
ಚಿತ್ರದುರ್ಗ ನ್ಯೂಸ್.ಕಾಂ: ಸಂಭ್ರಮದ ಗಣೇಶ ಚತುರ್ಥಿಗೆ ಇನ್ನೆರಡೇ ದಿನ ಬಾಕಿಯಿದೆ. ಊರು, ಕೇರಿ, ಗಲ್ಲಿ, ಬೀದಿ, ಮನೆ ಮನೆಗಳಿಗೆ ಗಣಪತಿ ಮಹಾರಾಜ ಲಗ್ಗೆ ಇಡುತ್ತಾನೆ. ಅನೇಕರು ಪ್ರತಿಷ್ಠಾಪನೆ ಮಾಡಿದ ದಿನವೇ ಮನೆಯ ಆವರಣದಲ್ಲಿ ಬಕೇಟ್, ತೊಟ್ಟಿಗಳಲ್ಲಿ ವಿಸರ್ಜನೆ ಮಾಡುತ್ತಾರೆ. ತುಸು ದೊಡ್ಡ ಗಣಪತಿ ಮೂರ್ತಿಗಳನ್ನು ವಿಸರ್ಜಿಸಲು ದೊಡ್ಡ ಪ್ರಮಾಣದಲ್ಲಿ ನೀರಿರುವ ಜಾಗ ಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ನಗರಸಭೆ ತನ್ನ ವ್ಯಾಪ್ತಿಯ ಹಲವು ಬಡಾವಣೆಗಳಲ್ಲಿ ಗಣೇಶ ವಿಸರ್ಜನೆಗೆ ಸ್ಥಳಗಳನ್ನು ಗುರುತಿಸಿದೆ.
ಗಣೇಶ ಮೂರ್ತಿಗಳನ್ನು ಪೂಜಿಸಿದ ನಂತರ ನೀರಿನ ಮೂಲಗಳಾದ ಹೊಂಡ, ಕೆರೆ, ಭಾವಿಗಳಲ್ಲಿ ವಿಸರ್ಜಿಸುವುದರಿಂದ ಜಲ ಮಾಲಿನ್ಯ ಹಾಗೂ ಪರಿಸರ ಮಾಲಿನ್ಯ ಉಂಟಾಗಿ ಜೀವ ರಾಶಿಗಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವ ಸಾಧ್ಯತೆ ಇರುವುದರಿಂದ ಪರಿಸರಕ್ಕೆ ದಕ್ಕೆಯಾಗದಂತೆ ಗಣೇಶ ಚತುರ್ಥಿ ಆಚರಿಸಲು ಚಿತ್ರದುರ್ಗ ನಗರಸಭೆ ಈ ತೀರ್ಮಾನ ಕೈಗೊಂಡಿದೆ.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಆಗಮನಕ್ಕೆ ಭರ್ಜರಿ ಸಿದ್ಧತೆ | ಪೆಂಡಾಲ್ ಅಲಂಕಾರವೇ ಕೌತುಕ
ಗಣಪತಿ ವಿಸರ್ಜನಾ ಸ್ಥಳಗಳು:
ಚಿತ್ರದುರ್ಗ ನಗರದ ಒನಕೆ ಓಬವ್ವ ಸ್ಟೆಡಿಯಂ ಹತ್ತಿರ, ಐಯುಡಿಪಿ ರಾಜ್ ಕುಮಾರ್ ಪಾರ್ಕ್, ಕೋಟೆ ರಸ್ತೆಯ ಏಕನಾಥೇಶ್ವರಿ ಪಾದಗುಡಿ ಮುಂಭಾಗ, ಜೆಸಿಆರ್ ಗಣೇಶ ದೇವಸ್ಥಾನದ ಬಳಿ, ಬುರುಜನಹಟ್ಟಿ ಸಿಹಿನೀರು ಹೊಂಡದ ಆವರಣ, ಪತಂಜಲಿ ಆಸ್ಪತ್ರೆ ಪಕ್ಕ, ಕೆಳಗೋಟೆ ಚನ್ನಕೇಶವಸ್ವಾಮಿ ದೇವಸ್ಥಾನದ ಹತ್ತಿರ, ತುರುವನೂರು ರಸ್ತೆ ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಮುಂಭಾಗ, ದವಳಗಿರಿ ಬಡಾವಣೆ ಗಣೇಶ ದೇವಸ್ಥಾನದ ಮುಂಭಾಗ, ಗೋಪಾಲಪುರ ನೀರಿನ ಟ್ಯಾಂಕ್ ಹತ್ತಿರ, ಗುಮಾಸ್ತ ಕಾಲೋನಿಯ ರೈತ ಭವನದ ಬಳಿ, ಜೋಗಿಮಟ್ಟಿ ರಸ್ತೆ ತಿಪ್ಪಿನಘಟ್ಟಮ್ಮ ದೇವಸ್ಥಾನದ ಬಳಿ, ಚಂದ್ರವಳ್ಳಿ ಕೆರೆ ಬಳಿಯ ಬಾವಿಯಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಬಹುದು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

