CHITRADURGA NEWS | 02 AUGUST 2026
ಚಿತ್ರದುರ್ಗ: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಆಗಸ್ಟ್ 05 ರಿಂದ 7 ರವರೆಗೆ ಆಸಕ್ತ ಪರಿಶಿಷ್ಟ ಪಂಗಡ ರೈತರಿಗೆ ಲಾಭದಾಯಕ ಸುಸ್ಥಿರ ಸಮಗ್ರ ಕೃಷಿ ಪದ್ದತಿ ಕುರಿತು ಮೂರು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಇದನ್ನೂ ಓದಿ: ನಿಮ್ಮ ವಾಹನದ ಮೇಲೆ ‘PRESS’ ಸ್ಟಿಕ್ಕರ್ ಅಂಟಿಸಿದ್ದರೆ ದಂಡ ಗ್ಯಾರೆಂಟಿ | ಜಿಲ್ಲಾ ಪೊಲೀಸರಿಂದ ಎಚ್ಚರಿಕೆ
ಕಾರ್ಯಕ್ರಮದಲ್ಲಿ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್. ರಜನೀಕಾಂತ ಅವರು ರೈತರು ನಿರಂತರವಾಗಿ ಸುಸ್ಥಿರ ಇಳುವರಿ ಪಡೆಯಲು ಅನುಸರಿಸಬೇಕಾದ ಸಮಗ್ರ ಕೃಷಿ ಪದ್ದತಿಗಳ ಕುರಿತು ಮತ್ತು ಪರ್ಯಾಯ ಬೆಳೆ ಬಗ್ಗೆ ಮಾಹಿತಿ ನೀಡುವರು.
ನಂತರ ಹಿರಿಯೂರಿನ ಡಾ. ನಾಗರಾಜ್ ಹಿರಿಯ ಪಶು ವೈಧ್ಯಾದಿಕಾರಿಗಳು, ಹಿರಿಯೂರು ಇವರು ರೈತರಿಗೆ ವೈಜ್ಞಾನಿಕ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಕುರಿತು ರೈತರಿಗೆ ಮಾಹಿತಿ ನೀಡಲಾಗುವುದು.
ತರಬೇತಿಯ ಎರಡನೇ ದಿನ ಬ್ಯಾಡರಹಳ್ಳಿ ಗ್ರಾಮದ ಪ್ರಗತಿಪರ ಸಾವಯವ ಕೃಷಿಕರಾದ ಇಂದೂಧರ ಇವರು ಸುಸ್ಥಿರ ಸಾವಯವ ಮತ್ತು ನೈಸರ್ಗಿಕ ಕೃಷಿ ಪದ್ಧತಿಗಳು, ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ಹನುಮಂತನಾಯ್ಕ್ ರವರು ಎರೆಗೊಬ್ಬರ ಹಾಗೂ ಕಾಂಪೋಸ್ಟ್ ತಯಾರಿಕೆ ಮತ್ತು ಜೇನು ಕೃಷಿ ಕುರಿತು ಮಾಹಿತಿ ನೀಡುವರು.
ತರಬೇತಿಯ ಮೂರನೇ ದಿನ ರೈತರಿಗೆ ತಿಪಟೂರಿನ ಅಕ್ಷಯ ಕಲ್ಪ ಸಮಗ್ರ ಕೃಷಿ ತಾಕಿಗೆ ಅಧ್ಯಯನ ಪ್ರವಾಸವನ್ನು ಆಯೋಜಿಸಲಾಗುವುದು. ಆದ ಪ್ರಯುಕ್ತ ಆಸಕ್ತ 43 ಜನ ಪರಿಶಿಷ್ಟ ಪಂಗಡದ ರೈತ ಬಾಂಧವರು ಮೊಬೈಲ್ ಸಂಖ್ಯೆ 8277931058 ಗೆ ಕರೆ ಮಾಡಿ ದಿನಾಂಕ 03-8-2026 ರ ಒಳಗೆ ನೋಂದಾಯಿಸಿಕೊಳ್ಳಬಹುದು.
ಇದನ್ನೂ ಓದಿ: ಕಾಂಗ್ರೆಸ್ ಸಭೆಯಲ್ಲಿ ಗೊಂದಲ ಸೃಷ್ಟಿಸಿದ ಆರೋಪ -3 ಜನರಿಗೆ ಕಾರಣ ಕೇಳಿ ನೋಟಿಸ್
ತರಬೇತಿಯಲ್ಲಿ ಭಾಗವಹಿಸುವ ರೈತರು ಕಡ್ಡಾಯವಾಗಿ ಎಫ್ ಐ ಡಿ ಅಥವಾ ಚುನಾವಣೆ ಗುರುತಿನ ಚೀಟಿಯನ್ನು ತರಲು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರಾದ ಆರ್ ರಜನಿಕಾಂತ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

