CHITRADURGA NEWS | 10 March 2026
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಮರಡಿಹಳ್ಳಿ ಗ್ರಾಮದ ನಿವಾಸಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹನುಮಂತಪ್ಪ (108) ಮಂಗಳವಾರ ವಯೋಸಹಜ ಕಾರಣಗಳಿಂದ ನಿಧನರಾಗಿದ್ದಾರೆ.
ಇದನ್ನೂ ಓದಿ: ನಾಳೆಯಿಂದ ವೈದ್ಯರ ಮುಷ್ಕರ | OPD ಬಂದ್ | ಬೇಡಿಕೆಗಳ ಈಡೇರಿಕೆಗೆ ವೈದ್ಯರಿಂದ ಸರ್ಕಾರಕ್ಕೆ ಪಟ್ಟು
1921 ರಲ್ಲಿ ಜನಿಸಿದ ಹನುಮಂತಪ್ಪನವರು, ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ದೇಶಭಕ್ತಿ, ಸರಳತೆ ಮತ್ತು ಉನ್ನತ ಜೀವನ ಮೌಲ್ಯಗಳನ್ನು ಮೈಗೂಡಿಸಿಕೊಂಡಿದ್ದ ಅವರು, ಇಂದಿನ ಪೀಳಿಗೆಗೆ ಮಾರ್ಗದರ್ಶಕರಾಗಿದ್ದರು. ಶತಾಯುಷಿಯಾಗಿದ್ದ ಇವರು ಸುದೀರ್ಘ ಕಾಲ ಸಮಾಜಮುಖಿ ಚಿಂತನೆಗಳೊಂದಿಗೆ ಬದುಕಿದ ಮಹಾನ್ ವ್ಯಕ್ತಿಯಾಗಿದ್ದರು.
ಮೃತರು ಐವರು ಪುತ್ರರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಗ್ರಾಮಸ್ಥರು ಹಾಗೂ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ: ಅಡಿಕೆ ಧಾರಣೆ | 10 ಮಾರ್ಚ್ | ರಾಜ್ಯದ ಪ್ರಮುಖ ಮಾರುಕಟ್ಟೆಗಳ ರೇಟ್
ಮೃತರ ಅಂತ್ಯಕ್ರಿಯೆಯು ನಾಳೆ ಅವರ ಸ್ವಗ್ರಾಮವಾದ ಮರಡಿಹಳ್ಳಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

