CHITRADURGA NEWS | 27 JULY 2026
ಚಿತ್ರದುರ್ಗ: ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳ ಅಭಿಪ್ರಾಯ ಸಂಗ್ರಹಿಸಿ ಜಿಲ್ಲಾ ಕಾಂಗ್ರೆಸ್‍ಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಿ ಪಕ್ಷವನ್ನು ಸಂಘಟಿಸುವುದು ಸಂಘಟನ್ ಸೃಜನ್ ಅಭಿಯಾನದ ಉದ್ದೇಶ ಎಂದು ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು ಹಾಗೂ ಜಿಲ್ಲಾ ವೀಕ್ಷಕರಾದ ರಿಪಿನ್‍ಬೊಹರಾ ಹೇಳಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 27 | ರಾಗಿ ರೇಟ್ ಎಷ್ಟಿದೆ?
ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವುದು ರಾಹುಲ್‍ಗಾಂಧಿರವರ ಭಾರತ್ ಜೋಡೊ ಯಾತ್ರೆಯ ಉದ್ದೇಶ. ದೇಶದ ಪ್ರತಿ ಪ್ರಜೆಗೆ ತಲುಪಿಸುವುದು ಅಭಿಯಾನದ ಗುರಿ. 2025 ರಲ್ಲಿ ಆರಂಭಗೊಂಡ ಈ ಅಭಿಯಾನ 22 ರಾಜ್ಯಗಳಲ್ಲಿದೆ. 2027 ಕ್ಕೆ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಮುಂಬರುವ ವಿಧಾನಸಭೆ, ಪಾರ್ಲಿಮೆಂಟ್ ಚುನಾವಣೆ ಹಾಗೂ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷ ಅಧಿಕಾರ ಹಿಡಿಯಬೇಕಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಅನೇಕ ರಾಜಕೀಯ ಸವಾಲುಗಳನ್ನು ಪಕ್ಷ ಎದುರಿಸುತ್ತಿದೆ. ಆರು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಶಾಸಕರು, ಮಾಜಿ ಶಾಸಕರು, ಎಂಎಲ್‍ಸಿ. ಎಕ್ಸ್ ಎಂ.ಪಿ.ಗಳ ಜೊತೆ ಚರ್ಚಿಸಿ ನಂತರ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು. ಈ ಸಂಬಂಧ ಆರು ಹೆಸರುಗಳನ್ನು ಎಐಸಿಸಿ. ಹಾಗೂ ಕೆಪಿಸಿಸಿ ಕಳಿಸಲಾಗುವುದು.
ಧರ್ಮ ಜಾತಿ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಕೋಮುವಾದಿ ಬಿಜೆಪಿ.ಯನ್ನು ಕಿತ್ತೊಗೆದು ಮುಂದೆ ಕೇಂದ್ರದಲ್ಲಿ ಪಕ್ಷವನ್ನು ಅಧಿಕಾರ ತರಬೇಕು. ಶೋಷಿತರು, ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರಿಗೆ ಬಿಜೆಪಿ. ತಾರತಮ್ಯವೆಸಗುತ್ತಿದೆ. ಕಾಂಗ್ರೆಸ್‍ನಿಂದ ಮಾತ್ರ ಎಲ್ಲರಿಗೂ ಸಾಮಾಜಿಕ ನ್ಯಾಯ ದೊರಕಲಿದೆ ಎಂದರು.
ಇದನ್ನೂ ಓದಿ: ಮನೆ ಮನೆ ಭೇಟಿ ಮಾಡಿದ ಕೆ.ಎಸ್.ನವೀನ್ | ಮತದಾರರ ಪಟ್ಟಿ ಪರಿಷ್ಕರಣೆಗೆ ಬಿಜೆಪಿ ಜಾಗೃತಿ
ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ ಮಾತನಾಡಿ, ಸಂವಿಧಾನ ಪ್ರಜಾಪ್ರಭುತ್ವ ಉಳಿಸುವುದಕ್ಕಾಗಿ ರಾಹುಲ್‍ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ನಡೆಸಿದರು.
ಈಗ ರಾಷ್ಟ್ರ ವ್ಯಾಪಿ ಸಂಘಟನ್ ಸೃಜನ್ ಅಭಿಯಾನ ಹಮ್ಮಿಕೊಂಡಿದೆ. ಪ್ರದಕ್ಷಿಣೆ ರಾಜಕಾರಣವನ್ನು ದೂರವಿಟ್ಟು ಪಕ್ಷದ ನೈಜ ಕಾರ್ಯಕರ್ತರು ಹಾಗೂ ಜನಸಾಮಾನ್ಯರಿಂದ ಮಾಹಿತಿ ಸಂಗ್ರಹಿಸಿ ಜಿಲ್ಲಾ ಕಾಂಗ್ರೆಸ್‍ಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು. ಆರು ಜನರ ಹೆಸರನ್ನು ಆಯ್ಕೆ ಮಾಡಿ ಎಐಸಿಸಿಗೆ ಕಳಿಸಲಾಗುವುದು.
