CHITRADURGA NEWS | 02 October 2026
ಚಿತ್ರದುರ್ಗ: ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ 18 ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಬೋಧಕರು ಹಾಗೂ ಪ್ರದರ್ಶಕರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಡಾ. ಬಿ. ವೈ. ಯುವರಾಜ್ ಅಕ್ಟೋಬರ್ 01 ರಂದು ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಿದರು.
ಇದನ್ನೂ ಓದಿ: ನಾಳೆ KSRTC ಬಸ್ ನಿಲ್ದಾಣ APMC ಮಾರುಕಟ್ಟೆಗೆ ಶಿಫ್ಟ್
ಈ ನೂತನ ನೇಮಕಾತಿಯಿಂದ ಆಯ್ಕೆಯಾದ ವೈದ್ಯರು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಲಿನಿಕಲ್ ಸೇವೆ ಸಲ್ಲಿಸುವುದರ ಜೊತೆಗೆ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಪಠ್ಯ ಬೋಧನೆಯನ್ನೂ ನಡೆಸಲಿದ್ದಾರೆ.
ಅನಾಟಮಿ, ಬಯೋಕೆಮಿಸ್ಟ್ರಿ, ಮೈಕ್ರೋಬಯಾಲಜಿ, ಫಿಸಿಯಾಲಾಜಿ, ಪೆಥಾಲಜಿ, ಫಾರ್ಮಾಕಾಲಾಜಿ, ಕಮ್ಯೂನಿಟಿ ಮೆಡಿಸಿನ್, ಜನರಲ್ ಸರ್ಜರಿ, ಜನರಲ್ ಮೆಡಿಸಿನ್, ಓಬಿಜಿ, ಅರಿವಳಿಕೆ, ಮಕ್ಕಳ ತಜ್ಞರ ವಿಭಾಗ, ಇ.ಎನ್.ಟಿ. ಹಾಗೂ ಬ್ಲಡ್ ಬ್ಯಾಂಕ್ ವಿಭಾಗಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಕಾರ್ಯನಿರ್ವಹಿಸಲಿದ್ದಾರೆ.
ಇದನ್ನೂ ಓದಿ: ಶರಣಸಂಸ್ಕೃತಿ ಉತ್ಸವಕ್ಕೆ ವಿವಿಧ ಸ್ಪರ್ಧೆಗಳ ಆಯೋಜನೆ, ನೋಂದಣಿ ಆರಂಭ
ಚಿತ್ರದುರ್ಗದ ಬೋಧಕ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಉನ್ನತ ಮಟ್ಟದ ಹಾಗೂ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ನೀಡಲು ಈ ನೇಮಕಾತಿ ಅತ್ಯಂತ ಅವಶ್ಯಕವಾಗಿದ್ದು, ಜಿಲ್ಲೆಯ ಜನರಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ಲಭ್ಯವಾಗಲಿದೆ ಎಂದು ಕಾಲೇಜಿನ ನಿರ್ದೇಶಕರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

