By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
    6 hours ago
    ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
    ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
    6 hours ago
    Rain
    ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ | ಹದವಾಗಿ ಸುರಿದ ರೋಹಿಣಿ
    7 hours ago
    Rudset Institute
    ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
    12 hours ago
    ಸಾವಯವ ಕೃಷಿ ಮತ್ತು ಜೇನು ಕೃಷಿ ಕುರಿತು ತರಬೇತಿ
    ಸಾವಯುವ ಕೃಷಿ ಪದ್ದತಿಯಿಂದ ಮುಂದಿನ ಪೀಳಿಗೆ ದಾರಿದೀಪ | ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ
    12 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    3 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 day ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    4 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    19 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    3 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    18 hours ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    19 hours ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    2 days ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    2 days ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    3 days ago
Reading: ಗಾಂಧೀಜಿ ಜಯಂತಿ | ಸ್ವಚ್ಛತಾ ಶ್ರಮದಾನ | ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಗಾಂಧೀಜಿ ಜಯಂತಿ | ಸ್ವಚ್ಛತಾ ಶ್ರಮದಾನ | ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

News Desk Chitradurga News
Last updated: 2 October 2025 18:09
News Desk Chitradurga News
8 months ago
Share
Gandhiji Jayanti , Cleanliness work
ಗಾಂಧೀಜಿ ಜಯಂತಿ | ಸ್ವಚ್ಛತಾ ಶ್ರಮದಾನ
SHARE

CHITRADURGA NEWS |02 OCTOBER 2025

ಚಿತ್ರದುರ್ಗ: ಸತ್ಯ ಹಾಗೂ ಅಹಿಂಸೆ ಎಂಬ ಅಸ್ತ್ರಗಳಿಂದ ಬ್ರಿಟೀಷರ ವಿರುದ್ದ ಹೋರಾಡಿದ ಮಹಾತ್ಮ ಗಾಂಧೀಜಿ, ಈ ಎರಡೂ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಇವರ ಹಾದಿಯಲ್ಲೇ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಯವರು ನಡೆದರು. ನೈತಿಕ ರಾಜಕಾರಣಕ್ಕೆ ಗಾಂಧೀಜಿ ಹಾಗೂ ಶಾಸ್ತ್ರೀಜಿಯವರು ಮಾದರಿಯಾಗಿದ್ದರು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಏರ್ಪಡಿಸಲಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗಾಂಧೀಜಿಯವರ ಜೀವನವೇ ನಮಗೆಲ್ಲ ಸಂದೇಶ. ಸತ್ಯವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಗಾಂಧೀಜಿಯವರು ನಡೆಸಿದ ಪ್ರಯತ್ನವನ್ನು ಅವರ ಆತ್ಮಕಥನದಲ್ಲಿ ನಾವು ಕಾಣಬಹುದು. ಹೋರಾಟದ ಜೊತೆಗೆ ವೈಯಕ್ತಿಕವಾಗಿ ಎದುರಿಸಿದ ದೌರ್ಬಲ್ಯಗಳ ಬಗ್ಗೆ ಆತ್ಮಚರಿತ್ರೆಯಲ್ಲಿ ನಿರ್ಭಯದಿಂದ ಹೇಳಿಕೊಂಡಿದ್ದಾರೆ. ನಾವೆಲ್ಲರು ಗಾಂಧೀ ಮಾರ್ಗದಲ್ಲಿ ಸಾಗಿದರೆ ನೈತಕವಾಗಿ ಬಲವಾಗಿರುವ ಸ್ವಸ್ಥ ಸಮಾಜವನ್ನು ನಿರ್ಮಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ತಿಳಿಸಿದರು.

