಉಚಿತ Mo-jo-Kit | ಪತ್ರಕರ್ತರಿಂದ ಅರ್ಜಿ ಆಹ್ವಾನ

    ಮುಖ್ಯ ಸುದ್ದಿ

    ಉಚಿತ Mo-jo-Kit | ಪತ್ರಕರ್ತರಿಂದ ಅರ್ಜಿ ಆಹ್ವಾನ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 11 March 2025

    ಚಿತ್ರದುರ್ಗ: ಕರ್ನಾಟಕ ಮಾಧ್ಯಮ ಅಕಾಡೆಮಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ Mo-Jo-Kit ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

    Also Read: ಅಡಿಕೆ ಧಾರಣೆ | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್

    ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಜಿದಾರರು ಈ ಕೆಳಕಂಡ ಷರತ್ತು ಗೊಳಪಟ್ಟು ಅರ್ಜಿ ಸಲ್ಲಿಸಬಹುದಾಗಿದೆ.

    ಅರ್ಜಿದಾರರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಾಗಿರಬೇಕು ಅಥವಾ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಅಥವಾ ಉಪಗ್ರಹ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು.

    ಮಾಧ್ಯಮಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಅನುಭವವಿರಬೇಕು ಹಾಗೂ ಇದಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಒದಗಿಸಬೇಕು. ಪತ್ರಿಕೆಯ ಸಂಪಾದಕರಾಗಿದ್ದಲ್ಲಿ ಪತ್ರಿಕೆಯು ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರಿರಬೇಕು.

    Also Read: Astrology: ದಿನ ಭವಿಷ್ಯ | ಮಾರ್ಚ್ 11 | ಹೊಸ ವ್ಯವಹಾರದಲ್ಲಿ ಹೂಡಿಕೆ, ಉದ್ಯೋಗಿಗಳಿಗೆ ಕೆಲಸದ ಒತ್ತಡ

    ಅರ್ಜಿದಾರರು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತಾವು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಮುಖ್ಯಸ್ಥರಿಂದ ಸೇವಾ ದೃಢೀಕರಣ ಪತ್ರ ಸಲ್ಲಿಸಬೇಕು.

    ಈ ಹಿಂದೆ ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ ಇತರೆ ಸರ್ಕಾರಿ ಸಂಸ್ಥೆಗಳಿಂದ ಸೌಲಭ್ಯ ಪಡೆದ ಫಲಾನುಭವಿಗಳಾಗಿದ್ದರೆ, ಅರ್ಜಿ ಸಲ್ಲಿಸುವಂತಿಲ್ಲ.

    ಪತ್ರಿಕೆಯು ನಿರಂತರವಾಗಿ ಪ್ರಕಟಗೊಳ್ಳುತ್ತಿದ್ದು, ಪತ್ರಿಕೆ ಮೇಲಾಗಲಿ ಹಾಗೂ ಸಂಪಾದಕರ ಮೇಲಾಗಲಿ ಯಾವುದೇ ರೀತಿಯ ಕ್ರಿಮಿನಲ್ ಅಪರಾಧ ಮೊಕದ್ದಮೆಗಳು ಇರಬಾರದು.

    ಸರ್ಕಾರದ ವಿವಿಧ ಸಮಿತಿ/ಸಂಸ್ಥೆಗಳಿಗೆ ನೇಮಕ ಮಾಡಿದ ನಾಮ ನಿರ್ದೇಶಿತ ಸದಸ್ಯರುಗಳನ್ನು ಪರಿಗಣಿಸಲಾಗುವುದಿಲ್ಲ.

    Also Read: ತುರ್ತು ಪಶು ಚಿಕಿತ್ಸೆಗೆ 1962ಗೆ ಕರೆ ಮಾಡಿ | ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

    ಅಭ್ಯರ್ಥಿಗಳು ಸ್ವಯಂ ಅರ್ಜಿಗಳೊಂದಿಗೆ ಪೂರಕ ದಾಖಲೆಗಳನ್ನು ದಿನಾಂಕ: 20.03.2025 ರೊಳಗಾಗಿ ಇ-ಮೇಲ್ ವಿಳಾಸ: karnatakamediaacademy@gmail.com ಗೆ ಸಲ್ಲಿಸಬೇಕು ಅಥವಾ ಅಂಚೆ ವಿಳಾಸ: ಕಾರ್ಯದರ್ಶಿಗಳು, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ||. ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು-560001 ಇಲ್ಲಿಗೆ ಅರ್ಜಿಗಳನ್ನು ಕಳುಹಿಸಬೇಕು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top