By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Gandhiji – Lal Bahadur Shastri; ಗಾಂಧೀಜಿ – ಶಾಸ್ತ್ರೀಜಿ ಜಯಂತಿ | ಸಚಿವ ಡಿ.ಸುಧಾಕರ್ ಭಾಗೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Gandhiji – Lal Bahadur Shastri; ಗಾಂಧೀಜಿ – ಶಾಸ್ತ್ರೀಜಿ ಜಯಂತಿ | ಸಚಿವ ಡಿ.ಸುಧಾಕರ್ ಭಾಗೀ

ಮುಖ್ಯ ಸುದ್ದಿ

Gandhiji – Lal Bahadur Shastri; ಗಾಂಧೀಜಿ – ಶಾಸ್ತ್ರೀಜಿ ಜಯಂತಿ | ಸಚಿವ ಡಿ.ಸುಧಾಕರ್ ಭಾಗೀ

News Desk Chitradurga News
Last updated: 2 October 2024 19:34
News Desk Chitradurga News
9 months ago
Share
ನೀಲಕಂಠೇಶ್ವರ ದೇಗುಲದಲ್ಲಿರುವ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಗೆ ಸಚಿವ ಡಿ.ಸುಧಾಕರ್ ಮಾಲಾರ್ಪಣೆ
ನೀಲಕಂಠೇಶ್ವರ ದೇಗುಲದಲ್ಲಿರುವ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಗೆ ಸಚಿವ ಡಿ.ಸುಧಾಕರ್ ಮಾಲಾರ್ಪಣೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 02 OCTOBER 2024

ಚಿತ್ರದುರ್ಗ: ಮಹಾತ್ಮ ಗಾಂಧೀಜಿ(Gandhiji) ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ(Lal Bahadur Shastri)ಯವರು ಸತ್ಯ, ಅಹಿಂಸೆ, ತ್ಯಾಗ, ಬಲಿದಾನ ಮತ್ತು ಸರಳತೆ ಮೌಲ್ಯಗಳ ಪ್ರತೀಕವಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ(Minister) ಡಿ.ಸುಧಾಕರ್ ಹೇಳಿದರು.

ಕ್ಲಿಕ್ ಮಾಡಿ ಓದಿ: V.Somanna; ಭದ್ರಾ ಮೇಲ್ದಂಡೆ ಯೋಜನೆಗೆ ಒಂದೂವರೆ ತಿಂಗಳಲ್ಲಿ ಕೇಂದ್ರದ ಅನುದಾನ | ಸಚಿವ ಸೋಮಣ್ಣ ಭರವಸೆ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಏರ್ಪಡಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಭಾರತದ ಇತಿಹಾಸದಲ್ಲಿ ಅಕ್ಟೋಬರ್ 02 ಈ ಮಹನೀಯರು ಜನಿಸಿದ ಸುದಿನ. ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ತತ್ವಾದರ್ಶಗಳು ಒಂದೇ ರೀತಿಯಾಗಿದ್ದು, ನಮಗೆಲ್ಲರಿಗೂ ಆದರ್ಶಪ್ರಾಯವಾಗಿವೆ.

ತಾವು ಪ್ರತಿಪಾದಿಸಿದ ಆದರ್ಶಗಳಂತೆ ಬದುಕಿದ ಈ ಇಬ್ಬರೂ ಮಹನೀಯರು ಜನಸಾಮಾನ್ಯರು ಹಾಗೂ ದೇಶದ ಒಳಿತಿಗಾಗಿ ಶ್ರಮಿಸಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಿದ್ದರು. ಈರ್ವರೂ ಮಹನೀಯರ ವಯಸ್ಸಿನ ಅಂತರ ಸುಮಾರು 35 ವರ್ಷಗಳಾಗಿದ್ದು, ಗಾಂಧೀಜಿ ಪ್ರತಿಪಾದಿಸಿದ ಅಹಿಂಸೆ ಹಾಗೂ ಸತ್ಯದ ತತ್ವಗಳನ್ನು ಶಾಸ್ತ್ರೀಜಿಯವರೂ ಸಹ ತಮ್ಮ ಜೀವನದುದ್ದಕ್ಕೂ ಅನುಸರಿಸಿದರು. ಇಬ್ಬರು ಮಹನೀಯರು ದೇಶದ ರಾಜಕೀಯ ಸ್ವಾತಂತ್ರ್ಯ, ಆರ್ಥಿಕ, ಸಾಮಾಜಿಕ ಹಾಗೂ ಸವಾರ್ಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದರು ಎಂದು ಹೇಳಿದರು.