ಪ್ರಸ್ತುತ ಜಗತ್ತಿನಾದ್ಯಂತ ಹಿಂಸೆ ತಾಂಡವವಾಡುತ್ತಿದೆ. ಯುವ ಜನತೆ ಭ್ರಮಾಲೋಕದಲ್ಲಿ ಇದ್ದಾರೆ. ಸತ್ಯ ಸಂಗತಿಗಳಿಂದ ದೂರವಾಗಿದ್ದಾರೆ. ಓದು ಎನ್ನುವುದು ಕೇವಲ ಕೆಲಸ ಗಿಟ್ಟಿಸಿಕೊಳ್ಳುವ ಮಾರ್ಗವಾಗಿ ಉಳಿದಿದೆ. ಯುವ ಜನತೆ ಬುದ್ದ, ಬಸವ, ಗಾಂಧಿ ಹಾಗೂ ಅಂಬೇಡ್ಕರ್ ಮಾರ್ಗದಲ್ಲಿ ಸಾಗಬೇಕು. ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎನ್ನುವಂತೆ ಲಾಲ್ ಬಹದ್ದೂರ್ ಶಾಸ್ತ್ರೀ ವ್ಯಕ್ತಿತ್ವ ಮಹೋನ್ನತವಾದುದು. ಶಾಸ್ತ್ರೀಜಿ ಅವರ ಪ್ರಾಮಾಣಿಕತೆ ಹಾಗೂ ಕರ್ತವ್ಯಪರತೆ ನಮಗೆಲ್ಲಾ ಮಾದರಿ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ಚಿತ್ರದುರ್ಗ ಧೈರ್ಯದ ಸಂಕೇತ ಒನಕೆ ಓಬವ್ವ | ಮನೋವೈದ್ಯೆ ಡಾ.ಸೌಜನ್ಯ ವಸಿಷ್ಠ

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ್ಯ ತಾಜ್‍ಪೀರ್ ಮಾತನಾಡಿ, ಸ್ವಾತ್ಯಂತ್ರ ಹೋರಾಟಕ್ಕೆ ಧುಮುಕುವ ಮುನ್ನ ಗಾಂಧೀಜಿ ದೇಶವನ್ನು ಸುತ್ತಿ ಬಡ ಜನರ ಜೀವನವನ್ನು ಅರಿತುಕೊಂಡರು. ತಮ್ಮ ಐಶಾರಾಮಿ ಜೀವನವನ್ನು ತ್ಯಜಿಸಿ ಬಡವರ ಶ್ರೇಯೋಭಿವೃದ್ಧಿಗಾಗಿ ದುಡಿದರು. ಅರೆ ಬಟ್ಟೆಯ ದೋತಿ ಹಾಗೂ ಖಾದಿ ವಸ್ತ್ರ ಧರಿಸಿ ಗಾಂಧೀಜಿ ದುಂಡು ಮೇಜಿನ ಸಮ್ಮೇಳನದಲ್ಲಿ ಭಾಗವಹಿಸಿ ಬ್ರಿಟನ್ ರಾಜನನ್ನು ಭೇಟಿಯಾದರು. ಸ್ವಾತ್ಯಂತ್ರ ಹೋರಾಟದ ಜೊತೆಗೆ ದೇಶದ ಸಾಮಾಜಿಕ ಸುಧಾರಣೆಗೂ ಗಾಂಧೀಜಿ ಕೊಡುಗೆ ನೀಡಿದ್ದಾರೆ ಎಂದರು.

ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ ಮಾತನಾಡಿ ಮಹಾತ್ಮ ಗಾಂಧೀಜಿ ಸತ್ಯ ಅಂಹಿಸೆಯ ಮೂಲಕ ರಕ್ತರಹಿತವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು ಎಂದರು.

Prize distribution to the winners of the essay competition
ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಕುರಿತು ಉಪನ್ಯಾಸ ನೀಡಿದ ನಿವೃತ್ತ ಪ್ರಾಂಶುಪಾಲ ಡಾ.ಹೆಚ್.ಗುಡ್ಡದೇಶ್ವರಪ್ಪ, ನಾವು ಯಾವುದೇ ಕೆಲಸ, ಸೇವೆ ಮಾಡಬೇಕಾದರೆ ವಾಸ್ತವಿಕ ನೆಲೆಗಟ್ಟಿನ ಆಧಾರದ ಮೇಲೆ ಇರಬೇಕು. 

