CHITRADURGA NEWS | 26 AUGUST 2025
ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಬಬ್ಬೂರಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಆಗಸ್ಟ್ 28 ರಿಂದ 30 ರವರೆಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಜಿಲ್ಲೆಯ ಆಸಕ್ತ ರೈತರಿಗೆ ಸಮಗ್ರ ಪಶುಪಾಲನಾ ಪದ್ದತಿ ಕುರಿತು ಮೂರು ದಿನಗಳ ಉಚಿತ ತರಬೇತಿ ಕಾರ್ಯಕ್ರಮ ಹಮ್ಮಿಕೋಳ್ಳಲಾಗಿದೆ.

ಇದನ್ನೂ ಓದಿ: ಅಲೆಮಾರಿ ಜನಾಂಗಕ್ಕೆ ಶೇ.1% ಮೀಸಲಾತಿಗೆ ಆಗ್ರಹ
ಆಗಸ್ಟ್ 28ರಂದು ಬೆಳಗ್ಗೆ 10ಕ್ಕೆ ಹಿರಿಯೂರು ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ.ನಾಗರಾಜ್, ಹೊಸಯಳನಾಡು ಪಶು ಆಸ್ಪತ್ರೆ ಹಿರಿಯ ಪಶು ವೈದ್ಯಾಧಿಕಾರಿ ಡಾ.ಗುರುಪ್ರಸಾದ್ ಅವರು ವೈಜ್ಞಾನಿಕ ಹೈನುಗಾರಿಕೆ ಪದ್ದತಿ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ.
ಆ.29ರಂದು ಪಶುಪಾಲನಾ ಇಲಾಖೆ ತುಮಕೂರುನಿವೃತ್ತ ಉಪನಿರ್ದೇಶಕ ಡಾ.ಜಿ.ಎಂ.ನಾಗರಾಜ್ ಅವರು ಸಮಗ್ರ ಪಶುಪಾಲನಾ ಪದ್ದತಿಯಡಿ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ಪದ್ದತಿ ಹಾಗೂ ನಾಟಿ ಕೋಳಿ ಸಾಕಾಣಿಕೆ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ.
ಆ.30ರಂದು 2024ನೇ ಸಾಲಿನ ಪಶುಸಂಗೋಪನೆ ಘಟಕದಡಿ ರೈತರತ್ನ ಪ್ರಶಸ್ತಿ ಪುರಸ್ಕøತ ಬ್ಯಾಡಗಿ ತಾಲ್ಲೂಕಿನ ಬುಡಪನಹಳ್ಳಿ ಗ್ರಾಮದ ಪ್ರಗತಿಪರ ರೈತರಾದ ಬಸವರಾಜ್ ಹೆಚ್ ಕ್ವಾಗಳಿ ಅವರು ನಾಟಿ ಕೋಳಿ ಸಾಕಾಣಿ ಮತ್ತು ತಾವು ಅಳವಡಿಸಿದ ಸಮಗ್ರ ಕೃಷಿ ಪದ್ದತಿ ಕುರಿತು ರೈತರಿಗೆ ತಮ್ಮ ಅನುಭವ ಹಂಚಿಕೊಳ್ಳುವರು.
ಇದನ್ನೂ ಓದಿ: ಬ್ಯಾಕ್‍ಲಾಗ್ ಹುದ್ದೆಗಳ ನೇಮಕಕ್ಕೆ ಒತ್ತಾಯ
ತದನಂತರ ಹೊಳಲ್ಕೆರೆ ತಾಲ್ಲೂಕಿನ ಬಸಾಪುರ ಗ್ರಾಮದ ಕೃಷಿಕರಾದ ಬಿ ಕುಮಾರಸ್ವಾಮಿ, ಹೊಸದುರ್ಗ ತಾಲ್ಲೂಕಿನ ಹಳೆಕುಂದೂರು ಗ್ರಾಮದ ಯುವ ಕೃಷಿಕರಾದ ಕೆ.ಎಮ್.ಗುರುಪ್ರಸಾದ್, ಹಿರಿಯೂರು ತಾಲ್ಲೂಕಿನ ಕೃಷ್ಣಾಪುರ ಗ್ರಾಮದ ಯುವಕೃಷಿಕರಾದ ಎನ್.ಕಿರಣ್‍ಕುಮಾರ್ ಹಾಗೂ ಇತರೆ ರೈತರು ಕುರಿ ಮತ್ತು ಮೇಕೆ ಸಾಕಾಣಿಕೆ, ಕೋಳಿ ಸಾಕಾಣಿಕೆ ಮತ್ತು ಹೈನುಗಾರಿಕೆಯಲ್ಲಿ ಅನುಸರಿಸಿದ ಯಶಸ್ವಿ ಪದ್ದತಿಗಳ ಕುರಿತು ತಮ್ಮ ಅನುಭವ ಹಂಚಿಕೆಯನ್ನು ಮಾಡಿಕೊಳ್ಳುವರು.
ಆದ ಪ್ರಯುಕ್ತ ಆಸಕ್ತ 40 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058 ಗೆ ಕರೆಮಾಡಿ ತರಬೇತಿಯ ಸದುಪಯೋಗ ಪಡೆದು ಕೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.
ಇದನ್ನೂ ಓದಿ: ಸಿರಿಯಜ್ಜಿ ಸ್ಮಾರಕ ಲೋಕಾರ್ಪಣೆ | ಮರಣೋತ್ತರ ಪದ್ಮಶ್ರೀ ಪ್ರಶಸ್ತಿಗೆ ಆಗ್ರಹ
ಮೊದಲು ನೋಂದಾವಣಿ ಮಾಡಿಕೊಂಡ 40ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್‍ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನಚೀಟಿಯನ್ನು ತರಲು ಮನವಿ ಮಾಡಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