ಕ್ಲಿಕ್ ಮಾಡಿ ಓದಿ: Lake; ಕೆರೆಗಳಿಗೆ ನೀರು ತುಂಬಿಸುವುದು ನನ್ನ ಮೊದಲ ಆದ್ಯತೆ | ಶಾಸಕ ಎಂ.ಚಂದ್ರಪ್ಪ 

ಗಾಂಧೀಜಿ ಸ್ವಚ್ಛತೆಗೆ ಆದ್ಯತೆ ನೀಡಿದ್ದರು. ಸ್ವಾತಂತ್ರ್ಯ ಹೋರಾಟದ ಜೊತೆಗೆ ಜನರು ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆಯನ್ನು ಮೈಗೂಡಿಸಿಕೊಳ್ಳವಂತೆ ಕರೆ ನೀಡಿದರು. ಗಾಂಧೀಜಿಯವರ ಚಿಂತನೆ, ತತ್ವಾದರ್ಶಗಳನ್ನು ಇಂದಿನ ಯುವ ಪೀಳಿಗೆಗೆ ತಿಳಿಸಿಕೊಡುವ ಉದ್ದೇಶವನ್ನು ನಮ್ಮ ಸರ್ಕಾರ ಹೊಂದಿದೆ.

ಜಿಲ್ಲಾಡಳಿತದಿಂದ ಇಲ್ಲಿ ನಿರಂತರವಾಗಿ ಸಾಹಿತ್ಯ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಹೋಗಲು ಯೋಜಿಸಲಾಗಿದೆ. ಜಯಂತಿಯ ಈ ಶುಭ ದಿನದಂದು ನ್ಯಾಯಯುತ, ಶಾಂತಿಯುತ ಮತ್ತು ಸುಸ್ಥಿರ ಜಗತ್ತಿಗೆ ನಾವು ಹೇಗೆ ಕೊಡುಗೆ ನೀಡಬಹುದು ಎಂಬುದರ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸಚಿವ ಡಿ.ಸುಧಾಕರ್ ತಿಳಿಸಿದರು.

ನಾವೆಲ್ಲರು ಜೀವನದಲ್ಲಿ ಸತ್ಯ, ಅಹಿಂಸೆ ಮತ್ತು ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಹಾಗೂ ವೈಯುಕ್ತಿಕ ಮತ್ತು ಸಾರ್ವಜನಿಕ ಜೀವನದಲ್ಲಿ ಸ್ವಚ್ಛತೆಯನ್ನು ಕಾಪಾಡುವ ಕುರಿತು ಪ್ರತಿಜ್ಞೆ ಮಾಡಿ ಅದರಂತೆ ಬದುಕನ್ನು ರೂಪಿಸಿಕೊಳ್ಳಬೇಕು. ರಾಜ್ಯ ಸರ್ಕಾರ ಸತ್ಯವನ್ನು ಎತ್ತಿ ಹಿಡಿಯುವಲ್ಲಿ ಮತ್ತು ಸಾಮಾಜಿಕ ನ್ಯಾಯವನ್ನು ಪರಿಪಾಲಿಸುವಲ್ಲಿ ಸದಾ ಗಾಂಧೀಜಿಯವರ ಮೌಲ್ಯಗಳನ್ನು ಅಳವಡಿಸಿಕೊಂಡು ಮುನ್ನಡೆಯುತ್ತಾ ಬಂದಿದೆ.

ಕ್ಲಿಕ್ ಮಾಡಿ ಓದಿ: Power Cut; ಮಾಡದಕೆರೆಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ದೇಶದ ಜನತೆಗೆ “ನನ್ನ ಜೀವನವೇ ನನ್ನ ಸಂದೇಶ” ಎಂದು ತಿಳಿಸಿದ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಮತ್ತು “ಜೈ ಜವಾನ್ ಜೈ ಕಿಸಾನ್” ಎಂದು ಘೋಷಣೆ ನೀಡಿದ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಕರೆ ನೀಡಿದರು.

ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಕುರಿತು ಉಪನ್ಯಾಸ ನೀಡಿದ ಸಾಹಿತಿ ಹಾಗೂ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಹುರುಳಿ ಎಂ.ಬಸವರಾಜ್, ಮಹಾತ್ಮಾ ಗಾಂಧೀಜಿಯವರು ಸತ್ಯ ಮತ್ತು ಅಹಿಂಸೆಯ ನೇತಾರರಾಗಿ ಈ ಎರಡು ಅಸ್ತ್ರಗಳ ಮೂಲಕ ಸಮಾಜದ ಅಂಕುಡೊಂಕುಗಳು, ಬ್ರಿಟೀಷರ ದಬ್ಬಾಳಿಕೆಯನ್ನು, ಉಳ್ಳವರ ಕಿರುಕುಳ ತಪ್ಪಿಸಿ, ಸಮ ಸಮಾಜಕಟ್ಟುವಲ್ಲಿ ಮಹತ್ತರವಾದ ಕಾರ್ಯ ಮಾಡಿದ್ದಾರೆ.

ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರು ಚಿಂತನೆಗಳು ಸರ್ವಕಾಲಿಕವಾಗಿವೆ. ಇಂತಹ ಮಹಾನ್ ಆದರ್ಶ ವ್ಯಕ್ತಿಗಳ ಜೀವನ ಚರಿತ್ರೆ ಓದುವ ಮೂಲಕ ನಮ್ಮ ಬದುಕು ಕಟ್ಟಿಕೊಳ್ಳೊಣ ಎಂದು ಹೇಳಿದರು.

ಕ್ಲಿಕ್ ಮಾಡಿ ಓದಿ: ಲಂಚ ಪಡೆದ ಗ್ರಾಮ ಆಡಳಿತಾಧಿಕಾರಿ SUSPENSION

ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಆಯುಷ್ ಕಿಟ್ ವಿತರಣೆ ಮಾಡಲಾಯಿತು. ಸ್ವಚ್ಛತಾ ಹೀ ಸೇವಾ ಪಾಕ್ಷಿಕದ ಅಂಗವಾಗಿ ಸ್ವಚ್ಛತೆ ಅಭಿಯಾನದಡಿ ಸ್ವಚ್ಛತೆ, ನೈರ್ಮಲ್ಯ ಹಾಗೂ ಐಇಸಿ ಹಾಗೂ ವಿವಿಧ 08 ವಿಭಾಗಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ನಡುವೆ ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ಚಿತ್ರದುರ್ಗ ನಗರಸಭೆಗೆ 07 ಪ್ರಶಸ್ತಿ ಲಭಿಸಿದ್ದು, ಅತ್ಯುತ್ತಮ ಸಾಧನೆ ತೋರಿದ ನಗರ ಸ್ಥಳೀಯ ಸಂಸ್ಥೆಗಳಿಗೆ ಹಾಗೂ ಪೌರಕಾರ್ಮಿಕರಿಗೆ ಪ್ರಶಸ್ತಿ ಹಾಗೂ ಸ್ಮರಣಿಕೆ ವಿತರಿಸಲಾಯಿತು.

ಸಂತಜೋಸೆಫ್ ಕಾನ್ವೆಂಟ್ ಶಾಲೆಯ ವಿದ್ಯಾರ್ಥಿಗಳು ಸರ್ವಧರ್ಮ ಪ್ರಾರ್ಥನೆ ಮಾಡಿದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಕೆ.ಡಿ.ಪಿ ಸದಸ್ಯ ನಾಗರಾಜು, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ ಸಿಇಓ ಎಸ್.ಜೆ.ಸೋಮಶೇಕರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ, ತಹಸಿಲ್ದಾರ್ ನಾಗವೇಣಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಲಿಕ್ ಮಾಡಿ ಓದಿ: Retired employees; ಕಪ್ಪು ಪಟ್ಟಿ ಧರಿಸಿ ನಿವೃತ್ತ ನೌಕರರಿಂದ ಧರಣಿ

ಆಹಾರ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಸ್ವಚ್ಛತಾ ಪ್ರತಿಜ್ಞಾ ವಿಧಿ ಬೋಧಿಸಿದರು.