ವಾಸ್ತಾವಿಕತೆಯನ್ನು ನಾವು ಗಾಂಧೀಜಿಯವರಿಂದ ಕಲಿತುಕೊಳ್ಳಬೇಕಿದೆ. ಶೋಷಣೆ, ವರ್ಣವ್ಯವಸ್ಥೆಯಿಂದ ನಲುಗಿಹೋಗಿದ್ದ ರೈತರ ಹಾಗೂ ಶೋಷಿತರ ಅಂತರಾಳವನ್ನು ಕಂಡುಕೊಳ್ಳುವ ಪ್ರಯತ್ನಪಟ್ಟ ಅವರು, ಸತ್ಯವನ್ನೇ ದೇವರು ಎಂದು ಅರಿತು ಅಹಿಂಸಾ ಮಾರ್ಗದ ಮೂಲಕ ಸತ್ಯವನ್ನು ಕಂಡುಕೊಂಡವರು ಗಾಂಧೀಜಿ ಎಂದು ಹೇಳಿದರು.

ಇದನ್ನೂ ಓದಿ: ವಚನ ಕಮ್ಮಟ RANK ವಿಜೇತರಿಗೆ ಪ್ರಶಸ್ತಿ ಪ್ರದಾನ

ಗಾಂಧೀಜಿಯವರ ಆಲೋಚನೆಗಳು, ಚಿಂತನೆಗಳು ಬಹಳ ಶ್ರೇಷ್ಟತೆಯಿಂದ ಕೂಡಿವೆ. ಗಾಂಧೀಜಿಯವರು ಅವರ ದೌರ್ಬಲ್ಯಗಳನ್ನು ಸಹ ಬಹಿರಂಗ ಪಡಿಸುವ ಮೂಲಕ ಆತ್ಮವಿಮರ್ಶೆ ಮೂಲಕ ಮುಕ್ತವಾಗಿ ಹಂಚಿಕೊಂಡಿದ್ದಾರೆ. ಗಾಂಧೀಜಿಯವರು ನಾಯಕರಷ್ಟೇ ಅಲ್ಲದೇ ನಾಯಕರನ್ನು ಬೆಳೆಸಿದವರು. ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗದೇ ಜಾಗತಿಕ ಮಟ್ಟದಲ್ಲಿಯೂ ಮಾರ್ಟಿನ್ ಲೂಥರ್ ಕಿಂಗ್, ನೆಲ್ಸನ್ ಮಂಡೇಲಾ ಸೇರಿದಂತೆ ಹಲವು ನಾಯಕರು ಗಾಂಧೀಜಿಯವರ ಪ್ರಭಾವಕ್ಕೆ ಒಳಗಾಗಿದ್ದಾರೆ ಎಂದು ತಿಳಿಸಿದ ಅವರು, ಸರ್ವರ ಕಲ್ಯಾಣಕ್ಕಾಗಿ ಶ್ರಮಿಸಿದ ಗಾಂಧೀಜಿಯವರು ಸಮಾಜ ಸುಧಾರಕ, ಸಂತ, ದಾರ್ಶನಿಕರು ಹೌದು ಎಂದರು.

ಲಾಲ್ ಬಹದ್ದೂರ್ ಶಾಸ್ತ್ರಿ ಅವರು, ರಾಜಕೀಯ ಎನ್ನುವುದು ಸೇವೆ, ರಾಜಕೀಯ ಸೇವೆಗೆ ಪ್ರಾಮಾಣಿಕತೆಯ ಸ್ಪರ್ಶ ಬೇಕು ಎಂದು ಅರ್ಥೈಸಿದ ಮಹಾನ್ ಚೇತನ ಎಂದು ಅಭಿಪ್ರಾಯಪಟ್ಟರು.

ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ತತ್ವಾದರ್ಶಗಳು ಒಂದೇ ರೀತಿಯಾಗಿದ್ದು, ನಮ್ಮೆಲ್ಲರಿಗೂ ಆದರ್ಶಪ್ರಾಯವಾಗಿವೆ. ತಾವು ಪ್ರತಿಪಾದಿಸಿದ ಆದರ್ಶಗಳಂತೆ ಬದುಕಿದ ಈ ಇಬ್ಬರೂ ಮಹನೀಯರು ಜನಸಾಮಾನ್ಯರು ಹಾಗೂ ದೇಶದ ಒಳಿತಿಗಾಗಿ ಶ್ರಮಿಸಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಗಾಂಧೀಜಿ ಪ್ರತಿಪಾದಿಸಿದ ಅಹಿಂಸೆ ಹಾಗೂ ಸತ್ಯದ ತತ್ವಗಳನ್ನು ಶಾಸ್ತ್ರೀಜಿಯವರೂ ಸಹ ತಮ್ಮ ಜೀವನದುದ್ದಕ್ಕೂ ಅನುಸರಿಸಿದರು. ಇಬ್ಬರು ಮಹನೀಯರು ದೇಶದ ರಾಜಕೀಯ ಸ್ವಾತಂತ್ರ್ಯ, ಆರ್ಥಿಕ, ಸಾಮಾಜಿಕ ಹಾಗೂ ಸವಾರ್ಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದರು ಎಂದು ಹೇಳಿದರು.

ಇದನ್ನೂ ಓದಿ: ಟೇಕ್ವೋಂಡಾ ಸ್ಪರ್ಧೆ | SJM ಪದವಿ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

ದೇಶದ ಜನತೆಗೆ “ನನ್ನ ಜೀವನವೇ ನನ್ನ ಸಂದೇಶ” ಎಂದು ತಿಳಿಸಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಮತ್ತು “ಜೈ ಜವಾನ್ ಜೈ ಕಿಸಾನ್” ಎಂದು ಘೋಷಣೆ ನೀಡಿದ ಲಾಲ್ ಬಹದ್ದೂರ್ ಶಾಸ್ತ್ರಿಯವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಹೇಳಿದರು.

ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

ಮಹಾತ್ಮಾ ಗಾಂಧೀಜಿ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲೆಯ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.

ಪ್ರೌಢಶಾಲಾ ವಿಭಾಗದಲ್ಲಿ ಚಿತ್ರದುರ್ಗ ತಾಲ್ಲೂಕು ಚವಲಿಹಳ್ಳಿ ಗೊಲ್ಲರಹಟ್ಟಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜೆ.ತನುಜ, ಹೊಸದುರ್ಗ ತಾಲ್ಲೂಕು ಕಂಗುವಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕೆ.ಬಿ.ದೀಕ್ಷಾ, ಹಿರಿಯೂರು ತಾಲ್ಲೂಕು ಹರಿಯಬ್ಬೆ ಕರ್ನಾಟಕ ಪಬ್ಲಿಕ್ ಶಾಲೆಯ ಅಪೂರ್ವ. ಪದವಿಪೂರ್ವ ಕಾಲೇಜು ವಿಭಾಗದಲ್ಲಿ ಹೊಸದುರ್ಗ ತಾಲ್ಲೂಕು ಶ್ರೀರಾಂಪುರ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಬಿ.ಎನ್.ಕವಿತಾ, ಹೊಳಲ್ಕೆರೆ ತಾಲ್ಲೂಕು ಚಿಕ್ಕಜಾಜೂರು ಎಸ್‍ಜೆಎಂ ಪದವಿಪೂರ್ವ ಕಾಲೇಜಿನ ಎಸ್.ಸಂಜನ, ಚಿತ್ರದುರ್ಗ ತಾಲ್ಲೂಕು ಸಿರಿಗೆರೆ ಬಿಎಲ್‍ಆರ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕಾಳಮ್ಮ ಹಾಗೂ ಪದವಿ/ಸ್ನಾತಕೋತ್ತರ ವಿಭಾಗದಲ್ಲಿ ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜಿನ ವಿದ್ಯಾರ್ಥಿನಿ ಗೌತಮಿ, ಚಿತ್ರದುರ್ಗ ತಾಲ್ಲೂಕು ಸಿರಿಗೆರೆ ಎಂ.ಬಸವಯ್ಯ ವಸತಿ ವಿದ್ಯಾಲಯದ ವಿದ್ಯಾರ್ಥಿನಿ ಕೆ.ಎಂ.ಶ್ರೀರಕ್ಷ, ಚಿತ್ರದುರ್ಗ ತಾಲ್ಲೂಕು ಭರಮಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಪಿ.ನಿರ್ಮಿತ ಅವರಿಗೆ ಕ್ರಮವಾಗಿ ಪ್ರಥಮ ಬಹುಮಾನ ರೂ.3000, ದ್ವಿತೀಯ-2000 ಹಾಗೂ ತೃತೀಯ-ರೂ.1000ಗಳ ಬಹುಮಾನ ವಿತರಣೆ ಪ್ರಮಾಣಪತ್ರ ವಿತರಣೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಚಿತ್ರದುರ್ಗ ಸಂತಜೋಸೆಫ್ ಕಾನ್ವೆಂಟ್ ಶಾಲೆಯ ವಿದ್ಯಾರ್ಥಿಗಳು ಸರ್ವಧರ್ಮ ಪ್ರಾರ್ಥನೆ ಮಾಡಿದರು. ಮೀನಾಕ್ಷಿ ಭಟ್ ಮತ್ತು ಸಂಗಡಿಗರು ಗಾಂಧೀಜಿಯವರ ಪ್ರಿಯವಾದ ಗೀತ ಗಾಯನ ನಡೆಸಿಕೊಟ್ಟರು. ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ನಿರೂಪಿಸಿದರು.

