CHITRADURGA NEWS | 12 JUNE 2026
ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕಿನ ತೇಕಲವಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳಲು ಕದರೆ ದೇವರೆಟ್ಟಿ ಗ್ರಾಮದಲ್ಲಿ ಗುರುವಾರ ಬೆಂಗಳೂರಿನ ಸಾರಥಿ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ 9 ಸರ್ಕಾರಿ ಪ್ರಾಥಮಿಕ ಶಾಲೆಗಳ 550 ಮಕ್ಕಳಿಗೆ ಉಚಿತವಾಗಿ ನೋಟ್ ಬುಕ್, ಬ್ಯಾಗ್ ಹಾಗೂ ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು.

ಇದನ್ನೂ ಓದಿ: ಕೃಷಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಾತಿ | ಅರ್ಜಿ ಅಹ್ವಾನ
ಸಾರಥಿ ಟ್ರಸ್ಟ್‍ನ ಸದಸ್ಯರಾದ ಪಾರ್ವತಿ, ಸುಧೀರ್ ಕುಮಾರ್, ಪ್ರಭ ಕೃಷ್ಣಮೂರ್ತಿ ಹಾಗೂ ಪದ್ಮಾವತಿ ಅವರು ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಿಟ್‍ಗಳನ್ನು ವಿತರಿಸಿ, ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಎಸ್‍ಡಿಎಂಸಿ ಅಧ್ಯಕ್ಷ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಚಿತ್ತಪ್ಪ, ಗೋವಿಂದಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯರಾದ ಶ್ರೀಧರ್ ಮತ್ತು ಸಿಆರ್‍ಪಿ ರಂಗಸ್ವಾಮಿ, ಮುಖ್ಯ ಶಿಕ್ಷಕರಾದ ಶಿವಲಿಂಗ ಸ್ವಾಮಿ, ನಾಗರಾಜ್ ನಾಯಕ್, ಸಾಕಮ್ಮ, ಹನುಮಂತಪ್ಪ, ರುದ್ರಪ್ಪ ಹಾಗೂ ಸಹ ಶಿಕ್ಷಕರಾದ ರೇವಪ್ಪ, ಕೃಷ್ಣ, ಗುರುಲಿಂಗಪ್ಪ ಸೇರಿದಂತೆ ಸುತ್ತಮುತ್ತಲಿನ ಶಾಲೆಗಳ ಶಿಕ್ಷಕರು, ಪೋಷಕರು ಮತ್ತು ಗ್ರಾಮಸ್ಥರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
