
CHITRADURGA NEWS | 15 JUNE 2025
ಚಿತ್ರದುರ್ಗ: ಯೋಗ ದಿನ ಹಾಗೂ ಭಾರತೀಯ ಯೋಗ ಶಿಕ್ಷಣ ಸಂಸ್ಥೆಯ ನಾಲ್ಕನೇ ವಾರ್ಷಿಕೋತ್ಸವ ಅಂಗವಾಗಿ ಭಾರತೀಯ ಯೋಗ ಶಿಕ್ಷಣ ಸಂಸ್ಥೆ, ಜಿಲ್ಲಾ ಆಯುಷ್ ಇಲಾಖೆ, ಕೋಟೆ ವಾಯುವಿಹಾರಿಗಳ ಸಂಘ ಇವರು ವತಿಯಿಂದ ಮಹಿಳೆಯರಿಗಾಗಿ ಆಯೋಜಿಸಿರುವ ಉಚಿತ ಯೋಗ ಶಿಬಿರವನ್ನು ನಗರದ ಐತಿಹಾಸಿಕ ಕೋಟೆ ಕರುವರ್ತಿ ಬಳಿಯ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಶನಿವಾರ ಹಿರಿಯ ವೈದ್ಯಾಧಿಕಾರಿ ಡಾ.ವಿಜಯಲಕ್ಷ್ಮಿ ಉದ್ಘಾಟಿಸಿದರು.
Also Read: NEET RESULT | SLV PU ಕಾಲೇಜಿಗೆ ದಾಖಲೆಯ ಫಲಿತಾಂಶ

ನಂತರ ಮಾತನಾಡಿದ ಅವರು, ಇಂದಿನ ಧಾವಂತ ಬದುಕಿನಲ್ಲಿ ಮಹಿಳೆಯರು ತಮ್ಮ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯ ಸೇರಿದಂತೆ ಹಲವು ಋತುಚರ್ಯ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಯೋಗದ ಮೊರೆ ಹೋಗುವುದು ಅವಶ್ಯಕವಾಗಿದೆ ಎಂದರು.
ಮಹಿಳೆಯರು ತಮ್ಮ ಜೀವನದ ವಿವಿಧ ಹಂತಗಳಲ್ಲಿ ಅಂದರೆ ಮುಟ್ಟು, ಗರ್ಭಧಾರಣೆ, ಋತುಬಂಧ, ಇತ್ಯಾದಿ ಅನುಭವಿಸುವ ವೇಳೆಯಲ್ಲಿ ಹಾರ್ಮೋನುಗಳ ಬದಲಾವಣೆಗಳು ಮತ್ತು ಒತ್ತಡಗಳನ್ನು ನಿಭಾಯಿಸಲು ಯೋಗವು ವಿಶೇಷವಾಗಿ ಸಹಾಯಕವಾಗಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೋಟೆ ವಾಯುವಿಹಾರಿಗಳ ಸಂಘದ ಅಧ್ಯಕ್ಷ ಆರ್.ಸತ್ಯಣ್ಣ, ಸಾಹಿತಿ ಹಾಗು ಪತ್ರಕರ್ತ ಮೊಹೀದ್ದೀನ್ ಖಾನ್ ಮಾತನಾಡಿದರು.
ಭಾರತೀಯ ಯೋಗ ಶಿಕ್ಷಣ ಸಂಸ್ಥೆಯ ಯೋಗ ಶಿಕ್ಷಕಿಯಾರಾದ ಮಂಜುಳಾ, ವಸಂತಲಕ್ಷ್ಮಿ ಶಿಬಿರಾರ್ಥಿಗಳಿಗೆ ಯೋಗ ತರಬೇತಿ ನೀಡಿದರು.
Also Read: ವೀರಶೈವ ಅರ್ಬನ್ ಕ್ರೆಡಿಟ್ ಕೊ-ಆಪರೇಟಿವ್ ಬ್ಯಾಂಕ್ 89 ಲಕ್ಷ ನಿವ್ವಳ ಲಾಭ
ಈ ವೇಳೆ ಡಾ.ವಿಜಯಲಕ್ಷ್ಮಿಯವರಿಗೆ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ನಿವೃತ್ತ ಪೋಲಿಸ್ ಅಧಿಕಾರಿ ಎಂ.ಮಲ್ಲಿಕಾರ್ಜುನಾಚಾರ್, ರಾಜ್ಯೋತ್ಸವ ಪ್ರಶಸ್ತಿ ವಿಜೇತ ಪರಿಸರ ಸಂರಕ್ಷಕ ಮಲ್ಲಿಕಾರ್ಜುನಪ್ಪ, ರವಿ ಕೆ.ಅಂಬೇಕರ್ ಸೇರಿದಂತೆ ಸಂಸ್ಥೆಯ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
