ಚಿತ್ರದುರ್ಗ ನ್ಯೂಸ್.ಕಾಂ: ರಾಷ್ಟ್ರೀಯ ಸ್ವಯಂಸೇವಕ ಸಂಘದ(RSS) ಕರ್ನಾಟಕ ದಕ್ಷಿಣ ಪ್ರಾಂತದ ನೂತನ ಸಂಘಚಾಲಕರಾಗಿ ಜಿ.ಎಸ್.ಉಮಾಪತಿ ಅವರನ್ನು ಆಯ್ಕೆ ಮಾಡಲಾಗಿದೆ.
ಜಿ.ಎಸ್.ಉಮಾಪತಿ ಅವರು ಮೂಲತಃ ಚಿತ್ರದುರ್ಗ ಜಿಲ್ಲೆ, ಹೊಳಲ್ಕೆರೆ ತಾಲೂಕಿನ ಆಡನೂರು ಗ್ರಾಮದವರು.
ದಾವಣಗೆರೆಯಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸದ ನಂತರ ಮಂಗಳೂರಿನ ಎನ್.ಐ.ಟಿ.ಕೆ.ಯಲ್ಲಿ (ಈ ಹಿಂದೆ ಕೆ.ಆರ್.ಇ.ಸಿ) ಎಂ.ಇ. ಇನ್ ಸ್ಟ್ರಕ್ಚರ್ಸ್ ಆನಂತರ ಕೋಲ್ಕತ್ತಾದಲ್ಲಿ ಎಂ.ಇ ಇನ್ ಪಬ್ಲಿಕ್ ಹೆಲ್ತ್ ಅಧ್ಯಯನ ಪೂರೈಸಿದ್ದಾರೆ.
ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆಯಲ್ಲಿ ಅಧೀಕ್ಷಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿ 2018ರಲ್ಲಿ ನಿವೃತ್ತಿ ಹೊಂದಿದ್ದಾರೆ.
ಇದನ್ನೂ ಓದಿ: ಅಸ್ಪøಶ್ಯತೆ ತೊಡೆದು ಹಾಕಲು ಸ್ವಯಂಸೇವಕರು ಮುಂದಾಗಲು ಕರೆ
ವಿದ್ಯಾರ್ಥಿ ದೆಸೆಯಿಂದಲೇ ಆರೆಸ್ಸೆಸ್ಸ್ ಸಂಪರ್ಕ ಹೊಂದಿ, ವಿವಿಧ ಜವಾಬ್ದಾರಿಗಳನು ನಿರ್ವಹಿಸಿದ್ದಾರೆ.

ಸಂಘದ ಬಳ್ಳಾರಿ ಜಿಲ್ಲೆ ಕಾರ್ಯವಾಹರಾಗಿ, ವ್ಯವಸ್ಥಾ ಪ್ರಮುಖರಾಗಿ, ದಾವಣಗೆರೆ ಜಿಲ್ಲೆಯ ಸಂಘಚಾಲಕರಾಗಿ, ಶಿವಮೊಗ್ಗ ವಿಭಾಗ ಸಂಘಚಾಲಕರಾಗಿ ಜವಾಬ್ದಾರಿ ನಿರ್ವಹಿಸಿದ್ದು, ಪ್ರಸ್ತುತ ಕರ್ನಾಟಕ ದಕ್ಷಿಣ ಪ್ರಾಂತದ ನೂತನ ಪ್ರಾಂತ ಸಂಘ ಚಾಲಕರಾಗಿ ಜವಾಬ್ದಾರಿ ನಿರ್ವಹಿಸಲಿದ್ದಾರೆ.
ಇದೇ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಬೆಂಗಳೂರು ಮಹಾನಗರದ ಸಂಘಚಾಲಕರಾಗಿ ಮಿಲಿಂದ್ ಗೋಖಲೆ, ಮಂಗಳೂರು ವಿಭಾಗದ ಸಂಘಚಾಲಕರಾಗಿ ಡಾ.ನಾರಾಯಣ ಶೆಣೈ ಅವರನ್ನು ಆಯ್ಕೆ ಮಾಡಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
