CHITRADURGA NEWS | 05 MAY 2026
ಚಿತ್ರದುರ್ಗ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷೆ ಜಿ.ಪಲ್ಲವಿ ಅವರು ಇದೇ ಮೇ 09 ಮತ್ತು 10ರಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕು ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಇದನ್ನೂ ಓದಿ: ಬೆಳೆ ವಿಮೆ ಬಿಡುಗಡೆ ಮಾಡದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ | ರೈತ ಸಂಘ ಎಚ್ಚರಿಕೆ
ಮೇ 09ಂದು ಸಂಜೆ 6ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 9ಕ್ಕೆ ಹಿರಿಯೂರು ನಗರಕ್ಕೆ ಆಗಮಿಸಿ, ಹಿರಿಯೂರು ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡುವರು.
ಮೇ 10ರಂದು ಬೆಳಿಗ್ಗೆ 10ಕ್ಕೆ ಹಿರಿಯೂರು ನಗರದ 12ನೇ ವಾರ್ಡ್ ಮಾರಕ್ಕ ದೇವಸ್ಥಾನದ ಹತ್ತಿರ ಪರಿಶಿಷ್ಟ ಜಾತಿ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯಗಳೊಂದಿಗೆ ಕುಂದು-ಕೊರತೆ ಸಭೆ ನಡೆಸುವರು. ಮಧ್ಯಾಹ್ನ 3ಕ್ಕೆ ಹಿರಿಯೂರು ನಗರದ ತೊರೆಪಕ್ಕದ ಎಲ್ಲಮ್ಮದೇವಿ ದೇವಸ್ಥಾನಹತ್ತಿರದ ಕೊರಮರ ಕಾಲೋನಿಯಲ್ಲಿ ಪರಿಶಿಷ್ಟ ಜಾತಿ ಅಲೆಮಾರಿ ಕೊರಮ ಸಮುದಾಯಗಳೊಂದಿಗೆ ಕುಂದು-ಕೊರತೆ ಸಭೆ ನಡೆಸುವರು.
ಇದನ್ನೂ ಓದಿ: ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘಕ್ಕೆ ಚುನಾವಣೆ | ಮೇ.8ಕ್ಕೆ ಮತಪಟ್ಟಿ ಪ್ರಕಟ
ಸಂಜೆ 5ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಎಂ.ಬಿ.ಶಶಿಧರ್ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