ಸ್ವಚ್ಛತಾ ಶ್ರಮದಾನ:

ಗಾಂಧಿ ಜಯಂತಿ ಅಂಗವಾಗಿ ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ಒನಕೆ ಓಬವ್ವ ವೃತ್ತದಲ್ಲಿ ಸ್ವಚ್ಚತೆ ಕಾರ್ಯ ನಡೆಸುವ ಮೂಲಕ ಶ್ರಮದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಎಂ.ಪಿ. ಅನಿತಾ ರಮೇಶ್, ಉಪಾಧ್ಯಕ್ಷೆ ಶಕೀಲಾಬಾನು, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ಜಿ.ಪಂ. ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್, ನಗರಸಭೆ ಆಯುಕ್ತೆ ಲಕ್ಷ್ಮೀ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ. ಗುರುನಾಥ್, ಡಿಡಿಪಿಐ ಮಂಜುನಾಥ್, ಡಿಡಿಪಿಯು ಕೆ. ತಿಮ್ಮಯ್ಯ, ಸಮಾಜ ಕಲ್ಯಾಣಾ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsEssay competitionGandhiji JayantiPrizeSwachhata Shramadaanಗಾಂಧೀಜಿ ಜಯಂತಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರಬಂಧ ಸ್ಪರ್ಧೆಬಹುಮಾನಸ್ವಚ್ಛತಾ ಶ್ರಮದಾನ
Share This Article
Facebook Email Print
Previous Article ಅರ್ಜಿ ಅಹ್ವಾನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
Next Article today bhavishya ದಿನ ಭವಿಷ್ಯ | ಅಕ್ಟೋಬರ್ 03 | ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ, ದೂರದ ಪ್ರಯಾಣ ಬೇಡ, ಆರೋಗ್ಯದಲ್ಲಿ ಎಚ್ಚರ
Leave a Comment

Leave a Reply Cancel reply

Your email address will not be published. Required fields are marked *

ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
ಮುಖ್ಯ ಸುದ್ದಿ
ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
ಮುಖ್ಯ ಸುದ್ದಿ
Rain
ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ | ಹದವಾಗಿ ಸುರಿದ ರೋಹಿಣಿ
ಮುಖ್ಯ ಸುದ್ದಿ
Rudset Institute
ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up