ಚಿತ್ರದುರ್ಗ ನ್ಯೂಸ್.ಕಾಂ: ಸ್ಥಳೀಯ ಸರ್ಕಾರ ಎಂದೇ ಹೆಸರಾಗಿರುವ ಗ್ರಾಮ ಪಂಚಾಯಿತಿಗಳು ಪರಿಣಾಮಕಾರಿಯಾಗಿ ಆಡಳಿತ ನಡೆಸಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯದ ಪಂಚಾಯತ್‍ರಾಜ್ ಇಲಾಖೆಯಿಂದ ಪ್ರತಿ ವರ್ಷ ನೀಡುವ ಗಾಂಧಿ ಗ್ರಾಮ ಪ್ರಶಸ್ತಿಗೆ ಚಿತ್ರದುರ್ಗ ಜಿಲ್ಲೆಯ 6 ಗ್ರಾಮ ಪಂಚಾಯಿತಿಗಳು ಆಯ್ಕೆಯಾಗಿವೆ.
ರಾಜ್ಯಾದ್ಯಂತ ಒಟ್ಟು 237 ಗ್ರಾಮ ಪಂಚಾಯಿತಿಗಳು ಈ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು, ಚಿತ್ರದುರ್ಗ ಜಿಲ್ಲೆಯ 6 ತಾಲೂಕುಗಳಿಂದ ತಲಾ ಒಂದು ಉತ್ತಮ ಕೆಲಸ ಮಾಡಿರುವ ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ: ಯರಬಳ್ಳಿ ಪಿಡಿಓ ಎಸ್.ಬಸವರಾಜು ಅಮಾನತು
ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ, ಚಳ್ಳಕೆರೆ ತಾಲೂಕಿನ ಎನ್.ಮಹಾದೇವಪುರ, ಹೊಳಲ್ಕೆರೆ ತಾಲೂಕಿನ ಭರಮಣ್ಣ ನಾಯಕನ ದುರ್ಗ(ಬಿ.ದುರ್ಗ), ಹೊಸದುರ್ಗ ತಾಲೂಕಿನ ಕಬ್ಬಳ, ಹಿರಿಯೂರು ತಾಲೂಕಿನ ರಂಗನಾಥಪುರ ಹಾಗೂ ಮೊಳಕಾಲ್ಮೂರು ತಾಲೂಕಿನ ಸಂತೆಗುಡ್ಡ ಗ್ರಾಮ ಪಂಚಾಯಿತಿಗಳನ್ನು ಆಯ್ಕೆಯಾಗಿವೆ.
ಪ್ರಶಸ್ತಿಗೆ ಆಯ್ಕೆಯಾದ ಗ್ರಾಮ ಪಂಚಾಯಿತಿಗಳಿಗೆ ಅಕ್ಟೋಬರ್ 2 ರಂದು ನಡೆಯುವ ಗಾಂಧಿ ಜಯಂತಿ ಸಂದರ್ಭದಲ್ಲಿ ಬೆಂಗಳೂರಿನ ವಿಧಾನಸೌಧದ ಬಾಂಕ್ವೇಟ್ ಹಾಲ್‍ನಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದ್ದು, ಪ್ರಶಸ್ತಿ ಜೊತೆಗೆ 5 ಲಕ್ಷ ರೂ. ನಗದು ಬಹುಮಾನವೂ ದೊರೆಯಲಿದೆ.
ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಈ ಸಮಾರಂಭದಲ್ಲಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

