CHITRADURGA NEWS | 22 JULY 2026
ಚಿತ್ರದುರ್ಗ: ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ 2026–27ನೇ ಸಾಲಿನ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಧನಸಹಾಯಕ್ಕಾಗಿ ಅರ್ಹ ನೋಂದಾಯಿತ ಸಂಘ-ಸಂಸ್ಥೆಗಳು ಮತ್ತು ಕಲಾವಿದರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಮಳೆ ಕೊರತೆ | ಅಡಿಕೆ, ತೆಂಗು ಬೆಳೆ ಉಳಿಸಿಕೊಳ್ಳುವ ಕುರಿತು ರೈತರಿಗೆ ತರಬೇತಿ
ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳು, ಕಲಾವಿದರಿಗೆ ವಾದ್ಯ ಪರಿಕರ ಹಾಗೂ ವೇಷಭೂಷಣಗಳ ಖರೀದಿಗೆ ಸಹಾಯಧನ ಮತ್ತು ಚಿತ್ರಕಲೆ/ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಧನಸಹಾಯ ನೀಡಲಾಗುವುದು.
ಆಸಕ್ತರು ಜುಲೈ 22 ರಿಂದ ಆಗಸ್ಟ್ 20 ರವರೆಗೆ ಸೇವಾ ಸಿಂಧು ಫೋರ್ಟಲ್ (sevasindhu.karnataka.gov.in) ಮೂಲಕ ಅರ್ಜಿ ಸಲ್ಲಿಸಬಹುದು. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಹಾಗೂ ನೇರವಾಗಿ ಇಲಾಖೆಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಮಾರ್ಗದರ್ಶಿ ಸೂಚಿಗಳನ್ನು www.kannadasiri.karnataka.gov.
ಇದನ್ನೂ ಓದಿ: ಶಂಕರಾಚಾರ್ಯರ ಬಗ್ಗೆ ಅವಹೇಳನ ಹೇಳಿಕೆ ಖಂಡಿಸಿ ಪ್ರತಿಭಟನೆ
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆಗಳಾದ 08024410547, 08022213530, 9986837037, 08022241325 ಅಥವಾ ಜಿಲ್ಲೆಯ ಸೇವಾ ಸಿಂಧು ವ್ಯವಸ್ಥಾಪಕರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

