CHITRADURGA NEWS | 01 SEPTEMBER 2026
ಚಿತ್ರದುರ್ಗ: ಚಿತ್ರದುರ್ಗ ನಗರದ ಬ್ಯಾಂಕ್ ಕಾಲೋನಿಯಲ್ಲಿರುವ ರುಡ್ ಸೆಟ್ ಸಂಸ್ಥೆ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗಾಗಿ ಸ್ವ ಉದ್ಯೋಗ ಮಾಡಲು ಮಹಿಳೆಯರ ಟೈಲರಿಂಗ್ ಹಾಗೂ ಅಣಬೆ ಬೇಸಾಯ ತರಬೇತಿಗೆ ಸೆಪ್ಟೆಂಬರ್ 02ರಂದು ಸಂದರ್ಶನ ಆಯೋಜಿಸಲಾಗಿದೆ.
ಇದನ್ನೂ ಓದಿ: ಬಿಪಿಎಲ್, ಅಂತ್ಯೋದಯ ಕಾರ್ಡ್ದಾರರಿಗೆ ಇ-ಕೆವೈಸಿ ಕಡ್ಡಾಯ | ಸೆಪ್ಟೆಂಬರ್ 15 ಕೊನೆದಿನ
ಆಸಕ್ತರು ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಮಹಿಳೆಯರ ಟೈಲರಿಂಗ್ ತರಬೇತಿ 31 ದಿನಗಳು ಹಾಗೂ ಅಣಬೆ ಬೇಸಾಯ ತರಬೇತಿ-10 ದಿನಗಳ ತರಬೇತಿ ನೀಡಲಾಗುವುದು. ಊಟ ಮತ್ತು ವಸತಿ ಸಹಿತವಾಗಿ ಸಂಪೂರ್ಣ ಉಚಿತವಾಗಿರುತ್ತದೆ.
19 ರಿಂದ 50 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕನ್ನಡ ಓದಲು ಬರೆಯುವ ಜ್ಞಾನ ಹೊಂದಿರಬೇಕು. ತರಬೇತಿಗೆ ಸಂಬಂಧಿಸಿದಂತೆ ಪ್ರಾಥಮಿಕ ಜ್ಞಾನ ಹೊಂದಿದ್ದು, ಉದ್ಯೋಗ ಮಾಡಬೇಕೆಂಬ ಆಸಕ್ತಿ ಹೊಂದಿರಬೇಕು.
ಆಸಕ್ತರು ತಮ್ಮ ತಮ್ಮ ಮೊಬೈಲ್ ನಂಬರ್ವುಳ್ಳ ಸ್ವವಿಳಾಸದ ಅರ್ಜಿಯೊಂದಿಗೆ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ಬುಕ್ ಜೆರಾಕ್ಸ್ ಪ್ರತಿಗಳೊಂದಿಗೆ ಸೆಪ್ಟೆಂಬರ್ 02ರಂದು ರುಡ್ಸೆಟ್ ಸಂಸ್ಥೆಯಲ್ಲಿ ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದು.
ಇದನ್ನೂ ಓದಿ: ನೂತನ ಜಿಲ್ಲಾಧಿಕಾರಿಯಾಗಿ ರಮ್ಯಾ ಎಸ್ | ಹಾಲಿ ಡಿಸಿ ಟಿ.ವೆಂಕಟೇಶ್ ವರ್ಗಾವಣೆ
ಹೆಚ್ಚಿನ ಮಾಹಿತಿಗಾಗಿ ಮೊ.8431329162, 861828445, 8660627785 ಅನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ರುಡ್ಸೆಡ್ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

