
CHITRADURGA NEWS | 14 FEBRUARY 2026
ಚಿತ್ರದುರ್ಗ: ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದವರು, ಹೋರಾಟದಲ್ಲಿ ಲಾಠಿ, ಬೂಟಿನೇಟು ತಿಂದು ಅಜ್ಞಾತವಾಸ, ಜೈಲು ಶಿಕ್ಷೆ ಅನುಭವಿಸಿದವರಿಗೆ ಸರ್ಕಾರ ನೀಡುತ್ತಿರುವ ಗೌರವ ಧನವನ್ನು ಇಪ್ಪತ್ತು ಸಾವಿರಕ್ಕೆ ಹೆಚ್ಚಿಸುವಂತೆ ರಾಜ್ಯ ಸ್ವಾತಂತ್ರ್ಯ ಹೋರಾಟಗಾರರ ಹಿತರಕ್ಷಣಾ ವೇದಿಕೆಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ: ಆಹಾರವಾಹಿನಿ ಯೋಜನೆ | ಅರ್ಜಿ ಆಹ್ವಾನ

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಸಾವಿರಾರು ಜನ ಹೋರಾಡಿದ್ದಾರೆ. ಅನೇಕರು ಬಲಿದಾನವಾಗಿದ್ದಾರೆ. ಹೋರಾಟದಲ್ಲಿ ನೊಂದು ಬೆಂದವರು ಇದ್ದಾರೆ.
ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾದವರಿಗೆ ಈಗ 85 ರಿಂದ 95 ವರ್ಷ ದಾಟಿದ್ದಾರೆ. ಅವರ ಪತ್ನಿಯರಿಗೂ ಇಳಿವಯಸ್ಸು. ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸದ್ಯ ರಾಜ್ಯ ಸರ್ಕಾರದಿಂದ ಹತ್ತು ಸಾವಿರ ರೂ. ಗೌರವಧನ ಸಿಗುತ್ತಿದೆ ಎಂದರು.
ರಾಜ್ಯದಲ್ಲಿ ಸುಮಾರು 2400 ಸ್ವಾತಂತ್ರ್ಯ ಹೋರಾಟಗಾರರಿದ್ದು, ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ಅವರೂ ಇಲ್ಲವಾಗುತ್ತಾರೆ. ಈಗ ಅವರಿಗೆ ನೀಡುತ್ತಿರುವ ಹತ್ತು ಸಾವಿರ ರೂ. ಗೌರವಧನ ಔಷಧಿ, ಮಾತ್ರೆ, ಚಿಕಿತ್ಸೆ, ಆಹಾರಾದಿಗಳಿಗೆ ಸಾಲುತ್ತಿಲ್ಲ. ಜೀವನ ನಿರ್ವಹಣೆಗೆ ತೊಂದರೆಯಾಗುತ್ತಿದ್ದು, ಇದನ್ನು ಇಪ್ಪತ್ತು ಸಾವಿರಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ (ಸ್ವಾತಂತ್ರ್ಯ ಹೋರಾಟಗಾರರ) ಅಧಿವೇಶನಕ್ಕೆ ಈಗ 101 ವರ್ಷ. ಈ ಸಂತೋಷಕ್ಕೆ ಗೌರವಧನವನ್ನು ಹೆಚ್ಚಳ ಮಾಡುವಂತೆ ಮನವಿ ಮಾಡಿದರು.
ಇದನ್ನೂ ಓದಿ: ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ | ನಗರಸಭೆ ಪ್ರಕಟಣೆ
ಇನ್ನೂ ಡಿಸೆಂಬರ್ ತಿಂಗಳ ಗೌರವಧನ ಈವರೆಗೆ ಬಿಡುಗಡೆಯಾಗಿಲ್ಲ. ತಕ್ಷಣ ಅದನ್ನೂ ಬಿಡುಗಡೆ ಮಾಡಬೇಕು. ಕೆಲ ಹೋರಾಟಗಾರರಿಗೆ 6 ತಿಂಗಳಿಂದ ಒಂದೂವರೆ ವರ್ಷದವರೆಗೆ ಗೌರವಧನ ಬಿಡುಗಡೆಯಾಗಿಲ್ಲ. ಬಿಡುಗಡೆ ಮಾಡಲು ಹಲವು ಬಾರಿ ಮನವಿ ಸಲ್ಲಿಸಿದ್ದರೂ ಗಮನಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸ್ವಾತಂತ್ರ್ಯ ಹೋರಾಟಗಾರರಾದ ನರಸಿಂಹಮೂರ್ತಿ ಹಾಗೂ ಹಲವು ಹೋರಾಟಗಾರರ ಕುಟುಂಬದವರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
