CHITRADURGA NEWS | 23 SEPTEMBER 2026
ಚಿತ್ರದುರ್ಗ: ನಗರದ ಹೊಳಲ್ಕೆರೆ ರಸ್ತೆಯಲ್ಲಿರುವ ಶ್ರೀ ಗೌರಸಂದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವವು ಸೆಪ್ಟೆಂಬರ್ 25ರಿಂದ ಅಕ್ಟೋಬರ್ 1ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ದೇವಸ್ಥಾನದ ಕಾರ್ಯಕಾರಿ ಸಮಿತಿ ತಿಳಿಸಿದೆ.
ಇದನ್ನೂ ಓದಿ: ಶಿವಕುಮಾರ ಶ್ರೀಗಳ ಶ್ರದ್ಧಾಂಜಲಿಗೆ ಭಾವೈಕ್ಯತೆಯ ದಾಸೋಹ | ಗೌರಮ್ಮನಹಳ್ಳಿ ಮುಸ್ಲಿಂ ಬಾಂಧವರಿಂದ ತರಕಾರಿ ಸಮರ್ಪಣೆ
ಸೆಪ್ಟೆಂಬರ್ 25ರಂದು ರಾತ್ರಿ 7.30ಕ್ಕೆ ‘ಮದಲಿಂಗಿತ್ತಿ’ ಕಾರ್ಯಕ್ರಮ ಹಾಗೂ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಸೆಪ್ಟೆಂಬರ್ 28ರಂದು ರಾತ್ರಿ 11ಕ್ಕೆ ‘ಹೊಳೆಪೂಜೆ’ ನಡೆಯಲಿದೆ.
ಸೆಪ್ಟೆಂಬರ್ 29ರಂದು ಬೆಳಿಗ್ಗೆ 6ರಿಂದ 9ರವರೆಗೆ ‘ಹಿಟ್ಟಿನ ಆರತಿ ಮತ್ತು ಬೇವಿನ ಪೂಜೆ’ ನೆರವೇರಲಿದೆ. ಸೆಪ್ಟೆಂಬರ್ 30ರಂದು ರಾತ್ರಿ 8ಕ್ಕೆ ‘ಅಗ್ನಿಕುಂಡ’ ಕಾರ್ಯಕ್ರಮ ನಡೆಯಲಿದೆ.
ಅಕ್ಟೋಬರ್ 1ರಂದು ಬೆಳಿಗ್ಗೆ 10ಕ್ಕೆ ಓಕಳಿ ಕಾರ್ಯಕ್ರಮ ನಡೆಯಲಿದ್ದು, ಬಳಿಕ ಮುರುಘರಾಜೇಂದ್ರ ಮಠ ಹಾಗೂ ಭಕ್ತಾಧಿಗಳ ಮನೆಗಳಲ್ಲಿ ಪೂಜೆ ಸಲ್ಲಿಸಲಾಗುವುದು.
ಇದನ್ನೂ ಓದಿ: ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಪ್ರತಿಭಟನೆ
ಜಾತ್ರಾ ಮಹೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡು ತನು-ಮನ-ಧನದ ಸಹಕಾರದೊಂದಿಗೆ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಈ. ಚಂದ್ರಶೇಖರ್, ಕಾರ್ಯದರ್ಶಿ ಓ.ಬಿ. ಬಸರಾಜಪ್ಪ, ಅರ್ಚಕ ಪೂಜಾರ್ ಟಿ. ಓಬಳೇಶಪ್ಪ ಹಾಗೂ ಸಹೋದರರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

