CHITRADURGA NEWS | 17 November 2026
ಚಿತ್ರದುರ್ಗ: ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ನವದೆಹಲಿ ರವರ ಪಿಎಂ-ಜನ್‍ಮನ್ (PM-JANMAN) ಹಾಗೂ ಡಿಎ-ಜೆಜಿಜೆಯುಎ (DA-JGUA) ಯೋಜನೆಯಡಿ ಗ್ರಾಮಗಳಲ್ಲಿನ ಪರಿಶಿಷ್ಟ ಪಂಗಡ ಹಾಗೂ ನೈಜ ದುರ್ಬಲ ಬುಡಕಟ್ಟು ಸಮುದಾಯದ ಯುವಕರಿಗೆ ಸೋಲಾರ್ ಪಿವಿ ಉಚಿತ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಚನ್ನಗಿರಿ, ತೀರ್ಥಹಳ್ಳಿ, ಭದ್ರಾವತಿ ಹಾಗೂ ರಾಜ್ಯದ ಅಡಿಕೆ ಧಾರಣೆ
ಮಿನಿಸ್ಟ್ರಿ ಆಫ್ ನ್ಯೂ ಅಂಡ್ ರಿನ್ಯೂಯೆಬಲ್ ಎನರ್ಜಿ (MNRE) ಸಹಯೋಗದೊಂದಿಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಸೋಲಾರ್ ಪ್ರೊಪ್ರೆನ್ಯೂರ್ಸ್ (Solar Entrepreneurs) ಕಾರ್ಯಕ್ರಮದಡಿ ಸೋಲಾರ್ ಪಿವಿ ಹೆಲ್ಪರ್-ಕಮ್-ಅಸಿಸ್ಟೆಂಟ್ ಟೆಕ್ನಿಷಿಯನ್’ (Solar PV Helper-cum Assistant Technician) ತರಬೇತಿ ನೀಡಲಾಗುತ್ತದೆ. ಈ ತರಬೇತಿ ಪಡೆಯಲು ಆಸಕ್ತಿಯಿರುವ ಪಿವಿಟಿಜಿ (PVTG) ಮತ್ತು ಎಸ್‍ಟಿ (ST) ಸಮುದಾಯದ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಕನಿಷ್ಠ 5ನೇ ತರಗತಿ ಉತ್ತೀರ್ಣರಾಗಿರಬೇಕು, ಓದಲು ಮತ್ತು ಬರೆಯಲು ತಿಳಿದಿರಬೇಕು ಹಾಗೂ ತರಬೇತಿಯಲ್ಲಿ ಭಾಗವಹಿಸಲು ಮತ್ತು ಅಗತ್ಯ ತಾಂತ್ರಿಕ ಕೌಶಲ್ಯಗಳನ್ನು ಕಲಿಯಲು ಆಸಕ್ತಿ ಹೊಂದಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ ಹಾಗೂ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಚಿತ್ರದುರ್ಗ (ಜೆ.ಸಿ.ಆರ್. ಬಡಾವಣೆ, 4ನೇ ಕ್ರಾಸ್ (ಪೂರ್ವ), ಗಣೇಶ ದೇವಸ್ಥಾನದ ಹತ್ತಿರ, ಚಿತ್ರದುರ್ಗ) ಅಥವಾ ಆಯಾ ತಾಲೂಕಿನ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಹಾಗೂ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿಗಳನ್ನು ಪಡೆದು ಸಲ್ಲಿಸಬಹುದು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಅರ್ಜಿಗಳನ್ನು ಭರ್ತಿ ಮಾಡಿ ನವೆಂಬರ್ 25ರ ಸಂಜೆ 5.30ರೊಳಗೆ ಆಯಾ ತಾಲೂಕಿನ ಕಚೇರಿಯಲ್ಲಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