ಅಪ್ಪರ್‍ಭದ್ರಾ, ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ಯೋಜನೆಗೆ ಅನುದಾನದ ಕೊರತೆ, ಬರ ಪರಿಸ್ಥಿತಿ ಕುರಿತು ಕೇಂದ್ರಕ್ಕೆ ಮಾಹಿತಿ ನೀಡಲಾಗುವುದು. ಪಕ್ಷ ಸಂಘಟಿಸುವ ಈ ಪ್ರಕ್ರಿಯೆ ನಿರಂತರವಾಗಿ ನಡೆಯಲಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಆರಕ್ಕೆ ಆರು ಕಾಂಗ್ರೆಸ್ ಗೆಲ್ಲಬೇಕೆಂದರು.
ಇದನ್ನೂ ಓದಿ: ನಾಯಕ ಸಮಾಜದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನ
ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಮುರಳಿಧರ ಹಾಲಪ್ಪ ಮಾತನಾಡುತ್ತ ಕಾರ್ಯಕರ್ತರು ಹಾಗೂ ಮುಖಂಡರುಗಳಿಂದ ಮಾಹಿತಿ ಕಲೆ ಹಾಕಿ ಜಿಲ್ಲಾ ಕಾಂಗ್ರೆಸ್‍ಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು. ರಾಜ್ಯದಲ್ಲಿ ನಲವತ್ತು ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಪಕ್ಷಕ್ಕೆ ಶಕ್ತಿ ತುಂಬುವುದು ಸಂಘಟನ್ ಸೃಜನ್ ಅಭಿಯಾನದ ಉದ್ದೇಶ ಎಂದು ಹೇಳಿದರು.
ಸೈಯದ್ ಅಹಮದ್ ಮಾತನಾಡಿ, ಹೊಸ ನಾಯಕತ್ವ ಸಂಘಟನ್ ಸೃಜನ್ ಅಭಿಯಾನದ ಗುರಿ. ಪಕ್ಷಕ್ಕೆ ಕೆಲಸ ಮಾಡುವ ನೈಜ ಕಾರ್ಯಕರ್ತರಿಗೆ ಆದ್ಯತೆ ನೀಡಲಾಗುವುದು ಇದರಿಂದ ಪಕ್ಷಕ್ಕೆ ಶಕ್ತಿ ತುಂಬಿದಂತಾಗುತ್ತದೆಂದು ನುಡಿದರು.
ಸೌಗಂಧಿಕ ರಘುನಾಥ್ ಮಾತನಾಡುತ್ತ ಚಿತ್ರದುರ್ಗಕ್ಕೆ ಐದು ಮಂದಿ ವೀಕ್ಷಕರನ್ನು ಎಐಸಿಸಿ. ಮತ್ತು ಕೆಪಿಸಿಸಿ.ಯಿಂದ ನೇಮಿಸಿದ್ದು, ಆರು ಹೆಸರುಗಳನ್ನು ಸಂಗ್ರಹಿಸಿ ಅದರಲ್ಲಿ ಒಬ್ಬರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೂರಿಸಲಾಗುವುದು. ಶೇ.33 ರಷ್ಟು ಮಹಿಳೆಯರಿಗೆ ಮೀಸಲಾತಿಯಿರುವುದರಿಂದ ಮಹಿಳೆಯರು ಜಿಲ್ಲಾಧ್ಯಕ್ಷ ಸ್ಥಾನಕೆ ಪೈಪೋಟಿ ನೀಡಬಹುದೆಂದು ತಿಳಿಸಿದರು.
ಇದನ್ನೂ ಓದಿ: ಕೃತಕ ಬುದ್ಧಿಮತ್ತೆ (AI) ವಿಷಯಕ್ಕೆ ಅತಿಥಿ ಶಿಕ್ಷಕರ ನೇಮಕಾತಿ | ಅರ್ಜಿ ಆಹ್ವಾನ
ಎನ್.ರಮೇಶ್ ಮಾತನಾಡಿ ಸಂಘಟನ್ ಸೃಜನ್ ಅಭಿಯಾನ ಪಕ್ಷಕ್ಕೆ ಅತ್ಯಂತ ಮಹತ್ವದ್ದು, ಮುಂಬರುವ ವಿಧಾನಸಭೆ, ಪಾರ್ಲಿಮೆಂಟ್ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿಕೊಂಡು ಬೂತ್ ಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲಾಗುವುದು. ನೀಟ್ ವಿರುದ್ದ ರಾಹುಲ್‍ಗಾಂಧಿ ವಿದ್ಯಾರ್ಥಿಗಳಿಗೆ ಬೆಂಬಲಿಸಿ ಹೋರಾಟಕ್ಕೆ ಇಳಿದ ಪರಿಣಾಮ ಕೇಂದ್ರ ಸಚಿವರ ತಲೆದಂಡವಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷರಾದ ಡಿ.ಟಿ.ವೆಂಕಟೇಶ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ನಂದಿನಿಗೌಡ, ನ್ಯಾಯವಾದಿ ಜಿ.ಎಸ್.ಕುಮಾರ್‍ಗೌಡ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ಅಲ್ಲಾಭಕ್ಷಿ, ಗ್ಯಾರೆಂಟಿ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ಪದವೀಧರ ವಿಭಾಗದ ಅಧ್ಯಕ್ಷ ಪ್ರಕಾಶ್‍ರಾಮನಾಯ್ಕ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅನಂತ್, ರುದ್ರಾಣಿ ಗಂಗಾಧರ್, ಮಧುಪಾಲೆಗೌಡ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