ಸ್ವಚ್ಛತಾ ನಡಿಗೆಗೆ ಚಾಲನೆ:

ಮಹಾತ್ಮಾ ಗಾಂಧೀಜಿ ಜಯಂತಿ ಅಂಗವಾಗಿ ನಗರದ ಹೊಳಲ್ಕೆರೆ ರಸ್ತೆಯ ನೀಲಕಂಠೇಶ್ವರ ದೇಗುಲದ ಮುಂಭಾಗದಿಂದ “ಸ್ವಚ್ಛತಾ ನಡಿಗೆ” ಕಾರ್ಯಕ್ರಮಕ್ಕೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಮಹಾತ್ಮಾ ಗಾಂಧೀಜಿ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಸ್ವಚ್ಛತಾ ನಡಿಗೆ ಕಾರ್ಯಕ್ರಮಕ್ಕೆ ಮುನ್ನ ನಗರದ ನೀಲಕಂಠೇಶ್ವರ ದೇಗುಲದಲ್ಲಿರುವ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ನಂತರ ಸಚಿವರು ಕೂಡ ಕಾಲ್ನಡಿಗೆಯಲ್ಲಿ ಪಾಲ್ಗೊಂಡು ಗಾಂಧಿ ವೃತ್ತ, ಎಸ್‍ಬಿಎಂ ವೃತ್ತ, ಪ್ರವಾಸಿ ಮಂದಿರ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆವರೆಗೆ ಸ್ವಚ್ಛತಾ ನಡಿಗೆ ನಡೆಸಲಾಯಿತು. ದಾರಿಯುದ್ದಕ್ಕೂ ಸಾರ್ವಜನಿಕರಿಗೆ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಜಾಗೃತಿ ಫಲಕಗಳನ್ನು ಪ್ರದರ್ಶಿಸಲಾಯಿತು. ಬಳಿಕ ಎಲ್ಲ ಗಣ್ಯರಿಂದ ಒನಕೆ ಓಬವ್ವ ವೃತ್ತ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ಕೈಗೊಳ್ಳಲಾಯಿತು.

ಕ್ಲಿಕ್ ಮಾಡಿ ಓದಿ: ADGP ಚಂದ್ರಶೇಖರ್‍ ಅಮಾನತುಗೊಳಿಸಿ ಸೂಕ್ತ ತನಿಖೆಗೆ ಜೆಡಿಎಸ್ ಆಗ್ರಹ 

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತಾ ಬಿ.ಎನ್., ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ ಸೇರಿದಂತೆ ಜನಪ್ರತಿನಿಧಿಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesCleanup WalkjayantiKannada Latest NewsKannada NewsLal Bahadur ShastriMahatma GandhiMinister D. SudhakarNonviolencetrueಅಹಿಂಸೆಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಮಹಾತ್ಮ ಗಾಂಧೀಜಿಲಾಲ್ ಬಹದ್ದೂರ್ ಶಾಸ್ತ್ರೀಸಚಿವ ಡಿ.ಸುಧಾಕರ್‌ಸತ್ಯಸ್ವಚ್ಛತಾ ನಡಿಗೆ
Share This Article
Facebook Email Print
Previous Article ಭದ್ರಾ ಮೇಲ್ದಂಡೆ ಯೋಜನೆಗೆ ಒಂದೂವರೆ ತಿಂಗಳಲ್ಲಿ ಕೇಂದ್ರದ ಅನುದಾನ | ಸಚಿವ ಸೋಮಣ್ಣ ಭರವಸೆ V.Somanna; ಭದ್ರಾ ಮೇಲ್ದಂಡೆ ಯೋಜನೆಗೆ ಒಂದೂವರೆ ತಿಂಗಳಲ್ಲಿ ಕೇಂದ್ರದ ಅನುದಾನ | ಸಚಿವ ಸೋಮಣ್ಣ ಭರವಸೆ
Next Article SJM DENTAL ಕಾಲೇಜಿನಲ್ಲಿ ಪದವಿ ಪ್ರದಾನ | 55 ವಿದ್ಯಾರ್ಥಿಗಳಿಗೆ BDS ಪ್ರಮಾಣ ಪತ್ರ SJM DENTAL ಕಾಲೇಜಿನಲ್ಲಿ ಪದವಿ ಪ್ರದಾನ | 55 ವಿದ್ಯಾರ್ಥಿಗಳಿಗೆ BDS ಪ್ರಮಾಣ ಪತ್ರ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up