CHITRADURGA NEWS | 29 JANUARY 2026
ಚಿತ್ರದುರ್ಗ: ಬಾಗಲಕೋಟೆಯ ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರದಲ್ಲಿ ‘ಆಡು ಮತ್ತು ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ, ಹೈನುಗಾರಿಕೆ, ಹಣ್ಣು ಬೆಳೆಗಳ ಕೃಷಿ, ಸಾವಯವ ಕೃಷಿ, ಸಮಗ್ರ ಕೃಷಿ, ಅಣಬೆ ಕೃಷಿ, ಜೇನು ಕೃಷಿ, ರೇಷ್ಮೆ ಕೃಷಿ ಮತ್ತು ಪುಷ್ಪ-ತರಕಾರಿ ಬೆಳೆಗಳ ಕೃಷಿ ತರಬೇತಿ ಶಿಬಿರವನ್ನು ಉಚಿತವಾಗಿ ಬಾಗಲಕೋಟೆಯಲ್ಲಿ 2026ರ ಫೆಬ್ರವರಿ ತಿಂಗಳಲ್ಲಿ ಏರ್ಪಡಿಸಲಾಗಿದೆ.
ಇದನ್ನೂ ಓದಿ: ಮಾವಿನಹಳ್ಳಿ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ | ಫೆಬ್ರವರಿ 22 ರಿಂದ 27ರವರೆಗೆ
ಶಿಬಿರದಲ್ಲಿ ಅಧಿಕ ಆದಾಯಕ್ಕಾಗಿ ಅನುಸರಿಸಬೇಕಾದ ಆಧುನಿಕ ಪದ್ಧತಿಗಳು, ಹಣಕಾಸಿನ ನಿರ್ವಹಣೆ ಇತ್ಯಾದಿ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು.
ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳ 18 ರಿಂದ 55 ವರ್ಷದೊಳಗಿನ ರೈತರು, ಸ್ವಸಹಾಯ ಸಂಘದ ಸದಸ್ಯರು, ಯುವಕರು, ಮಹಿಳೆಯರು ಮೊಬೈಲ್ ನಂಬರ್ 9482630790 ಗೆ ಕರೆ ಮಾಡಿ ತಮ್ಮ ಹೆಸರನ್ನು ನೊಂದಾಯಿಸಬಹುದು.
ಇದನ್ನೂ ಓದಿ: 2 ದಿನ ರೈತರಿಗೆ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಹೆಚ್ಚಿನ ಮಾಹಿತಿಗಾಗಿ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಯುನಿಟ್-2, ಸೆಕ್ಟರ್ ನಂ-96, ಅಡ್ಡರಸ್ತೆ-3, ಪಬ್ಲಿಕ್ ಗಾರ್ಡ್‍ನ್ ಹತ್ತಿರ, ದುರ್ಗಾನಗರ, ನವನಗರ-ಬಾಗಲಕೋಟೆ-587103 ಅವರನ್ನು ಸಂಪರ್ಕಿಸಬಹದು ಎಂದು ಕಾರ್ಯನಿರ್ವಹಕ ನಿರ್ದೇಶಕ ರೇವಣಸಿದ್ಧ ಬಳ್ಳೊಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
