
CHITRADURGA NEWS | 04 April 2025
ಚಿತ್ರದುರ್ಗ: ಏಪ್ರಿಲ್ 3 ರಂದು ಗುರುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 11.5 ಮಿ.ಮೀ ಮಳೆಯಾಗಿದೆ.
Also Read: ಚಿತ್ರದುರ್ಗಕ್ಕೆ ವರ್ಷದ ಮೊದಲ ಮಳೆ | ಇಳೆ ತಂಪಾಗುವಂತೆ ಸುರಿದ ಮಳೆ


ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 11.1 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 20.6 ಮಿ.ಮೀ, ಹಿರಿಯೂರು ತಾಲ್ಲೂಕು 8.2 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 7.3 ಮಿ.ಮೀ, ಹೊಸದುರ್ಗ ತಾಲ್ಲೂಕಿನಲ್ಲಿ 15.7 ಮಿ.ಮೀ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 1.7 ಮಿ.ಮೀ ಮಳೆಯಾಗಿದೆ.
ಹೋಬಳಿವಾರು ಮಳೆ ವಿವರ:
ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 13.1 ಮಿ.ಮೀ, ಭರಮಸಾಗರ 15.5 ಮಿ.ಮೀ, ಹಿರೇಗುಂಟನೂರು 44.1 ಮಿ.ಮೀ, ತುರುವನೂರು 21.2 ಮಿ.ಮೀ ಮಳೆಯಾಗಿದೆ.
ಹಿರಿಯೂರು ತಾಲ್ಲೂಕಿನ ಹಿರಿಯೂರು 11.4 ಮಿ.ಮೀ, ಐಮಂಗಲ 2.5 ಮಿ.ಮೀ, ಧರ್ಮಪುರ 9.5 ಮಿ.ಮೀ, ಜವನಗೊಂಡನಹಳ್ಳಿ 11.2 ಮಿ.ಮೀ ಮಳೆಯಾಗಿದೆ.
ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 5.8 ಮಿ.ಮೀ, ನಾಯಕನಹಟ್ಟಿ 20.5 ಮಿ.ಮೀ, ಪರಶುರಾಂಪುರ 6.1 ಮಿ.ಮೀ, ತಳಕು 13.7 ಮಿ.ಮೀ ಮಳೆಯಾಗಿದೆ.
Also Read: ಮಾರುಕಟ್ಟೆ ಧಾರಣೆ | ಇಂದಿನ ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 2.4 ಮಿ.ಮೀ ಹಾಗೂ ದೇವಸಮುದ್ರದಲ್ಲಿ 0.9 ಮಿ.ಮೀ ಮಳೆಯಾಗಿದೆ
ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 9.6 ಮಿ.ಮೀ, ಬಿ.ದುರ್ಗ 5.5 ಮಿ.ಮೀ, ರಾಮಗಿರಿ 13 ಮಿ.ಮೀ, ತಾಳ್ಯ 2.6 ಮಿ.ಮೀ ಮಳೆಯಾಗಿದೆ.
ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 4.3 ಮಿ.ಮೀ, ಮಾಡದಕೆರೆ 10.2 ಮಿ.ಮೀ, ಮತ್ತೋಡು 20 ಮಿ.ಮೀ, ಶ್ರೀರಾಂಪುರ 33.5 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
