
CHITRADURGA NEWS | 07 SEPTEMBER 2025
ಚಿತ್ರದುರ್ಗ: ನಗರದ ಹೊಳಲ್ಕೆರೆ ರಸ್ತೆಯಲ್ಲಿರುವ ಶ್ರೀ ಗೌರಸಂದ್ರ ಮಾರಮ್ಮ ದೇವಿ ಜಾತ್ರಾ ಮಹೋತ್ಸವು ಸೆ.05 ರಿಂದ ಪ್ರಾರಂಭವಾಗಿದ್ದು, ಸೆ.11 ರವರೆಗೆ ಕಾರ್ಯಕ್ರಮ ಜರುಗಲಿದೆ ಎಂದು ಶ್ರೀ ಗೌರಸಂದ್ರ ಮಾರಮ್ಮ ದೇವಸ್ಥಾನ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಈ.ಚಂದ್ರಶೇಖರ್, ಕಾರ್ಯದರ್ಶಿ ಓ.ಬಿ.ಬಸವರಾಜಪ್ಪ, ಅರ್ಚಕರಾದ ಟಿ.ಚಂದ್ರಪ್ಪ, ಕಾರ್ಯಕಾರಿ ಸದಸ್ಯರು ತಿಳಿಸಿದ್ದಾರೆ.
ಸೆ.05 ರಂದು ಶುಕ್ರವಾರ ರಾತ್ರಿ ಅಮ್ಮನವರಿಗೆ ಮಂದಲಿಂಗಿತ್ತಿ ಹಾಗೂ ಭಕ್ತಾಧಿಕಾರಿಗಳಿಗೆ ಅನ್ನಸಂತರ್ಪಣೆ ನಡೆಸಲಾಯಿತು.

ಇದನ್ನೂ ಓದಿ: ಸೆ.09 ರಿಂದ ಉದ್ಯಮಶೀಲತೆ ಸ್ಥಾಪನೆ, ಬೆಳವಣಿಗೆ ಕುರಿತು ಉಚಿತ ತರಬೇತಿ
ಸೆ.08 ರಂದು ಸೋಮವಾರ ರಾತ್ರಿ 11 ಗಂಟೆಗೆ ಹೊಳೆಪೂಜೆ, ಸೆ.09 ರಂದು ಮಂಗಳವಾರ ಬೆಳಗ್ಗೆ 6 ರಿಂದ ರಾತ್ರಿ 9 ರವರೆಗೆ ಹಿಟ್ಟಿನ ಆರತಿ ಮತ್ತು ಬೇವಿನ ಸೀರೆ, ಸೆ.10 ರಂದು ಬುಧವಾರ ರಾತ್ರಿ 8 ಗಂಟೆಗೆ ಅಗ್ನಿಕುಂಡ, ಸೆ.11ರಂದು ಗುರುವಾರ ಬೆಳಗ್ಗೆ 10 ಗಂಟೆಗೆ ಓಕಳಿ ಮತ್ತು ಮುರುಘರಾಜೇಂದ್ರ ಮಠಕ್ಕೆ ಮತ್ತು ಭಕ್ತಾಧಿಗಳ ಮನೆಗಳಲ್ಲಿ ಪೂಜೆ ಸಲ್ಲಿಸಲಾಗುವುದು.
ಶ್ರೀ ಗೌರಸಂದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಿ. ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಗೌರಸಂದ್ರ ಮಾರಮ್ಮ ದೇವಸ್ಥಾನ ಕಾರ್ಯಕಾರಿ ಸಮಿತಿಯ ಕಾರ್ಯಕಾರಿ ಸದಸ್ಯರು ಕೋರಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
