
CHITRADURGA NEWS | 23 JUNE 2024
ಚಿತ್ರದುರ್ಗ: ಒಡಿಶಾದಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ರೈಲಿನಲ್ಲಿ ಬರೋಬ್ಬರಿ 34 ಲಕ್ಷ ರೂ. ಮೌಲ್ಯದ ಗಾಂಜಾ ಪತ್ತೆಯಾಗಿದೆ.
‘ಟಾಟಾ ನಗರ’ ರೈಲಿನಲ್ಲಿ ದಾವಣಗೆರೆ ರೈಲ್ವೇ ಪೊಲೀಸರು ದಾಳಿ ನಡೆಸಿ, ಚಿತ್ರದುರ್ಗ ಬಳಿ ರೈಲಿನ ಬೋಗಿಯಲ್ಲಿ ಎರಡು ಬ್ಯಾಗುಗಳಲ್ಲಿದ್ದ 34 ಕೆ.ಜಿ.ಗಾಂಜಾ ಪತ್ತೆ ಮಾಡಿದ್ದಾರೆ.

ಇದನ್ನೂ ಓದಿ: ಹಲ್ಲೆ ನಡೆಸಿ ಮನೆ ದರೋಡೆ | ಸ್ಥಳಕ್ಕೆ ಎಸ್ಪಿ ಭೇಟಿ
ಒಂದು ಬೋಗಿಯಲ್ಲಿ ಗಾಂಜಾ ಇದ್ದ ಬ್ಯಾಗುಗಳನ್ನು ಇಟ್ಟು, ಮತ್ತೊಂದು ಬೋಗಿಯಲ್ಲಿ ಆರೋಪಿಗಳು ಪ್ರಯಾಣಿಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.
ಪೊಲೀಸರು ಗಾಂಜಾ ಬ್ಯಾಗುಗಳನ್ನು ವಶಕ್ಕೆ ಪಡೆದು, ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿರುವಾಗಲೇ ಪರಾರಿಯಾಗಿದ್ದಾರೆ.
ಇದನ್ನೂ ಓದಿ: ಅಡಿಕೆ ಹರಳು ಉದುರುವ, ಹೊಂಬಾಳೆ ಒಣಗುವ ಸಮಸ್ಯೆ ತೀವ್ರ | ರೈತರು ಕೈಗೊಳ್ಳಬಹುದಾದ ಪರಿಹಾರವೇನು ?
ಈ ನಿಟ್ಟಿನಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ದಾವಣಗೆರೆ ರೈಲ್ವೇ ಪೊಲೀಸರು, ತನಿಖೆ ಆರಂಭಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
