
CHITRADURGA NEWS | 16 SEPTEMBER 2025
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಶಿವಮೊಗ್ಗ ನವುಲೆಯ ಅಡಿಕೆ ಸಂಶೋಧನಾ ಕೇಂದ್ರ ಸಹಯೋಗದಲ್ಲಿ ಇದೇ ಸೆ.19 ರಿಂದ 21 ರವರೆಗೆ ಚಿತ್ರದುರ್ಗ ಜಿಲ್ಲೆಯ ರೈತರಿಗೆ “ಅಡಿಕೆ ಬೆಳೆಯ ಸುಧಾರಿತ ಬೇಸಾಯ ತಾಂತ್ರಿಕತೆ, ಅಡಿಕೆಯಲ್ಲಿ ಅಂತರ ಬೆಳೆಗಳ ಮಹತ್ವ ಮತ್ತು ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿಕೆ” ಕುರಿತು ಮೂರು ದಿನದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಇದನ್ನೂ ಓದಿ: ಗರ್ಭಿಣಿಯರು ಆರೋಗ್ಯ ತಪಾಸಣೆ ಮಾಡಿಸಿ, ಉತ್ತಮ ಆರೋಗ್ಯ ವೃದ್ಧಿಸಿಕೊಳ್ಳಿ | ನ್ಯಾಯಾಧೀಶೆ ರಶ್ಮಿ ಎಸ್ ಮರಡಿ

ಕಾರ್ಯಗಾರದ ಮೊದಲನೇ ದಿನ ಸೆ.19ರಂದು ಬೆಳಗ್ಗೆ 10 ಗಂಟೆಗೆ ಡಾ. ನಾಗರಾಜಪ್ಪ ಅಡಿವಪ್ಪರ್, ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು, ಅಡಿಕೆ ಸಂಶೋಧನಾ ಕೇಂದ್ರ, ಶಿವಮೊಗ್ಗ, ಡಾ. ಸುದೀಪ್, ತೋಟಗಾರಿಕೆ ತಜ್ಞರು, ಡಾ. ಸ್ವಾತಿ, ಕೀಟಶಾಸ್ತ್ರ ತಜ್ಞರು ಮತ್ತು ಡಾ. ಕಿರಣ್, ರೋಗಶಾಸ್ತ್ರಜ್ಞರು ಅವರು ಅಡಿಕೆ ಬೆಳೆಯಲ್ಲಿ ತಳಿಗಳ ಆಯ್ಕೆ, ಬೇಸಾಯ ಕ್ರಮ, ಪೋಷಕಾಂಶಗಳ ನಿರ್ವಹಣೆ, ರೋಗ ಕೀಟಗಳ ನಿರ್ವಹಣೆ ಕುರಿತು ವಿಷಯ ಮಂಡನೆ ಮತ್ತು ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿಕೆಯ ಕುರಿತು ಪ್ರಾತ್ಯಕ್ಷಿಕೆ ಮಾಡಲಿದ್ದಾರೆ.
ಎರಡನೇ ದಿನ ಸೆ.20ರಂದು ಬೆಳಗ್ಗೆ 6 ಗಂಟೆಗೆ ತುಮಕೂರಿನ ಬೆಳ್ಳಾವಿ ಕ್ರಾಸ್ ಹತ್ತಿರದ ಕುರಿಕೆಂಪನಹಳ್ಳಿ ಗ್ರಾಮದ ಅಡಿಕೆಯಲ್ಲಿ ವಿವಿಧ ಅಂತರ ಮತ್ತು ಮಿಶ್ರ ಬೆಳೆ ಬೆಳೆದ ಪ್ರಗತಿಪರ ರೈತರಾದ ಹಫೀಜ್‍ಉಲ್ಲಾಖಾನ್ ಮತ್ತು ಮಷಣಾಪುರದ 100 ಕ್ಕೂ ಅಧಿಕ ಅಂತರ ಮತ್ತು ಮಿಶ್ರಬೆಳೆ ಸಂಯೋಜನೆ ಮಾಡಿದ ಪ್ರಗತಿಪರ ರೈತ ಮೃತ್ಯುಂಜಯಪ್ಪರವರ ತೋಟಕ್ಕೆ ಹಾಗೂ ತುಮಕೂರಿನ ವಿವಿಧ ಜೈವಿಕಗೊಬ್ಬರ ಮತ್ತು ಜೈವಿಕ ಪೀಡೆನಾಶಕ ಉತ್ಪಾದನೆ ಮಾಡುವ ಮಲ್ಟಿಪ್ಲೆಕ್ಸ ಬಯೋಟೆಕ್ ಪ್ರೈ ಲಿ ಸಂಸ್ಥೆಗೆ ಭೇಟಿ ನೀಡಲಾಗುವುದು.
ಮೂರನೇ ದಿನ ಸೆ.21ರಂದು ಬೆಳಗ್ಗೆ 10 ಗಂಟೆಗೆ ಅಡಿಕೆಯಲ್ಲಿ ಸಂಯೋಜನೆ ಮಾಡಬಹುದಾದ ಪ್ರಮುಖಅಂತರ ಹಾಗೂ ಮಿಶ್ರ ಬೆಳೆಗಳ ಮಹತ್ವ ಮತ್ತು ಅವುಗಳ ಬೇಸಾಯ ಕ್ರಮಗಳ ಕುರಿತು ಮಾಹಿತಿ ನೀಡಲಾಗುವುದು.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ | ನಾಳೆ ಉದ್ಘಾಟನೆ
ತರಬೇತಿಯ ಆದ ಪ್ರಯುಕ್ತ ಆಸಕ್ತ 50 ಜನ ರೈತ ಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058 ಗೆ ಕರೆಮಾಡಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.
ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತ ಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತರು ಕಡ್ಡಾಯವಾಗಿ ತಮ್ಮ ಎಫ್‍ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನಚೀಟಿಯನ್ನು ತರಲು ಕೋರಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
